ಲೋಕಸಭೆ ಚುನಾವಣೆಗೆ ಮುನ್ನ 3 ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ ಹೈಕಮಾಂಡ್! ಯಾವ ರಾಜ್ಯಗಳು ಇಲ್ಲಿದೆ ನೋಡಿ
ದೆಹಲಿ, ಸೆಪ್ಟೆಂಬರ್ 25: 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ಮೂರು ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ನೇಮಕ ಮಾಡಿದ್ದಾರೆ.
ಹೌದು, ಲೋಕಸಭಾ ಚುನಾವಣೆ ಹಿನ್ನೆಲೆ ಸೆಪ್ಟೆಂಬರ್ 25 ರಂದು (ಸೋಮವಾರ) ದೇಶದ ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷವು ಚುನಾವಣೆಗೆ ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದ್ದು, ಬಿಜೆಪಿ ರಾಜ್ಯ ಮಟ್ಟದಲ್ಲಿ ಬದಲಾವಣೆ ಮಾಡಲು ಆರಂಭಿಸಿದೆ. ಹೀಗಾಗಿ ದೇಶದ ಮೂರು ರಾಜ್ಯಗಳಾದ ಮೇಘಾಲಯ, ನಾಗಾಲ್ಯಾಂಡ್ ಮತ್ತು ಪುದುಚೇರಿಗಳ ಬಿಜೆಪಿಯ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ.

ರಿಕ್‌ಮನ್ ಮೊಮಿನ್ ಅವರನ್ನು ಬಿಜೆಪಿ ಮೇಘಾಲಯದ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ. ಇದಲ್ಲದೇ ಪುದುಚೇರಿ ರಾಜ್ಯಾಧ್ಯಕ್ಷರಾಗಿ ಎಸ್.ಸೆಲ್ವಗಣಬತಿ ಹಾಗೂ ನಾಗಾಲ್ಯಾಂಡ್ ರಾಜ್ಯಾಧ್ಯಕ್ಷರಾಗಿ ಬೆಂಜಮಿನ್ ಯೆಪ್ತೋಮಿ ಅವರನ್ನು ನೇಮಕ ಮಾಡಲಾಗಿದೆ.
ಈಗಾಗಲೇ ಮೂರು ರಾಜ್ಯಗಳ ರಾಜ್ಯಾಧ್ಯಕ್ಷರನ್ನ ನೇಮಕ ಮಾಡಿದ್ದು, ಇನ್ನೂ ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯಾಗುತ್ತಲೇ ಇದೆ. ಆದರೆ, ಇನ್ನೂ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ನೇಮಕ ಆಗಿಲ್ಲ.ಇತ್ತ ಲೋಕಸಭಾ ಚುನಾವಣೆಗೆ ತಯಾರಿ ಜೋರಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದು, ಇನ್ನೂ ಕರ್ನಾಟಕದಲ್ಲಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ.











Click it and Unblock the Notifications