Bihar Ram Navami violence: ಬಿಹಾರದಲ್ಲಿ ಶಾಲೆಗಳು ಬಂದ್, 1 ಸಾವು, 100ಕ್ಕೂ ಹೆಚ್ಚು ಬಂಧನ!
ಪಾಟ್ನಾ ಏಪ್ರಿಲ್ 3: ರಾಮ ನವಮಿಯ ನಂತರ ದೇಶದ ಹಲವೆಡೆ ಹಿಂಸಾಚಾರ ಮುಂದುವರೆದಿದೆ. ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳಲ್ಲಿ ಹೊಸ ಹಿಂಸಾಚಾರ ವರದಿಯಾಗಿದೆ. ಭಾನುವಾರವೂ ಬಿಹಾರದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಜೊತೆಗೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಿಹಾರ ಶರೀಫ್‌ನಲ್ಲಿ ನಿಷೇಧಾಜ್ಞೆಗಳನ್ನು ಜಾರಿಯೊಳಿಸಿದ್ದಾರೆ.
कल शाम 9 बजे 6 व्यक्तियों के जख्मी होने की सूचना के सत्यापन के दौरान पाया गया है कि वे अवैध विस्फोटक handling के दौरान स्वयं घायल हुए थे.घटना स्थल एक निजी मकान का अहाता है जहां फॉरेंसिक टीम जांच कर रही है.2 गिरफ्तारी की गयी है.बल दंडाधिकारी प्रतिनियुक्त हैं.अफ़वाह पर ध्यान न दें
— Rohtas Police (@RohtasPolice) April 1, 2023
ಎರಡೂ ಪಟ್ಟಣಗಳಲ್ಲಿ ವರದಿಯಾದ ಕೋಮು ಗಲಭೆಗಳಲ್ಲಿ ವಾಹನಗಳು, ಮನೆಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಘರ್ಷಣೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಿಹಾರ ಷರೀಫ್ ಮತ್ತು ನಳಂದಾದಲ್ಲಿ ಒಟ್ಟು 112 ಜನರನ್ನು ಬಂಧಿಸಲಾಗಿದೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಮ್ ಪಟ್ಟಣದಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಏಪ್ರಿಲ್ 4 ರವರೆಗೆ ಮುಚ್ಚಲ್ಪಟ್ಟಿವೆ. ಅದರೊಂದಿಗೆ ಎಲ್ಲಾ ಕೋಚಿಂಗ್ ಸಂಸ್ಥೆಗಳು ಸಹ ಮುಚ್ಚಲ್ಪಡುತ್ತವೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಂಸಾಚಾರದ ಕುರಿತು ಉನ್ನತ ಮಟ್ಟದ ಸಭೆ ಕರೆದಿದ್ದರು. ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಮಾಜವಿರೋಧಿಗಳನ್ನು ಗುರುತಿಸಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ಜಾಗರೂಕರಾಗಿರಲು ಪೊಲೀಸರಿಗೆ ಸೂಚಿಸಿದರು. ವದಂತಿಗಳನ್ನು ಹರಡುವವರ ಮೇಲೆ ನಿಗಾ ಇಡಲು ಮತ್ತು ತಪ್ಪು ಮಾಹಿತಿಯನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
|
ಸಸಾರಾಮ್‌ನಲ್ಲಿ 6 ಮಂದಿಗೆ ಗಾಯ
ಬಿಹಾರದಲ್ಲಿ ಶನಿವಾರ ಅಕ್ರಮ ಬಾಂಬ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಶೇರ್ಗಂಜ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಿಹಾರ ಪೊಲೀಸರ ಪ್ರಕಾರ, ಸ್ಫೋಟವು ಗುಡಿಸಲುಗಳಲ್ಲಿ ಸಂಭವಿಸಿದೆ. ಆ ಪ್ರದೇಶದಿಂದ ಒಂದು ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕವಾಗಿ ಇದು ಕೋಮು ಘಟನೆಯಾಗಿ ಕಂಡುಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರವೂ ಸಸಾರಾಮ್‌ನಲ್ಲಿ ಉದ್ವಿಗ್ನತೆ ನೆಲೆಸಿದೆ. ಆದರೆ ಬಿಹಾರಶರೀಫ್ ಆಡಳಿತವು ಶನಿವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಹೊಸ ಘರ್ಷಣೆಗಳು ವರದಿಯಾಗಿಲ್ಲ ಎಂದು ಹೇಳಿಕೊಂಡಿದೆ.
"ಗಾಯಗೊಂಡವರನ್ನು ಬಿಎಚ್‌ಯು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಇದೀಗ ಎಲ್ಲಾ ಕೋನಗಳಿಂದ ತನಿಖೆ ಮಾಡುತ್ತಿದ್ದೇವೆ. ಸ್ಫೋಟದ ಕಾರಣ ತಿಳಿದಿಲ್ಲ" ಎಂದು ಸಸಾರಾಮ್ ಡಿಎಂ ಧರ್ಮೇಂದ್ರ ಕುಮಾರ್ ಎಎನ್‌ಐಗೆ ತಿಳಿಸಿದರು.
ಪೊಲೀಸರ ಪ್ರಕಾರ, ಇದುವರೆಗೆ 32 ಜನರನ್ನು ಬಂಧಿಸಲಾಗಿದೆ, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಸಾರಾಮ್‌ನಲ್ಲಿ ಶಾ ಜಲಾಲ್‌ಪೀರ್, ಖಾದಿರ್‌ಗಂಜ್, ಗೋಲಾ ರಸ್ತೆ, ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಶೇರ್‌ಗಾಂಗ್ ಹಿಂಸಾಚಾರ ಪೀಡಿತ ಪ್ರದೇಶಗಳಾಗಿವೆ. ಈ ಪ್ರದೇಶದಲ್ಲಿ CrPc ಯ ಸೆಕ್ಷನ್ 144 ಅನ್ನು ವಿಧಿಸಲಾಗಿಲ್ಲ.
|
ನಳಂದದಲ್ಲಿ 80 ಮಂದಿ ಬಂಧನ
ರಾಮನವಮಿ ಹಬ್ಬದ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾದ ಹಿನ್ನೆಲೆಯಲ್ಲಿ ನಳಂದಾದಲ್ಲಿ 80 ಜನರನ್ನು ಬಂಧಿಸಲಾಗಿದೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಕಳೆದ ರಾತ್ರಿ ನಳಂದ ಜಿಲ್ಲೆಯ ಬಿಹಾರ್‌ಷರೀಫ್‌ನಲ್ಲಿ ಹೊಸ ಘರ್ಷಣೆಗಳು ನಡೆದಿವೆ.
"ಸದ್ಯ ಪರಿಸ್ಥಿತಿ ಸಾಮಾನ್ಯವಾಗಿದೆ. ಪ್ರದೇಶದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ನಗರದಾದ್ಯಂತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ" ಎಂದು ಎಸ್‌ಐ ಸುರೇಂದ್ರ ಪಾಸ್ವಾನ್ ಎಎನ್‌ಐಗೆ ತಿಳಿಸಿದ್ದಾರೆ.
"ಕಳೆದ ರಾತ್ರಿ ಬಿಹಾರಶರೀಫ್‌ನಲ್ಲಿ 2-3 ಸ್ಥಳಗಳಲ್ಲಿ ಹೊಸ ಘಟನೆಗಳು ಸಂಭವಿಸಿವೆ. ಇದೀಗ ಪರಿಸ್ಥಿತಿ ಶಾಂತವಾಗಿದೆ. ಸೆಕ್ಷನ್ 144 ವಿಧಿಸಲಾಗಿದೆ. ಅನೇಕ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ, ಇದುವರೆಗೆ 80 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ" ಎಂದು ಡಿಎಂ ನಳಂದ ಶಶಾಂಕ್ ಶುಭಂಕರ್ ANI ಗೆ ಉಲ್ಲೇಖಿಸಿದ್ದಾರೆ. ಹೇಳುತ್ತಿದ್ದರಂತೆ.
ಬಿಹಾರ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಹಿಂಸಾಚಾರದಿಂದ ಉದ್ಭವಿಸುವ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಆಡಳಿತಕ್ಕೆ ಸಹಾಯ ಮಾಡಲು ಹೆಚ್ಚುವರಿ ಅರೆಸೇನಾ ಪಡೆಗಳನ್ನು ಬಿಹಾರಕ್ಕೆ ಕಳುಹಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ನಳಂದದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳೆಂದರೆ: ಪಹರ್‌ಪುರ, ಗಗಂಡಿವಾನ್, ಕಾಶಿ ಟಾಕಿಯಾ, ಸೊಹ್ಸರೈ, ಬನೌಲಿಯಾ, ಖಾಸ್‌ಗಂಜ್ ಲಾಹೇರಿ ಮತ್ತು ಬಿಹಾರ ಪೊಲೀಸ್ ಠಾಣೆಗಳ ವ್ಯಾಪ್ತಿ.
|
ಅರೆಸೇನಾ ಪಡೆಗಳನ್ನು ನಿಯೋಜನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಕರೆ ಮಾಡಿದ್ದಾರೆ. ಹಿಂಸಾಚಾರ ಪೀಡಿತ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರ ಅರೆಸೇನಾ ಪಡೆಗಳನ್ನು ನಿಯೋಜಿಸಲಿದ್ದು, ಅರೆಸೇನಾ ಪಡೆಗಳ ಕೆಲವು ತಂಡಗಳು ಆಗಮಿಸಿವೆ.
ಗೃಹ ಸಚಿವರು ಬಿಹಾರ ರಾಜ್ಯಪಾಲರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಗೃಹ ಸಚಿವರು ಕಳವಳ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ರಾಜ್ಯಪಾಲರು ಶಾ ಅವರಿಗೆ ಮಾಹಿತಿ ನೀಡಿದ್ದಾರೆ.
|
ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಹಾರ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಮತ್ತು ಬಿಹಾರವೂ ಅದನ್ನೇ ಅನುಸರಿಸುತ್ತಿದೆ. ಬಿಹಾರ ಮತ್ತು ಸಸಾರಾಮ್‌ನಲ್ಲಿ ನಡೆದ ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತದೆ. ಬಾಂಬ್ ಸ್ಫೋಟದಿಂದ ಸಸಾರಾಮ್ ತತ್ತರಿಸಿದೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ವಕ್ತಾರ ಅಸಿತ್ ನಾಥ್ ತಿವಾರಿ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು, "ಅಮಿತ್ ಶಾ ಬಿಹಾರದ ಮೇಲೆ ಬಾಂಬ್ ಹಾಕಬೇಕು, ಬಿಹಾರದ ಜನರು ತಮಗೆ ಮತ ನೀಡದ ಕಾರಣ ಬಿಜೆಪಿ ಅಸಮಾಧಾನಗೊಂಡಿದೆ, ಏಕೆ?'' ಎಂದು ಕೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಸಿಂಗ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, "ಈ ಹಿಂದೆಯೂ ರಾಮನವಮಿಯಂದು ಮೆರವಣಿಗೆಗಳನ್ನು ನಡೆಸಲಾಯಿತು ಆದರೆ ಆಗ ಯಾವುದೇ ಹಿಂಸಾಚಾರ ನಡೆದಿಲ್ಲ, ಈಗ ಇದೆಲ್ಲ ನಡೆಯುತ್ತಿದೆ ಏಕೆಂದರೆ 2024 ಚುನಾವಣೆ ಹತ್ತಿರ ಬರುತ್ತಿದೆ."
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications