Bihar People's Insight Exit Poll: ಚುನಾವಣೋತ್ತರ ಸಮೀಕ್ಷೆ ಎನ್‌ಡಿಗೆ ಗೆಲುವು, ನಿತೀಶ್ ಕುಮಾರ್ ರಾಜಕೀಯ ಹಿನ್ನೆಲೆ ಏನು ?
ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆ ಆಗುತ್ತಿವೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಇದೀಗ ಬಿಡುಗಡೆಯಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಬಿಹಾರ ವಿಧಾನಸಭೆಯಲ್ಲಿ ಒಟ್ಟು 243 ಕ್ಷೇತ್ರಗಳಿವೆ. ಇದರಲ್ಲಿ ಮ್ಯಾಜಿಕ್ ಸಂಖ್ಯೆ 122 ಆಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಮುನ್ನಡೆ ಸಾಧಿಸಿದೆ ಎಂದು People's Insight ಚುನಾವಣೋತ್ತರ ಸಮೀಕ್ಷೆ ವರದಿ ಮಾಡಿದೆ. ಈ ವರದಿಯ ಪ್ರಕಾರ ಎನ್‌ಡಿಎ ಮೈತ್ರಿ ಕೂಟವು 133ರಿಂದ 148 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮಹಾಘಟಬಂಧನ್ 87ರಿಂದ 102 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಜಿಎಸ್‌ಪಿ 0 -02 ಹಾಗೂ ಪಕ್ಷೇತರರು 03ರಿಂದ 06 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ವರದಿ ಮಾಡಿದೆ.

ನಿತೀಶ್ ಕುಮಾರ್ ರಾಜಕೀಯ ಹಿನ್ನೆಲೆ ಏನು ?
ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ ಅವರದ್ದು ದೊಡ್ಡ ಹೆಸರು. ಬಿಹಾರ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿದ ಅನುಭವ ನಿತೀಶ್ ಕುಮಾರ್ ಅವರಿಗೆ ಇದೆ. ಬಿಹಾರದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ಎನ್ನುವ ಖ್ಯಾತಿಗೂ ಅವರು ಪಾತ್ರರಾಗಿರುವುದು ಇದೆ. ಮೂರು ಬಾರಿ ವಿವಿಧ ಪ್ರಮುಖ ಪಕ್ಷಗಳೊಂದಿಗೆ ಅವರು ಮೈತ್ರಿ ಬದಲಾಯಿಸಿದ ದಾಖಲೆಯೂ ಮತ್ತು ಅಪಖ್ಯಾತಿಯೂ ಅವರಿಗೆ ಇದೆ. ಬಿಜೆಪಿ ಮತ್ತು ಆರ್‌ಜೆಡಿ ನಡುವಿನ ಮೈತ್ರಿಯಲ್ಲಿ ನಿರಂತರ ಬದಲಾವಣೆಯ ನಂತರವೂ 2005 ರಿಂದ ಎಲ್ಲಾ ಚುನಾವಣೆಗಳಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಏಳು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಚಲಾಯಿಸಿದ್ದಾರೆ.
ನಿತೀಶ್ ಕುಮಾರ್ ಅವರು ಜನತಾದಳದ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದರು. 1985ರಲ್ಲಿ ಶಾಸಕರಾಗಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. 1994 ರಲ್ಲಿ ಜನತಾದಳ (ಜಾರ್ಜ್) ಸೃಷ್ಟಿಗೆ ಕಾರಣರಾದರು ಮುಂದೆ ಅದು ಸಮತಾ ಪಕ್ಷ ಎಂದು ಮರುನಾಮಕರಣಗೊಂಡಿತು. 1996 ರಲ್ಲಿ ನಿತೀಶ್ ತಮ್ಮ ನಿಷ್ಠೆಯನ್ನು ಬಿಜೆಪಿಗೆ ಬದಲಾಯಿಸಿಕೊಂಡರು. 2000 ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೆ ಕೇವಲ ಏಳು ದಿನಗಳ ಕಾಲ ಅಧಿಕಾರದಲ್ಲಿದ್ದರು. 2005 ರಲ್ಲಿ ಅವರು ಮತ್ತೆ ಮುಖ್ಯಮಂತ್ರಿಯಾದರು. 2015 ರಲ್ಲಿ ಅವರು ಮತ್ತೆ ಮಹಾಘಟಬಂಧನ್ ಸೇರುವ ಮೂಲಕ ಪಕ್ಷ ಬದಲಾಯಿಸಿದರು ಮತ್ತು ಮತ್ತೆ ಮುಖ್ಯಮಂತ್ರಿಯಾದರು. ಆದರೆ ಈ ಮೈತ್ರ ಹೆಚ್ಚು ಕಾಲ ಉಳಿಯಲಿಲ್ಲ. ಅವರು ಎನ್‌ಡಿಎಗೆ ಮರಳಿದರು ಮತ್ತು 2020 ರಲ್ಲಿ ಮತ್ತೆ ಚುನಾವಣೆಯಲ್ಲಿ ಗೆದ್ದರು ಮತ್ತು ಮತ್ತೆ ಮುಖ್ಯಮಂತ್ರಿಯಾದರು!
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೊಂದಿಗೆ ಮೈತ್ರಿ: ನಿತೀಶ್ ಕುಮಾರ್ ಅವರನ್ನು ಅವಕಾಶವಾದಿ ಎಂದು ಕರೆಯುವುದು ಸಹ ಇದೆ. ನಿತೀಶ್ ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ರಾಜಕೀಯ ಮಾಡಿರುವುದೇ ಇದಕ್ಕೆ ಪ್ರಮುಖ ಕಾರಣ. ನಿತೀಶ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಭಾಗವಾಗಿದ್ದಾರೆ. 2024 ಲೋಕಸಭೆ ಚುನಾವಣೆ ಪೂರ್ವದಲ್ಲಿ ಅವರು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications