ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಯ ಆಯುಷ್ಮಾನ್ ಭಾರತ್ ಯೋಜನೆಗೆ ಬಿಲ್ ಗೇಟ್ಸ್ ಮೆಚ್ಚುಗೆ

|
Google Oneindia Kannada News

ನವದೆಹಲಿ, ಜನವರಿ 18: ಎಲ್ಲ ಬಡವರಿಗೂ ಆರೋಗ್ಯ ಸೇವೆ ಕಲ್ಪಿಸು ಆಯುಷ್ಮಾನ್ ಭಾರತ್ ಯೋಜನೆಯು ತನ್ನ ಮೊದಲ 100 ದಿನದ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.

ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಸರ್ಕಾರ ಆರಂಭಿಸಿ ಶತದಿನ ಪೂರೈಸಿದೆ.

bill gates congratulates government Ayushman Bharat 100 days narendra modi

ಸಚಿತ್ರ ಸುದ್ದಿ: ಆಯುಷ್ಮಾನ್ ಭಾರತ್ ಪ್ರಯೋಜನ ಪಡೆಯುವುದು ಹೇಗೆ?ಸಚಿತ್ರ ಸುದ್ದಿ: ಆಯುಷ್ಮಾನ್ ಭಾರತ್ ಪ್ರಯೋಜನ ಪಡೆಯುವುದು ಹೇಗೆ?

'ಈ ಬಗ್ಗೆ ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, ಆಯುಷ್ಮಾನ್ ಯೋಜನೆಯು ನೂರು ದಿನ ತುಂಬಿದ ಸಂದರ್ಭದಲ್ಲಿ ಭಾರತ ಸರ್ಕಾರವನ್ನು ಅಭಿನಂದಿಸುತ್ತೇನೆ. ಈ ಯೋಜನೆ ಎಷ್ಟು ಜನರಿಗೆ ತಲುಪಿದೆ ಎಂಬುದನ್ನು ನೋಡಿ ಖುಷಿಯಾಗುತ್ತಿದೆ' ಎಂದು ಪ್ರಧಾನಿ ಕಚೇರಿಯನ್ನು ಟ್ಯಾಗ್ ಮಾಡಿರುವ ಬಿಲ್ ಗೇಟ್ಸ್ ಟ್ವೀಟ್ ಮಾಡಿದ್ದಾರೆ.

ಮೋದಿ ಫೋಟೋ ಬಳಸುವ ಆಯುಷ್ಮಾನ್ ಭಾರತ್ ಯೋಜನೆಯಿಂದ ಹಿಂದಕ್ಕೆ ಸರಿದ ಮಮತಾಮೋದಿ ಫೋಟೋ ಬಳಸುವ ಆಯುಷ್ಮಾನ್ ಭಾರತ್ ಯೋಜನೆಯಿಂದ ಹಿಂದಕ್ಕೆ ಸರಿದ ಮಮತಾ

ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ, ಬಿಲ್ ಗೇಟ್ಸ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬಡಜನರಿಗೆ ಉತ್ತಮ ಗುಣಮಟ್ಟದ ಮತ್ತು ಕಡಿಮೆ ವೆಚ್ಚದ ಆರೋಗ್ಯ ಚಿಕಿತ್ಸೆ ನೀಡುವ ಸರ್ಕಾರದ ಬದ್ಧತೆಯ ಪ್ರತೀಕವಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ- ‌ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷದ ತನಕ ಅನುಕೂಲಆಯುಷ್ಮಾನ್ ಭಾರತ- ‌ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷದ ತನಕ ಅನುಕೂಲ

ಯೋಜನೆಯ ಆರಂಭದ ನೂರು ದಿನಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಒದಗಿಸುವ ಯೋಜನೆಗೆ ಇದುವರೆಗೂ 6,85,000 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ಇತ್ತೀಚೆಗೆ ತಿಳಿಸಿತ್ತು.

English summary
Micorsoft co Founder Bill Gates on Thursday congratulated the Indian government for the achievements made by Ayushman Bharat helathcare sheme in its first 100 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X