9 ದಿನದಿಂದ ಸುರಂಗದಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ರಕ್ಷಣೆ
ಶಿಮ್ಲಾ, ಸೆಪ್ಟೆಂಬರ್. 22: 9 ದಿನಗಳಿಂದ ಸುರಂಗದಲ್ಲಿ ಸಿಕ್ಕಿಹಾಕಿಕೊಂಡು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದ ಬಿಲಾಸ್ ಪುರದಲ್ಲಿ ಕಾರ್ಮಿಕರಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಸುರಂಗದಲ್ಲಿ ಸಿಲುಕಿಕೊಂಡಿರುವ ಮತ್ತೊಬ್ಬ ಕಾರ್ಮಿಕನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಸೆಪ್ಟೆಂಬರ್ 12ರಂದು ನಿರ್ಮಾಣ ಹಂತದಲ್ಲಿದ್ದ ಸುರಂಗಮಾರ್ಗ ಕುಸಿದ ಪರಿಣಾಮ ಮೂವರು ಕಾರ್ಮಿಕರು ಒಳಗಡೆಯೇ ಸಿಲುಕಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ವಿಪತ್ತು ನಿರ್ವಾಹಣಾ ದಳ ಇಬ್ಬರು ಕಾರ್ಮಿಕರನ್ನು ರಕ್ಷಿಸಿದೆ.[ಆಂಜನೇಯ ಮನೆ ಮುಂದಿನ ಮ್ಯಾನ್ ಹೋಲ್‌ಗೆ ಇಬ್ಬರು ಬಲಿ]

ರಕ್ಷಣಾ ಕಾರ್ಯಾಚರಣೆ ವೇಳೆ ರವಾನಿಸಿದ್ದ ಕ್ಯಾಮರಾದಲ್ಲಿ ಇಬ್ಬರು ಕಾರ್ಮಿಕರು ಮಾತನಾಡುತ್ತಿದ್ದದ್ದು, ರಕ್ಷಣೆಗೆ ಅಂಗಲಾಚುತ್ತಿದ್ದ ದೃಶ್ಯ ಸೆರೆಯಾಗಿತ್ತು. ಇನ್ನು ಏಳು ಎಂಟು ದಿನ ಬದುಕುವ ಸಾಮರ್ಥ್ಯ ಹೊಂದಿದ್ದೇವೆ ಎಂದು ಕಾರ್ಮಿಕರು ಹೇಳಿದ್ದರು.[ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ವಿಮೆ]
ಮತ್ತೊಬ್ಬ ಕಾರ್ಮಿಕ ಪತ್ತೆಯಾಗುವವರೆಗೂ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಿಳಿಸಿದ್ದಾರೆ. ಬಿಲಾಸ್ ಪುರದಲ್ಲಿ 1,200 ಮೀಟರ್ ಉದ್ದದ ಸುರಂಗ ಮಾರ್ಗ ನಿರ್ಮಾಣ ಮಾಡುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದರು.












Click it and Unblock the Notifications