ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳ ಬಿಡುಗಡೆ: ಹೊಸ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 21: ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳನ್ನು ಗುಜರಾತ್‌ ಸರ್ಕಾರವು ಬಿಡುಗಡೆ ಮಾಡಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಒಪ್ಪಿಗೆ ನೀಡಿದೆ.

2002ರ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಲ್ಲಲಾಗಿತ್ತು. ಈ ಅಮಾನವೀಯ ಪ್ರಕರಣದ ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಮಹಿಳಾ ಸಂಘಟನೆಯೊಂದು ಸಲ್ಲಿಸಿದ ಹೊಸ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

 ಬಿಜೆಪಿಗೆ ಎಎಪಿ ಸವಾಲು, ಕಾಂಗ್ರೆಸ್‌ ಮೌನ: ಗುಜರಾತ್‌ ರಾಜಕಾರಣದಲ್ಲಿ ಅಚ್ಚರಿಯ ಹೆಜ್ಜೆಗಳು ಬಿಜೆಪಿಗೆ ಎಎಪಿ ಸವಾಲು, ಕಾಂಗ್ರೆಸ್‌ ಮೌನ: ಗುಜರಾತ್‌ ರಾಜಕಾರಣದಲ್ಲಿ ಅಚ್ಚರಿಯ ಹೆಜ್ಜೆಗಳು

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ. ರವಿಕುಮಾರ್ ಅವರನ್ನು ಒಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.

Bilkis Bano case Supreme Court agrees to hear fresh plea challenging remission granted to convicts

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಶಿಕ್ಷೆ ಮತ್ತು ಬಿಡುಗಡೆಯನ್ನು ಪ್ರಶ್ನಿಸಿ 'ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್' ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಲಿದೆ.

ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ

ಗುಜರಾತ್‌ನ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಇತ್ತೆಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ನೀಡಿತ್ತು.
ಗುಜರಾತ್‌ ಸರ್ಕಾರದ ಅಫಿಡವಿಟ್‌ಗೆ ಪ್ರತಿಕ್ರಿಯೆ ನೀಡುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್‌ ತಿಳಿಸಿದೆ. ಈ ಪ್ರಕರಣದ ವಿಚಾರಣೆಯನ್ನು ನವೆಂಬರ್‌ 29ರಂದು ನಡೆಸಲಾಗುವುದು ಎಂದು ಕೋರ್ಟ್‌ ಹೇಳಿದೆ.

ಗೋದ್ರೋತ್ತರ ಹತ್ಯಾಕಾಂಡದಲ್ಲಿ ಬಿಲ್ಕಿನ್‌ ಬಾನೊ ಅತ್ಯಾಚಾರ

ಗೋಧ್ರಾ ಹತ್ಯಾಕಾಂಡದ ಬಳಿಕ ಗುಜರಾತ್‌ನಲ್ಲಿ ವ್ಯಾಪಕ ಕೋಮುಗಲಭೆ ನಡೆದಿತ್ತು. ಆಗ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಆಕೆಯ ಪರಿವಾರದ ಏಳು ಸದಸ್ಯರನ್ನು ದುರುಳರು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಅಪರಾಧಿಗಳೆಂದು ತೀರ್ಮಾನಿಸಲಾಗಿತ್ತು. 2008ರ ಜ.21 ರಂದು ವಿಶೇಷ ನ್ಯಾಯಾಲಯವು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

Bilkis Bano case Supreme Court agrees to hear fresh plea challenging remission granted to convicts

ಸನ್ನಡತೆಯ ಆಧಾರದ ಮೇಲೆ ಅಪರಾಧಿಗಳ ಬಿಡುಗಡೆ

ಬಿಲ್ಕಿನ್‌ ಬಾನೊ ಅತ್ಯಾಚಾರಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಿದ್ದೇವೆ ಎಂದು ಗುಜರಾತ್‌ ಸರ್ಕಾರ ಸಮರ್ಥಿಸಿಕೊಂಡಿದೆ. 11 ಅಪರಾಧಿಗಳನ್ನು ಆಗಸ್ಟ್‌ 15ರಂದು ಬಿಡುಗಡೆ ಮಾಡಲಾಗಿತ್ತು.

English summary
Gujarat Communal Violence Bilkis Bano case Supreme Court agrees to hear fresh plea challenging remission granted to convicts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X