ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೋದ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯ: 44 ಮಂದಿ ಬಂಧನ
ಪಾಟ್ನಾ, ಏಪ್ರಿಲ್. 17: ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿ ಎಷ್ಟು ಹಾಳಾಗಿದೆ ಎಂಬುದನ್ನು ಪದೇ ಪದೇ ಅಲ್ಲಿನ ಘಟನೆಗಳು ಸಾಬೀತುಪಡಿಸುತ್ತಿವೆ. ಜನಸಾಮಾನ್ಯರಿರಲಿ, ಸರ್ಕಾರಿ ಅಧಿಕಾರಿಗಳೆ ಇರಲಿ ದೌರ್ಜನ್ಯಕ್ಕೆ, ಹಲ್ಲೆಗೆ ಒಳಗಾಗುವುದು ತಪ್ಪುವುದಿಲ್ಲ. ಈಗ ಮತ್ತೊಂದು ಪ್ರಕರಣದಲ್ಲಿ ಪಾಟ್ನಾ ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ.
ಸಂತ್ರಸ್ತೆ ಮಹಿಳೆಯನ್ನು ರಾಜ್ಯದ ಗಣಿಗಾರಿಕೆ ಇಲಾಖೆಯಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿ ಎಂದು ಹೇಳಲಾಗಿದೆ. ಪಾಟ್ನಾದ ಬಿಹ್ತಾ ಪಟ್ಟಣದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪದ ಮೇಲೆ ಸ್ಥಳಕ್ಕೆ ಭೇಟಿ ನೀಡಿದ್ದ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಆಕೆಯ ಜುಟ್ಟು ಹಿಡಿದು ರಸ್ತೆಯ ಮೇಲೆ ಎಳೆದಾಡಿ ಹಲ್ಲೆ ಮಾಡಿದ್ದಾರೆ.

ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 44 ಜನರನ್ನು ಬಂಧಿಸಲಾಗಿದ್ದು, ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ. ಘಟನೆಯಲ್ಲಿ ಭಾಗಿಯಾಗಿದ್ದ ಇನ್ನು ಹಲವರನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
#WATCH | Bihar: Woman officer from mining department dragged, attacked by people allegedly involved in illegal sand mining in Bihta town in Patna district.
— ANI (@ANI) April 17, 2023
(Note: Abusive language; viral video confirmed by police)
44 people arrested, 3 FIRs filed while raids underway to arrest… pic.twitter.com/EtKW1oedG3
ಸಾಮಾಜಿಕ ಮಾಧ್ಯಮಗಳಲ್ಲಿ ಹಲ್ಲೆಯ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ವಿಡಿಯೋದಲ್ಲಿ ಜನರ ದೊಡ್ಡ ಗುಂಪು ಮಹಿಳಾ ಅಧಿಕಾರಿಯ ಮೇಲೆ ಕಲ್ಲುಗಳನ್ನು ಎಸೆಯುವುದು, ಮತ್ತೊಬ್ಬ ವ್ಯಕ್ತಿ ಅವರನ್ನು ಎಳೆದುಕೊಂಡು ಹೋಗುವುದು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿ ಸೇರಿದಂತೆ ಹಲವರು ಆಕೆಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಮಹಿಳಾ ಅಧಿಕಾರಿ ತನ್ನ ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವುದನ್ನು ಕಾಣಬಹುದು. ಘಟನೆಯ ವಿಡಿಯೋವನ್ನು ಪೊಲೀಸರು ಖಚಿತಪಡಿಸಿದ್ದಾರೆ.
"ಈ ಪ್ರದೇಶದಲ್ಲಿ ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸುತ್ತಿದ್ದ ಜಿಲ್ಲಾ ಗಣಿಗಾರಿಕೆ ಅಧಿಕಾರಿ ಮೇಲೆ ಸಮಾಜ ವಿರೋಧಿಗಳ ಗುಂಪು ದಾಳಿ ನಡೆಸಿದೆ. ಘಟನೆ ಸಂಬಂಧ 44 ಮಂದಿಯನ್ನು ಬಂಧಿಸಲಾಗಿದ್ದು, ಜಿಲ್ಲಾ ಗಣಿ ಅಧಿಕಾರಿ ಮತ್ತು ಇಬ್ಬರು ಗಣಿ ನಿರೀಕ್ಷಕರು ಸೇರಿದಂತೆ 3 ಮಂದಿ ಗಾಯಗೊಂಡಿದ್ದಾರೆ" ಎಂದು ಪಾಟ್ನಾ (ಪಶ್ಚಿಮ) ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications