BJP National President Election: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ?: ಯಾರು ನಿತಿನ್ ನಬಿನ್?
ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ಜನವರಿ 19 ರಂದು ನಾಮಪತ್ರ ಸಲ್ಲಿಸಲಾಗುತ್ತದೆ. ಮರುದಿನವೇ (ಜನವರಿ 20) ಪಕ್ಷದ ಹೊಸ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದೆ. ಸದ್ಯಕ್ಕೆ ಬಿಜೆಪಿ ನಿತಿನ್ ನಬಿನ್ ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಹಲವು ನಾಯಕರು ಕಣ್ಣೀಟ್ಟಿದ್ದು, ಬಿಜೆಪಿ ನಿತಿನ್ ನಬಿನ್ ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ.

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 19 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಹಿರಿಯ ನಾಯಕರು ಸಾಥ್ ನೀಡಲಿದ್ದಾರೆ. ಹಲವಾರು ತಿಂಗಳುಗಳ ಕಾಲ ಹಲವು ಭಿನ್ನಾಭಿಪ್ರಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಬ್ಬರೂ ಆಯ್ಕೆ ಮಾಡಿದ ಹೆಸರಿನ ಬಗ್ಗೆ ಸಂಪೂರ್ಣ ಒಮ್ಮತವನ್ನು ಸೂಚಿಸುವ ಏಕೈಕ ನಾಮನಿರ್ದೇಶನ ನಿತಿನ್ ನಬಿನ್ ಅವರಾಗಿದ್ದಾರೆ. ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ.
ನಿತಿನ್ ನಬಿನ್ ಜನವರಿ 19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಕರಾಗಿ ಹಾಜರಿರುತ್ತಾರೆ. ಬಿಜೆಪಿ ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ ಸ್ಥಾನಕ್ಕೆ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿ ಬರಲಿದ್ದಾರೆ. ಇದು ಪಕ್ಷದ ಹಿರಿಯ ನಾಯಕರಲ್ಲಿ ನಬಿನ್ ಅವರ ನಾಯಕತ್ವದ ಮೇಲಿನ ಬಲವಾದ ಬೆಂಬಲ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಹಲವಾರು ಹಿರಿಯ ನಾಯಕರು, ಕೇಂದ್ರ ನಾಯಕತ್ವದ ಸದಸ್ಯರು ಮತ್ತು ಪ್ರಮುಖ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
2020 ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ಮತ್ತು ಅಂದಿನಿಂದ ವಿಸ್ತರಣೆಯಾಗಿರುವ ಜೆಪಿ ನಡ್ಡಾ ಅವರ ಸ್ಥಾನವನ್ನು ನಿತಿನ್ ನಬಿನ್ ವಹಿಸಲಿದ್ದಾರೆ. 45 ವರ್ಷ ವಯಸ್ಸಿನ ನಬಿನ್ ಬಿಜೆಪಿಯ ಅತ್ಯಂತ ಕಿರಿಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ. ನಬಿನ್ ಅಧಿಕಾರ ವಹಿಸಿಕೊಂಡ ನಂತರ, ಬಿಜೆಪಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲಾಗುತ್ತದೆ, ನಂತರ ಸಂಪುಟ ಪುನರ್ರಚನೆಯಾಗುವ ಸಾಧ್ಯತೆಯಿದೆ.
ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಈಗ ಪಕ್ಷದ ಶಾಶ್ವತ ಅಧ್ಯಕ್ಷರಾಗಲಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಮಾತ್ರ ನಾಮಪತ್ರ ಸಲ್ಲಿಸಲಿದ್ದು, ಬೇರೆ ಯಾವುದೇ ನಾಯಕರು ಅವರ ವಿರುದ್ಧ ನಾಮಪತ್ರ ಸಲ್ಲಿಸುವುದಿಲ್ಲ. ಪರಿಣಾಮವಾಗಿ, ನಿತಿನ್ ನಬಿನ್ ಅವರ ಅವಿರೋಧ ಆಯ್ಕೆ ಖಚಿತ ಎಂದು ಹೇಳಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ಬಿಜೆಪಿ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗುತ್ತಾರೆ.
ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನ ಜೆ ಪಿ ನಡ್ಡಾ ಅವರು 2020 ರಲ್ಲಿ ಅಲಂಕರಿಸಿದ್ದರು. 2020 ರಿಂದ ಜೆಪಿ ನಡ್ಡಾ ಅವರನ್ನು ಮೊದಲು ಹಂಗಾಮಿ ಅಧ್ಯಕ್ಷರನ್ನಾಗಿ ಮತ್ತು ನಂತರ ಪಕ್ಷದ ಶಾಶ್ವತ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಇನ್ನೂ ನಿತಿನ್ ನಬಿನ್ ಅವರ ಅಧಿಕಾರಾವಧಿಯು ಜನವರಿ 2029 ರವರೆಗೆ ಇರಲಿದೆ. 2029 ರ ಲೋಕಸಭಾ ಚುನಾವಣೆಗಳು ನಿಗದಿಯಾಗಿರುವುದರಿಂದ, ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿತಿನ್ ನಬಿನ್ ಪರಿಚಯ
45 ವರ್ಷ ನಿತಿನ್ ನಬಿನ್ ಅತ್ಯಂತ ಕಿರಿಯ ಬಿಜೆಪಿ ಕಾರ್ಯಾಧ್ಯಕ್ಷರಾಗಿದ್ದಾರೆ. ಭವಿಷ್ಯದಲ್ಲಿ ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಬಿಜೆಪಿಯ ಹಿರಿಯ ನಾಯಕ, ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರನಾಗಿರುವ ನಬಿನ್ ಅವರು 2 ಬಾರಿ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಎರಡು ದಶಕಕ್ಕೂ ಅಧಿಕ ಸಂಘಟನಾ ಅನುಭವವಿದೆ.45 ವರ್ಷದ ನಿತಿನ್ ನಬಿನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಸಚಿವರಾಗಿದ್ದಾರೆ ಮತ್ತು ಪಾಟ್ನಾದ ಬಂಕಿಪುರದಿಂದ ಐದು ಬಾರಿ ಶಾಸಕರಾಗಿದ್ದಾರೆ. ಅವರ ತಂದೆ ಮತ್ತು ಬಿಜೆಪಿಯ ಹಿರಿಯ ನಾಯಕ ನವೀನ್ ಕಿಶೋರ್ ಸಿನ್ಹಾ ಅವರ ನಿಧನ ಬಳಿಕ, ನಿತಿನ್ ನಬಿನ್ ತಮ್ಮ 26ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾದರು. ಬಿಹಾರದ ಕಾಯಸ್ಥ ಸಮುದಾಯದಕ್ಕೆ ಸೇರಿದ ನಿತಿನ್ ನಬಿನ್, ಬಿಹಾರ ಮತ್ತು ಪೂರ್ವ ಭಾರತದ ಮೊದಲ ಬಿಜೆಪಿ ಮುಖ್ಯಸ್ಥರಾಗಲಿರುವುದು ಬಹುತೇಕ ಖಚಿತವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆಯಾಗಲಿದ್ದು, ಪಕ್ಷದ ರಾಷ್ಟ್ರೀಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರೆ, ಪಕ್ಷದ ಇತಿಹಾಸದಲ್ಲಿ ಅತ್ಯಂತ ಕಿರಿಯ ಬಿಜೆಪಿ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಅವರು ನಿತಿನ್ ಗಡ್ಕರಿ ಅವರ ದಾಖಲೆ ಮುರಿಯಲಿದ್ದಾರೆ. ಇನ್ನೂ ನಿತನ್ ನಬಿನ್ ಛತ್ತೀಸ್‌ಗಢ ಮತ್ತು ಸಿಕ್ಕಿಂನಲ್ಲಿ ಬಿಜೆಪಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬಿಹಾರ ಬಿಜೆಪಿ ಯುವಘಟಕದಿಂದ ಚುನಾವಣಾ ಜವಾಬ್ದಾರಿಗಳನ್ನು ವಹಿಸಿಕೊಳ್ಳುವವರೆಗೆ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಪಟ್ನಾದ ಬಂಕಿಮಪುರ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು, 2008ರಲ್ಲಿ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿ ನೇಮಕಗೊಂಡರು. 2010-2016ರವರೆಗೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. 2016ರಿಂದ 2019ರವರೆಗೆ ಬಿಹಾರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು. ಈವರೆಗೆ ರಸ್ತೆ ನಿರ್ಮಾಣ, ನಗರಾಭಿವೃದ್ಧಿ, ವಸತಿ, ಕಾನೂನು ಹಾಗೂ ನ್ಯಾಯ ಖಾತೆಗಳನ್ನು ಅವರು ನಿಭಾಯಿಸಿದ್ದಾರೆ.
12ನೇ ತರಗತಿವರೆಗೆ ಶಿಕ್ಷಣ ಪಡೆದಿರುವ ನಿತಿನ್ ನಬಿನ್ , 26 ವರ್ಷವಿದ್ದಾಗಲೇ ಚುನಾವಣಾ ಕಣಕ್ಕೆ ಧುಮುಕಿದ್ದರು. 2006ರಲ್ಲಿ ತಂದೆ ಸಿನ್ಹಾ ಅವರ ನಿಧನದಿಂದ ತೆರವಾದ ಪಟ್ನಾ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಕಣಕ್ಕಿಳಿದಿದ್ದರು. ಈ ಕ್ಷೇತ್ರದಿಂದ ಸಿನ್ಹಾ ನಾಲ್ಕು ಬಾರಿ ಗೆದ್ದು ಶಾಸಕರಾಗಿದ್ದರು. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆಯಾಗಲಿದ್ದು, ಕಿರಿಯ ವಯಸ್ಸಿನಲ್ಲೇ ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ.












Click it and Unblock the Notifications