ಬಿಹಾರ: ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಕ್ಯಾಂಡಿಕ್ರಶ್ ಆಡಿದ ಪೊಲೀಸರು!
ಪಾಟ್ನಾ (ಬಿಹಾರ್), ಜೂನ್ 29: ರೋಮ್ ಹೊತ್ತಿ ಉರಿಯುತ್ತಿದ್ದರೆ ನಿರೋ ಪಿಟಿಲು ಭಾರಿಸುತ್ತಿದ್ದನಂತೆ! ಅಂಥದೇ ಒಂದು ಘಟನೆ ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.
ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಬಿಹಾರದಲ್ಲಿ ನಡೆಯುತ್ತಿರುವ ಸಂಘಟಿತ ಅಪರಾಧಗಲ ಕುರಿತು ಪಾಟ್ನಾದಲ್ಲಿ ನಡೆಯುತ್ತಿದ್ದ ಸೆಮಿನಾರ್ ವೊಂದರಲ್ಲಿ ಭಾಗವಹಿಸಿದ್ದ ಇಬ್ಬರು ಪೊಲೀಸರು ತಮ್ಮ ಮೊಬೈಲ್ ಫೋನಿನಲ್ಲಿ ಕ್ಯಾಂಡಿ ಕ್ರಶ್ ಆಡುತ್ತಿದ್ದುದು ಬೆಳಕಿಗೆ ಬಂದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಈ ಗಂಭೀರ ಕಾರ್ಯಕ್ರಮದಲ್ಲಿ ಬಿಹಾರದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಇನ್ನಿತರ ಅಪರಾಧ ಪ್ರಕರಣಗಳನ್ನು ನಿಯತ್ರಣ ತರುವುದು ಹೇಗೆ ಎಂಬ ಬಗ್ಗೆ ಗಂಭಿರ ಚರ್ಚೆ ನಡೆಯುತ್ತಿತ್ತು.

ಇಂಥ ಪ್ರಮುಖ ವಿಷಯ ಚರ್ಚೆಯಾಗುತ್ತಿದ್ದ ಸಮಯದಲ್ಲಿ ಕ್ಯಾಂಡಿಕ್ರಶ್ ಆಡುತ್ತಿದ್ದ ಪೊಲಿಸರ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಪೊಲೀಸರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.












Click it and Unblock the Notifications