ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಲ್ಕಿಸ್ ಬಾನೊ ಪ್ರಕರಣ: ಖಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್‌

|
Google Oneindia Kannada News

ದೆಹಲಿ ಡಿಸೆಂಬರ್ 14: 2002ರ ಗುಜರಾತ್‌ ಗಲಭೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ತನ್ನ ಕುಟುಂಬವನ್ನು ನಾಶಪಡಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಮಂದಿಯ ಶೀಘ್ರ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ ಇಂದು ಖಾರವಾಗಿ ಪ್ರತಿಕ್ರಿಯಿಸಿದೆ.

ಬಿಲ್ಕಿಸ್ ಬಾನೊ ಅವರ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಮುಂದೆ ಪ್ರಶ್ನೆಗಳನ್ನು ಎತ್ತಿದರು. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ವಿಚಾರಣೆಯಿಂದ ಹೊರಗುಳಿದ ನಂತರ ಹೊಸ ಪೀಠವನ್ನು ಸ್ಥಾಪಿಸುವ ಬಗ್ಗೆ ಯೋಚಿಸುವಂತೆ ಕೇಳಿದರು.

ಬಿಲ್ಕಿಸ್ ಬಾನೊ ಅವರ ವಕೀಲರ ಈ ಹೇಳಿಕೆಯಿಂದ ಬೇಸರಗೊಂಡ ಮುಖ್ಯ ನ್ಯಾಯಮೂರ್ತಿ "ಅರ್ಜಿಯನ್ನು ಪಟ್ಟಿ ಮಾಡಲಾಗುವುದು. ದಯವಿಟ್ಟು ಮತ್ತೆ ಮತ್ತೆ ಅದೇ ವಿಷಯವನ್ನು ಪ್ರಸ್ತಾಪಿಸಬೇಡಿ. ಇದು ತುಂಬಾ ಕಿರಿಕಿರಿಯುಂಟುಮಾಡುತ್ತದೆ" ಎಂದು ಹೇಳಿದ್ದಾರೆ.

ಹೊಸ ಪೀಠ ಸ್ಥಾಪನೆಗೆ ಮನವಿ

ಹೊಸ ಪೀಠ ಸ್ಥಾಪನೆಗೆ ಮನವಿ

ನ್ಯಾಯಮೂರ್ತಿ ಬೇಲಾ ತ್ರಿವೇದಿ ಪ್ರಕರಣದಿಂದ ನಿರ್ಗಮಿಸಿದ ನಂತರ, ಬಿಲ್ಕಿಸ್ ಬಾನೊ ಅವರ ಅರ್ಜಿಯ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಹೊಸ ಪೀಠವನ್ನು ಸ್ಥಾಪಿಸಬೇಕಾಗಿದೆ. ಆದರೆ ಈ ಬಗ್ಗೆ ಮನವಿ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್‌ ಇಂದು ಖಾರವಾಗಿ ಪ್ರತಿಕ್ರಿಯಿಸಿದೆ.

ಗುಜರಾತ್ ಸರ್ಕಾರ "ಉತ್ತಮ ನಡವಳಿಕೆ" ಆಧಾರದ ಮೇಲೆ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು 11 ಅಪರಾಧಿಗಳನ್ನು ಬಿಡುಗಡೆ ಮಾಡಿತು. ಈ ಕ್ರಮ ರಾಷ್ಟ್ರವ್ಯಾಪಿ ಭಾರೀ ಆಕ್ರೋಶವನ್ನು ಹುಟ್ಟುಹಾಕಿತು. ಯಾಕೆಂದರೆ ಅತ್ಯಾಚಾರ ಸಾಬೀತಾದ ಬಳಿಕ ಅಪರಾಧಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿತ್ತು. ಬಿಡುಗಡೆಯಾದ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ ಹಿಂದೂ ಸಂಘಟನೆಯಿಂದ ವೀರರಂತೆ ಸ್ವಾಗತಿಸುವುದು ಭಾರೀ ಆಕ್ರೋಶಕ್ಕೆ ಗುರಿಯಾಗಿತ್ತು. ಆದರೆ ತನ್ನ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ಗರ್ಭಿಣಿ ಮೇಲೆ ಅತ್ಯಾಚಾರ

ಗರ್ಭಿಣಿ ಮೇಲೆ ಅತ್ಯಾಚಾರ

ಹೀಗಾಗಿ ಆರೋಪಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಗುಜರಾತ್‌ನ ಬದಲಿಗೆ ಮಹಾರಾಷ್ಟ್ರವೇ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಬಿಲ್ಕಿಸ್ ಬಾನೊ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ. ಬಿಲ್ಕಿಸ್ ಬಾನೋ 21 ವರ್ಷದಲ್ಲಿ ಗರ್ಭಿಣಿಯಾಗಿದ್ದಾಗ ಈ ಘಟನೆ ನಡೆದಿದೆ. ಗುಜರಾತ್‌ನಲ್ಲಿ ನಡೆದ ಗಲಭೆಯಲ್ಲಿ ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಒಂಬತ್ತು ಸದಸ್ಯರನ್ನು ಕೊಂದ ವ್ಯಕ್ತಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದರು.

ಅಪರಾಧಿಗಳ ಬಿಡುಗಡೆ

ಅಪರಾಧಿಗಳ ಬಿಡುಗಡೆ

ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಯಿತು ಮತ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ನ್ಯಾಯಾಲಯಕ್ಕೆ ವರ್ಗಾಯಿಸಿತು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2008 ರಲ್ಲಿ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ದೃಢಪಡಿಸಿತು. ಆದರೆ ಶಿಕ್ಷೆಯ ಅವಧಿ ಪೂರ್ಣಗೊಳ್ಳದೇ ಅಪರಾಧಿಗಳನ್ನು ರಾಜ್ಯ ಸರ್ಕಾ 'ಉತ್ತಮ ನಡುವಳಿ' ಆಧಾರದ ಮೇಲೆ ಬಿಡುಗಡೆ ಮಾಡಿದೆ.

ಬಿಲ್ಕಿಸ್ ಬಾನೋ ಅರ್ಜಿ ಸಲ್ಲಿಕೆ

ಬಿಲ್ಕಿಸ್ ಬಾನೋ ಅರ್ಜಿ ಸಲ್ಲಿಕೆ

2002 ರಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ತನ್ನ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಅವರು ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಆರೋಪಿಗಳಾದ 11 ಮಂದಿ ಕ್ರಿಮಿನಲ್ ಗಳನ್ನು ಸರ್ಕಾರ ಬಿಡುಗಡೆ ಮಾಡಿರುವುದರ ವಿರುದ್ಧ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಆಕ್ರೋಶ, ನಿರಾಸೆ, ಅಪನಂಬಿಕೆ, ಪ್ರತಿಭಟನೆ ವ್ಯಕ್ತವಾಗಿದೆ ಎಂದು ವಕೀಲರಾದ ಶೋಭಾ ಗುಪ್ತಾ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಬಾನು ಉಲ್ಲೇಖಿಸಿದ್ದಾರೆ. ಡಿಸೆಂಬರ್ 13 ರಂದು ಅರ್ಜಿ ಆಲಿಸಲಿದ್ದ ಸುಪ್ರೀಂ ಕೋರ್ಟ್ ಪೀಠದ ಭಾಗವಾದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

English summary
Supreme Court today reacted strongly to the petition filed by Bilkis Bano challenging the early release of 11 convicts who were serving life sentences for gang-raping her and destroying her family during the 2002 Gujarat riots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X