ಕರ್ನಾಟಕದ ಜೊತೆಗೆ ಒಡಿಶಾ, ಪಂಜಾಬ್ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ
ನವದೆಹಲಿ, ಏಪ್ರಿಲ್. 13: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ದಿನವೇ ಪಂಜಾಬ್ ಮತ್ತು ಒಡಿಶಾದಲ್ಲಿ ಸಂಸದೀಯ ಮತ್ತು ವಿಧಾನಸಭಾ ಉಪಚುನಾವಣೆಗಳು ನಡೆಯಲಿವೆ. ಇದಕ್ಕಾಗಿ ಭಾರತೀಯ ಜನತಾ ಪಕ್ಷವು ಬುಧವಾರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಬುಧವಾರವೇ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ.
ಮೇ 10 ರಂದು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ವೇಳೆ ಪಂಜಾಬ್‌ನ ಜಲಂಧರ್ ಲೋಕಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) ಮತ್ತು ಒಡಿಶಾದ ಜಾರ್ಸುಗುಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳು ನಡೆಯಲಿವೆ. ಈ ಉಪಚುನಾವಣೆಗಳ ಫಲಿತಾಂಶ ಕೂಡ ಕರ್ನಾಟಕ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೇ 13 ರಂದು ಪ್ರಟವಾಗಲಿದೆ.

ಬಿಜೆಪಿಯು ಜಲಂಧರ್ (ಎಸ್‌ಸಿ) ಉಪಚುನಾವಣೆಗೆ ಸರ್ದಾರ್ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಮತ್ತು ಜಾರ್ಸುಗುಡಾ ಉಪಚುನಾವಣೆಗೆ ಟಂಕಧರ್ ತ್ರಿಪಾಠಿ ಅವರನ್ನು ಕಣಕ್ಕಿಳಿಸಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಬುಧವಾರ ಇಬ್ಬರ ಹೆಸರನ್ನು ಘೋಷಿಸಿದೆ.
ಜನವರಿ 14 ರಂದು ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದುಬಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಚೌಧರಿ ಅವರ ನಿಧನದ ನಂತರ ಈ ವರ್ಷದ ಜನವರಿಯಿಂದ ಜಲಂಧರ್ ಲೋಕಸಭಾ ಕ್ಷೇತ್ರ ಖಾಲಿಯಾಗಿದೆ. ಅವರು ಹೃದಯಾಘಾತದಿಂದ ನಿಧನರಾದರು. ಚೌಧರಿ ಅವರ ನಿಧನದ ನಂತರ ಈ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿತ್ತು.ಜಲಂಧರ್ ಉಪಚುನಾವಣೆಗೆ ಸಂತೋಖ್ ಚೌಧರಿ ಅವರ ಪತ್ನಿ ಕರಮ್‌ಜಿತ್ ಕೌರ್ ಚೌಧರಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.
ಪಂಜಾಬ್‌ನ 4 ಜಲಂಧರ್ (ಎಸ್‌ಸಿ) ಸಂಸದೀಯ ಕ್ಷೇತ್ರದಿಂದ ಲೋಕಸಭೆಗೆ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯಾಗಿ ಕರಮ್‌ಜಿತ್ ಕೌರ್ ಚೌಧರಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಪಕ್ಷವು ಕಳೆದ ತಿಂಗಳು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ, ಈ ವರ್ಷ ಜನವರಿ 29 ರಂದು ಜಾರ್ಸುಗುಡ್ ಜಿಲ್ಲೆಯಲ್ಲಿ ಹಗಲು ಹೊತ್ತಿನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ನಂತರ ಆಗಿನ ರಾಜ್ಯದ ಆರೋಗ್ಯ ಸಚಿವರಾಗಿದ್ದ ನಬಾ ದಾಸ್ ಮೃತಪಟ್ಟಿದ್ದರು. ನಂತರ ಒಡಿಶಾದ ಜರ್ಸುಗುಡಾದಲ್ಲಿ ಉಪಚುನಾವಣೆ ಅಗತ್ಯವಾಗಿತ್ತು.
ಇದರ ನಡುವೆ ಕಾಂಗ್ರೆಸ್‌ನಿಂದ ಹೊರಹಾಕಲ್ಪಟ್ಟ ಜಲಂಧರ್ ಪಶ್ಚಿಮ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಸುಶೀಲ್ ರಿಂಕು ,ಕೆಲವೇ ಗಂಟೆಗಳ ನಂತರ ಏಪ್ರಿಲ್ 5 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಹವರ್ತಿ ಭಗವಂತ್ ಮಾನ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿದ್ದಾರೆ.
ಕಾಂಗ್ರೆಸ್ ಪಕ್ಷವು "ಪಕ್ಷ ವಿರೋಧಿ" ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಉಲ್ಲೇಖಿಸಿ, ಜಲಂಧರ್ ಪಶ್ಚಿಮ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಸುಶೀಲ್ ರಿಂಕು ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಸುಶೀಲ್ ರಿಂಕು ಅವರನ್ನು ಆಪ್‌ಗೆ ಸ್ವಾಗತಿಸಿರುವ ಅರವಿಂದ್ ಕೇಜ್ರಿವಾಲ್ , ಲೋಕಸಭೆ ಉಪಚುನಾವಣೆ ಗೆಲ್ಲಲು ಜಲಂಧರ್‌ನ ಜನರು ನಮಗೆ ಸಹಾಯ ಮಾಡುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ ಎಂದು ಅರವಿಂದ್ ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications