ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಲ್ಕಿಸ್ ಬಾನೋ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ

|
Google Oneindia Kannada News

ನವದೆಹಲಿ, ಡಿ. 13: ಕೊಲೆ, ಸಾಮೂಹಿಕ ಅತ್ಯಾಚಾರದ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ. ಹೀಗಾಗಿ ಪ್ರಕರಣದ ವಿಚಾರಣೆ ಮುಂದೂಡಲಾಗಿದೆ.

2002 ರಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ತನ್ನ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಅವರು ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್ 13 ರಂದು ಅರ್ಜಿ ಆಲಿಸಲಿದ್ದ ಸುಪ್ರೀಂ ಕೋರ್ಟ್ ಪೀಠದ ಭಾಗವಾದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಗೆ ಬಿಲ್ಕಿಸ್ ಬಾನೋಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಗೆ ಬಿಲ್ಕಿಸ್ ಬಾನೋ

ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ವಿಚಾರಣೆಯಿಂದ ಹಿಂದೆ ಸರಿದಿರುವ ಕಾರಣ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದ್ದು, ಹೊಸ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಬೇಕಾಗಿದೆ.

Bilkis Bano Case: Supreme Court Judge Recuses Out Of Hearing

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ, ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ಅಹ ನ್ಯಾಯಾಧೀಶರು ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರ ನಿರಾಕರಣೆಗೆ ಯಾವುದೇ ಕಾರಣವನ್ನು ಪೀಠವು ನಿರ್ದಿಷ್ಟಪಡಿಸಲಿಲ್ಲ.

ಎರಡು ಪ್ರತ್ಯೇಕ ಅರ್ಜಿಗಳಲ್ಲಿ ಬಿಲ್ಕಿಸ್ ಬಾನೊ, ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಶೀಘ್ರ ಬಿಡುಗಡೆ ಮಾಡುವುದನ್ನು ಪ್ರಶ್ನಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ವಿಧಿಸಿರುವ ಕಾನೂನಿನ ಅಗತ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಯಾಂತ್ರಿಕ ಆದೇಶವನ್ನು ಜಾರಿಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಗೋಧ್ರಾ ರೈಲು ದುರಂತ ಘಟನೆಯ ನಂತರ ಉಂಟಾದ 2002 ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ಬಿಲ್ಕಿಸ್ ಬಾನೋ ಐದು ತಿಂಗಳ ಗರ್ಭಿಣಿಯಾಗಿದ್ದರು. ಹತ್ಯೆಗೀಡಾದ ಆಕೆಯ ಕುಟುಂಬದ ಏಳು ಸದಸ್ಯರಲ್ಲಿ ಆಕೆಯ ಮೂರು ವರ್ಷದ ಪುಟ್ಟ ಮಗಳು ಸೇರಿದ್ದರು.

Bilkis Bano Case: Supreme Court Judge Recuses Out Of Hearing

ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಯಿತು ಮತ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 21, 2008 ರಂದು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು.

ಆದರೆ, ಅಕ್ಟೋಬರ್‌ನಲ್ಲಿ ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆಗೆ ಕೇಂದ್ರದ ಅನುಮೋದನೆಯನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿ, ಇದಕ್ಕೆ ಅವರ ಉತ್ತಮ ನಡವಳಿಕೆ ಕಾರಣ ಎಂದು ಉಲ್ಲೇಖಿಸಿದೆ.

English summary
Bilkis Bano Case: Supreme Court Justice Bela M Trivedi recused herself from the hearing today. so matter was hence adjourned. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X