ಇಂದು ಬಿಲ್ಕಿಸ್ ಬಾನೊ, ನಾಳೆ..? ಅತ್ಯಾಚಾರಿಗಳಿಗೆ ಸುಪ್ರೀಂಕೋರ್ಟ್ ಕೇಳಿದ ಖಡಕ್ ಪ್ರಶ್ನೆ
ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಯ ಅಂತಿಮ ವಿಚಾರಣೆಯನ್ನು ಮೇ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಮಂಗಳವಾರ (ಏಪ್ರಿಲ್ 18) ನ್ಯಾಯಾಲಯದಲ್ಲಿ ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದ ಕಡತವನ್ನು ತೋರಿಸುವ ಆದೇಶವನ್ನು ವಿರೋಧಿಸಿತು. ಸುಪ್ರೀಂ ಕೋರ್ಟ್‌ನ ಆದೇಶದ ಆಧಾರದ ಮೇಲೆ ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿತು.
ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ, ತನ್ನ ಕುಟುಂಬದ ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ಎಲ್ಲ 11 ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ.

ಸಂತ್ರಸ್ತೆ ಬಿಲ್ಕಿಸ್ ಬಾನೊ ಅವರನ್ನು ಹೊರತುಪಡಿಸಿ, ಸಾಮಾಜಿಕ ಕಾರ್ಯಕರ್ತೆ ಸುಭಾಷಿಣಿ ಅಲಿ ಮತ್ತು ಟಿಎಂಸಿ ನಾಯಕ ಮಹುವಾ ಮೊಯಿತ್ರಾ ಅವರು ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಇದರ ಬೆನ್ನಲ್ಲೆ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠವು ಕೇಂದ್ರ, ಗುಜರಾತ್ ಸರ್ಕಾರ ಮತ್ತು ಅಪರಾಧಿಗಳ ವಿರುದ್ಧ ಬಿಲ್ಕಿಸ್ ಬಾನೋ ಸಲ್ಲಿಸಿದ ಮನವಿಯ ಮೇಲೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯ ದಿನಾಂಕದೊಳಗೆ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಕಕ್ಷಿದಾರರಿಗೆ ಸೂಚಿಸಿತ್ತು.
ನ್ಯಾಯಾಲಯದ ಮಹತ್ವದ ಅಭಿಪ್ರಾಯ
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆಮ್ ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠ, ಸರ್ಕಾರದ ನಿರ್ಧಾರದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು. ಸೇಬನ್ನು ಕಿತ್ತಳೆ ಹಣ್ಣಿಗೆ ಹೋಲಿಸಲಾಗದು, ಅದೇ ರೀತಿ ಹತ್ಯಾಕಾಂಡವನ್ನು ಕೊಲೆಗೆ ಹೋಲಿಸಲಾಗದು ಎಂದು ಕೋರ್ಟ್ ಹೇಳಿದೆ.

ಸಮಾಜದ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುವ ಇಂತಹ ಘೋರ ಅಪರಾಧಗಳ ಬಗ್ಗೆ ಯಾವುದೇ ಅಧಿಕಾರವನ್ನು ಚಲಾಯಿಸುವಾಗ ಸಾರ್ವಜನಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ಇಂದು ಬಿಲ್ಕಿಸ್ ಬಾನೋ ಮನವಿಗೆ ನ್ಯಾಯಮೂರ್ತಿ ಕೆಮ್ ಜೋಸೆಫ್ ಪ್ರತಿಕ್ರಿಯಿಸಿದ್ದಾರೆ. ನಾಳೆ ಅದು ನೀನಾಗಿರಬಹುದು ಅಥವಾ ಬೇರೆ ಯಾರೇ ಆಗಿರಬಹುದು. ಕೂಲಂಕುಶವಾಗಿ ಪರಿಶೀಲನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಧೀಶ ಜೋಸೆಫ್ ಹೇಳಿದ್ದಾರೆ. ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್ ಕಟುವಾಗಿ ಹೇಳಿಕೆ ನೀಡಿದೆ.
ಅಂತಹ ಪರಿಸ್ಥಿತಿಯಲ್ಲಿ ಸ್ಥಿರ ಮಾನದಂಡಗಳು ಇರಬೇಕು. ನೀವು ನಮಗೆ ಕಾರಣವನ್ನು ನೀಡದಿದ್ದರೆ, ನಾವು ನಮ್ಮದೇ ಆದ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಸರ್ಕಾರಕ್ಕೆ ಕೋರ್ಟ್ ನೇರವಾಗಿ ಹೇಳಿದೆ.

ಏನಿದು ಘಟನೆ?
2002ರ ಮಾರ್ಚ್‌ನಲ್ಲಿ ಗುಜರಾತ್‌ನ ಗೋದ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಕಂಪಾರ್ಟ್‌ಮೆಂಟ್‌ಗೆ ಬೆಂಕಿ ಹಚ್ಚಿದ ಘಟನೆಯ ನಂತರ ಗಲಭೆಗಳು ಭುಗಿಲೆದ್ದವು. ಈ ವೇಳೆ 2002ರಲ್ಲಿ ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಇದರೊಂದಿಗೆ ಅವರ ಕುಟುಂಬದ 7 ಜನರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜನವರಿ 21, 2008 ರಂದು ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಅಂದಿನಿಂದ ಎಲ್ಲಾ 11 ಅಪರಾಧಿಗಳು ಜೈಲಿನಲ್ಲಿದ್ದರು ಮತ್ತು ಎಲ್ಲರೂ ಕಳೆದ ವರ್ಷ ಆಗಸ್ಟ್ 15 ರಂದು ಬಿಡುಗಡೆಯಾದರು. ಈ ಬಿಡುಗಡೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications