ಸೋನಿಯಾ ಗಾಂಧಿ ಎದುರಾಳಿ ಅಭ್ಯರ್ಥಿ ಘೋಷಿಸಿದ ಬಿಜೆಪಿ
ನವದೆಹಲಿ, ಏಪ್ರಿಲ್ 03 : ಬಿಜೆಪಿ ಲೋಕಸಭಾ ಚುನಾವಣೆಗೆ 16ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಪಕ್ಷದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಬುಧವಾರ ಮಹಾರಾಷ್ಟ್ರ ಉತ್ತರ ಪ್ರದೇಶದ 6 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸೋನಿಯಾ ಗಾಂಧಿ ಅವರು ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುವ ಮೈನ್ ಪುರಿ ಕ್ಷೇತ್ರಕ್ಕೆ ಪ್ರೇಮ್ ಸಿಂಗ್ ಶಕ್ಯಾರನ್ನು ಕಣಕ್ಕಿಳಿಸಲಾಗಿದೆ. ಅಖಿಲೇಶ್ ಯಾದವ್ ಪ್ರತಿನಿಧಿಸುವ ಅಜಂಗಢ ಕ್ಷೇತ್ರಕ್ಕೆ ದಿನೇಶ್ ಲಾಲ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ.

ಮಹಾರಾಷ್ಟ್ರದ ಈಶಾನ್ಯ ಮುಂಬೈ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮನೋಜ್ ಕೋಟಕ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಕ್ಷೇತ್ರದ ಹಾಲಿ ಸಂಸದ ಕಿರಿತ್ ಸೋಮಯ್ಯಗೆ ಟಿಕೆಟ್ ನೀಡಲು ಶಿವಸೇನೆ ವಿರೋಧ ವ್ಯಕ್ತಪಡಿಸಿತ್ತು.
2014ರ ಚುನಾವಣೆಯಲ್ಲಿ ರಾಯ್ ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಅವರು 5,26,434 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯಿಂದ ಅಜಯ್ ಅಗರ್‌ವಾಲ್ ಅಭ್ಯರ್ಥಿಯಾಗಿದ್ದರು ಕೇವಲ 1,73,721 ಮತಗಳನ್ನುಪಡೆದಿದ್ದರು.











Click it and Unblock the Notifications