ಬಿಹಾರ: ಪವಿತ್ರ ಶ್ರಾವಣ ಆಚರಣೆಯಲ್ಲಿ ಕಾಲ್ತುಳಿತ: ಪಶ್ಚಿಮ ಬಂಗಾಳದಲ್ಲಿ ಭಾರೀ ಬೆಂಕಿ ಅವಘಡ, 2 ಪ್ರಕರಣಗಳಲ್ಲಿ 14 ಜನ ಸಾವು!

ದೇಶದ ಎರಡು ಪ್ರಮುಖ ರಾಜ್ಯಗಳಲ್ಲಿ ಭಾರೀ ಅವಘಡಗಳು ಸಂಭವಿಸಿದೆ. ಬಿಹಾರದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿದ್ದರೆ, ಪಶ್ಚಿಮ ಬಂಗಾಳದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಬಿಹಾರದ ಲಖಿಸರೈನಲ್ಲಿರುವ ಅಶೋಕ ಧಾಮ ದೇವಾಲಯದಲ್ಲಿ ಸೋಮವಾರ ಶ್ರಾವಣ ಮಾಸದ ಮೂರನೇ ಸೋಮವಾರದಂದು (ಶ್ರಾವಣ ಮಾಸದ ಮೂರನೇ ಸೋಮವಾರ) ವಿಶೇಷ ಪೂಜೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಭಾರೀ ಜನ ಸಂಖ್ಯೆ ಸೇರಿದ್ದು, ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪವಿತ್ರ ಶ್ರಾವಣ ಮಾಸದ ಮೂರನೇ ಸೋಮವಾರದಂದು ಶಿವನಿಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಜಲಭಿಷೇಕ (ಜಲ ಅರ್ಪಣೆ) ಮಾಡಲು ದೇವಾಲಯದಲ್ಲಿ ಆಗಸ್ಟ್‌ 17ರ ಸೋಮವಾರ 50,000ಕ್ಕೂ ಹೆಚ್ಚು ಭಕ್ತರು ಇಲ್ಲಿ ಸೇರಿದ್ದರು. ದೇವಸ್ಥಾನದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಬೆಳಿಗ್ಗೆ 6:30-6:45 ರ ಸುಮಾರಿಗೆ ಎರಡು ರೈಲುಗಳಲ್ಲಿ ಸಾವಿರಾರು ಜನ ಬಂದಿದ್ದರು. ಇದು ಜನದಟ್ಟಣೆಯನ್ನು ಮತ್ತಷ್ಟು ಹೆಚ್ಚಿಸಿತು. ಹೆಚ್ಚು ಜನ ಸೇರುವ ಸಾಧ್ಯತೆ ಇರುವುದರಿಂದ ಮೊದಲೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜನಸಂದಣಿಯಿಂದಾಗಿ ಒಂದು ಬದಿಯಲ್ಲಿ ಬ್ಯಾರಿಕೇಡ್ ಮುರಿದು ಜನ ಒಳಗೆ ನುಗ್ಗಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Stampede

ಇಲ್ಲಿನ ಅಶೋಕ್ ಧಾಮ್ ರೈಲು ನಿಲ್ದಾಣವನ್ನು ದೇವಾಲಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿದೆ. ಅಲ್ಲದೆ ಕಾಲ್ತುಳಿತಕ್ಕೆ ವದಂತಿಯೂ ಕಾರಣ ಎಂದು ಹೇಳಲಾಗಿದೆ. ಈ ಭಾಗದಲ್ಲಿ ರಾತ್ರಿ ಬಿದ್ದಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನುವ ವದಂತಿಯೂ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಭಕ್ತರು ಬೇರೆ ಬೇರೆ ದಿಕ್ಕುಗಳಲ್ಲಿ ಓಡಲು ಪ್ರಾರಂಭಿಸಿದಾಗ, ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು, ಇದು ಭಕ್ತರಲ್ಲಿ ಭಯ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಗೊಂದಲದ ನಡುವೆ ಹಲವಾರು ಜನರು ಒಬ್ಬರ ಮೇಲೊಬ್ಬರು ಬಿದ್ದರು ಮತ್ತು ಸ್ಥಳೀಯ ನಿವಾಸಿಗಳು ಮತ್ತು ಇತರ ಭಕ್ತರು ಜನಸಂದಣಿಯಲ್ಲಿ ಸಿಲುಕಿಕೊಂಡವರಿಗೆ ಸಹಾಯ ಮಾಡಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡ ಭಕ್ತರೆಲ್ಲರೂ ಮಹಿಳೆಯರಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಭಾರೀ ಬೆಂಕಿ ಅವಘಡ

ಇನ್ನು ಪಶ್ಚಿಮ ಬಂಗಾಳದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳದ ತಾರಾಪೀಠದಲ್ಲಿರುವ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು 7 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ದೇವಾಲಯ ಪಟ್ಟಣವಾದ ತಾರಾಪೀಠದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಸೋಮವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜನರು ನಿದ್ರಿಸುವಾಗ ಈ ಬೆಂಕಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ರಾಂಪುರ್‌ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೋಟೆಲ್ ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭದಲ್ಲಿ ಐದು ಜನರು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಾವಿನ ಸಂಖ್ಯೆ ಏಳಕ್ಕೆ ಹೆಚ್ಚಳವಾಗಿದೆ. ಬೆಂಕಿಯಿಂದ ಪಾರಾದ ಕೋಲ್ಕತ್ತಾದ ಮಹಿಳೆಯೊಬ್ಬರು ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಕಟ್ಟಡವು ಇದ್ದಕ್ಕಿದ್ದಂತೆ ಹೊಗೆಯಿಂದ ತುಂಬಿತ್ತು, ಉಸಿರಾಡಲು ಮತ್ತು ಹೊರಗೆ ಬರುವುದಕ್ಕೆ ತುಂಬಾ ಕಷ್ಟವಾಯಿತು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+