Viral Video: ಬೈಕ್‌ ಮೇಲೆ ಕುಳಿತಿದ್ದ ಮಹಿಳೆಯ ಖಾಸಗಿ ಭಾಗ ಮುಟ್ಟಿ ಲೈಂಗಿಕ ಕಿರುಕುಳ: ಪುಂಡರ ವಿಡಿಯೋ ವೈರಲ್‌

ಜನನಿಬಿಡ ರಸ್ತೆಯಲ್ಲಿ ಬೈಕ್‌ ಮೇಲೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಬೈಕ್ ಸವಾರನೊಬ್ಬ ಬಹಿರಂಗವಾಗಿಯೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಇಡೀ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿರುವ ಈ ಘಟನೆಗೆ ಕಾನೂನು ಸುವ್ಯವಸ್ಥೆಯನ್ನು ಅಣಕಿಸುವಂತಿದೆ ಎಂಬ ಖಂಡನೆ ವ್ಯಕ್ತವಾಗುತ್ತಿದೆ.

ನಡುರಸ್ತೆಯಲ್ಲೇ ಕೃತ್ಯ

ವೈರಲ್ ವಿಡಿಯೋದಲ್ಲಿ ಕಂಡುಬರುವಂತೆ, ಮಹಿಳೆಯೊಬ್ಬರು ಬೈಕ್‌ನಲ್ಲಿ ಸಂಚಾರ ದಟ್ಟಣೆಯಿರುವ ರಸ್ತೆಯಲ್ಲಿ ಸಾಗುತ್ತಿರುತ್ತಾರೆ. ಈ ವೇಳೆ ಹಿಂದಿನಿಂದ ಬರುವ ಬೈಕ್ ಸವಾರನೊಬ್ಬ ಆಕೆಯ ಹತ್ತಿರಕ್ಕೆ ಬಂದು, ಅಸಭ್ಯವಾಗಿ ಖಾಸಗಿ ಭಾಗವನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡುತ್ತಾನೆ. ಈ ಕಿರುಕುಳದಿಂದ ಬೆಚ್ಚಿಬಿದ್ದ ಮಹಿಳೆಯು ಆತನಿಗೆ ಹೊಡೆಯಲು ಯತ್ನಿಸುತ್ತಾರೆ. ಆದರೆ, ಅಷ್ಟರಲ್ಲೇ ಆ ಪುಂಡ ಅಲ್ಲಿಂದ ವೇಗವಾಗಿ ಪರಾರಿಯಾಗಿದ್ದಾನೆ.

Bike Harassment

ಸುತ್ತಮುತ್ತ ನೂರಾರು ವಾಹನಗಳು ಚಲಿಸುತ್ತಿದ್ದರೂ, ಯಾವುದೇ ಭಯವಿಲ್ಲದೆ ಹಾಡಹಗಲೇ ಇಂತಹ ಅಸಭ್ಯ ಕೃತ್ಯ ಎಸಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಮಹಿಳೆಯರಿಗೆ ಸಾರ್ವಜನಿಕ ಸ್ಥಳಗಳಲ್ಲಿ ರಕ್ಷಣೆಯೇ ಇಲ್ಲದಂತಾಗಿದೆ ಎಂದು ನೆಟ್ಟಿಗರು ಅಲ್ಲಿನ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಘಟನೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಜೈಪುರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಘಟನೆಯ ಕುರಿತು ತನಿಖೆ ಆರಂಭಿಸಿರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವೈರಲ್ ವಿಡಿಯೋದಲ್ಲಿನ ಬೈಕ್‌ನ ನಂಬರ್ ಪ್ಲೇಟ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಈವರೆಗೆ ಯಾವುದೇ ಬಂಧನವಾಗಿಲ್ಲವಾದರೂ, ಶೀಘ್ರದಲ್ಲೇ ಆರೋಪಿಯನ್ನು ಪತ್ತೆಹಚ್ಚುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ತನಿಖಾ ಸಂಸ್ಥೆಗಳಿಂದ ಕ್ರಮ

ಮಹಿಳೆಗೆ ಬೈಕ್ ಸವಾರ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈಗ ಕೇಂದ್ರ ಮಟ್ಟದ ತನಿಖಾ ಸಂಸ್ಥೆಗಳು ಮಧ್ಯಪ್ರವೇಶಿಸಿವೆ. ರಾಷ್ಟ್ರೀಯ ಅಪರಾಧ ತನಿಖಾ ದಳ (NCIB) ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ಸೂಚಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಗಮನಿಸಿದ ಎನ್‌ಸಿಐಬಿ, ಜೈಪುರ ಪೊಲೀಸರಿಗೆ ತುರ್ತು ನೋಟಿಸ್ ನೀಡಿದೆ. ಈ ಘಟನೆಯು ಅತ್ಯಂತ ಆಘಾತಕಾರಿ ಮತ್ತು ಅಸಹನೀಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ಭಾವನೆಯನ್ನು ಇಂತಹ ಕೃತ್ಯಗಳು ಕುಗ್ಗಿಸುತ್ತವೆ ಎಂದು ಸಂಸ್ಥೆ ಆತಂಕ ವ್ಯಕ್ತಪಡಿಸಿದೆ. ಕೂಡಲೇ ಆರೋಪಿಯನ್ನು ಗುರುತಿಸಿ ಆತನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅದು ತಾಕೀತು ಮಾಡಿದೆ.

ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ, ಅದರಲ್ಲೂ ವಿಶೇಷವಾಗಿ ಮಹಿಳೆಯರಲ್ಲಿ ಸುರಕ್ಷತೆಯ ಬಗ್ಗೆ ವಿಶ್ವಾಸವನ್ನು ಮರುಸ್ಥಾಪಿಸುವುದು ಅಗತ್ಯವಾಗಿದೆ ಎಂದು ಎನ್‌ಸಿಐಬಿ ಹೇಳಿದೆ. ಇಂತಹ ಪುಂಡರು ಬಹಿರಂಗವಾಗಿ ತಿರುಗಾಡುವುದು ಸಮಾಜಕ್ಕೆ ಮಾರಕ ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೈಪುರ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಂತ್ರಿಕ ತಂಡಗಳು ಮತ್ತು ಸಿಸಿಟಿವಿ ವಿಶ್ಲೇಷಕರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ. ಜೈಪುರದ ಈ ಘಟನೆಯು ದೇಶಾದ್ಯಂತ ಮಹಿಳಾ ಸುರಕ್ಷತೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದು, ಆರೋಪಿಯ ಬಂಧನಕ್ಕಾಗಿ ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+