BJP Candidate 5th List: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಿಗೆ ಟಿಕೆಟ್!
ಹೊಸ ದಿಲ್ಲಿ, ಮಾರ್ಚ್24: 2024ರ ಲೋಕಸಭಾ ಚುನಾವಣೆ ಕಾವು ದಿನದಿಂದಿ ದಿನಕ್ಕೆ ಜೋರಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ದೇಶದಲ್ಲಿ ಚುನಾವಣೆ ನಡೆಯಲಿದೆ. ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು (ಭಾನುವಾರ) ಬಿಜೆಪಿ ಐದನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದ ಕ್ಷೇತ್ರಗಳಲ್ಲಿ ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯದ ಮೇರೆಗೆ 195 ಅಭ್ಯರ್ಥಿಗಳನ್ನ ಘೋಷಿಸಿದ್ದು, ಇದೀಗ ಐದನೇ ಪಟ್ಟಿಯನ್ನ ಘೋಷಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.

ಬಿಜೆಪಿ ಹೈಕಮಾಂಡ್ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿದಿದ್ದ ಐದು ಕ್ಷೇತ್ರಗಳ ಫೈಕಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಿಸಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಬೆಳಗಾವಿಯ ಹಾಲಿ ಸಂಸದೆಯಾದ ಮಂಗಳ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡಲಾಗಿದೆ.
ಇನ್ನೂ ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವರಾದ ಡಾ.ಕೆ ಸುಧಾಕರ್ ಗೆ ಟಿಕೆಟ್ ನೀಡಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಹಾಲಿ ಸಂಸದರಾದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.
Correction: Aparajita* Sarangi
— ANI (@ANI) March 24, 2024
ಬಿಜೆಪಿ ಟಿಕೆಟ್ ಪಡೆದ ಅಭ್ಯರ್ಥಿಗಳ ಪಟ್ಟಿ
ರಾಯಚೂರು : ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ : ಡಾ.ಕೆ.ಸುಧಾಕರ್
ಉತ್ತರ ಕನ್ನಡ : ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ:ಜಗದೀಶ್ ಶೆಟ್ಟರ್
ಕಂಗನಾ ರನೌತ್: ಮಂಡಿ
ಧರ್ಮೇಂದ್ರ ಪ್ರಧಾನ್: ಸಂಭಲಪುರ
ರಾಮಾಯಣ ನಟ ಅರುಣ್ ಗೋವಿಲ್: ಮೀರತ್
ಜಿತಿನ್ ಪ್ರಸಾದ: ಪಿಲಿಭಿತ್
ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್
ಮೇನಕಾ ಗಾಂಧಿ: ಸುಲ್ತಾನಪುರ
ಸಂಬಿತ್ ಪಾತ್ರ: ಪುರಿ
ಸೀತಾ ಸೊರೆನ್: ದುಮ್ಕಾ
ರಾಜು ಬಿಷ್ಟ: ಡಾರ್ಜಿಲಿಂಗ್
ರವಿಶಂಕರ್ ಪ್ರಸಾದ್: ಪಾಟ್ನಾ
ಗಿರಿರಾಜ್ ಸಿಂಗ್: ಬೇಗುಸರಾಯ್
ಅರ್ಜುನ್ ಸಿಂಗ್: ಬರಾಕ್‌ಪುರ












Click it and Unblock the Notifications