ಬಿಹಾರ ಲಾಠಿ ಚಾರ್ಜ್ನಲ್ಲಿ ಬಿಜೆಪಿ ಕಾರ್ಯಕರ್ತ ಸಾವು ಪ್ರಕರಣ: ಜೆಪಿ ನಡ್ಡಾಗೆ ವರದಿ ಸಲ್ಲಿಸಿದ ಸಮಿತಿ
ನವದೆಹಲಿ, ಜುಲೈ 20: ಬಿಹಾರ ರಾಜ್ಯ ಸರ್ಕಾರ ವಿರುದ್ಧ ಪಾಟ್ನಾದಲ್ಲಿ ಪ್ರತಿಭಟನೆ ವೇಳೆ ನಡೆದ ಲಾಠಿ ಚಾರ್ಜ್‌ನಿಂದ ಬಿಜೆಪಿ ಪದಾಧಿಕಾರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತೀಯ ಜನತಾ ಪಕ್ಷದ (BJP) ಸಮಿತಿ ಸದಸ್ಯರು ಪಕ್ಷ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವರದಿಯನ್ನು ಸಲ್ಲಿಸಿದರು. ಘಟನೆ ಕುರಿತು ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಇದೇ ತಿಂಗಳ ಜುಲೈ ಆರಂಭದಲ್ಲಿ ಶಿಕ್ಷಕರ ನೇಮಕಾತಿಗೆ ವಸತಿ ಅಗತ್ಯವನ್ನು ತೆಗೆದುಹಾಕುವ ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿಯ ವಿರುದ್ಧ ಬಿಜೆಪಿ ಪಕ್ಷದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ನಡೆದ ಪೊಲೀಸರ ಲಾಠಿ ಚಾರ್ಜ್‌ನಲ್ಲಿ ಜೆಹಾನಾಬಾದ್‌ನ ಬಿಜೆಪಿ ಕಾರ್ಯಕರ್ತ ವಿಜಯ್ ಕುಮಾರ್ ಸಿಂಗ್ ಮೃತಪಟ್ಟಿದ್ದಾರೆ.

ವಿಜಯ್ ಕುಮಾರ್ ಸಿಂಗ್ ಅವರ ಸಾವಿಗೆ ಕಾರಣವಾದ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಬಗ್ಗೆ ತನಿಖೆ ನಡೆಸಲು ಬಿಜೆಪಿಯಿಂದ ನಾಲ್ವರು ಸದಸ್ಯರನ್ನು ಒಳಗೊಂಡ 'ಸಮಿತಿ' ಯನ್ನು ರಚಿಸಲಾಯಿತು. ಇದೀಗ ಈ ಸಮಿತಿಯು ಪ್ರಕರಣ ಬಗ್ಗೆ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ತಮ್ಮ ನಾಯಕರಿಗೆ ವರದಿ ಸಲ್ಲಿಸಿದೆ.
ಬಿಹಾರ್ ಸಿಎಂ ನಿತೀಶ್ ಕುಮಾರ್ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿಯನ್ನು ವಿರೋಧಿಸಿ ವಿರೋಧ ಪಕ್ಷದ (ಬಿಜೆಪಿ) ನಾಯಕರು ಬಿಹಾರ ವಿಧಾನ ಸಭೆಯತ್ತ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ತಡೆದ ಪೊಲೀಸರ ನಡೆವು ಭಾರೀ ವಾಕ್ಸಮರ, ಘರ್ಷಣೆ ನಡೆಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅನಿವಾರ್ಯವಾಗಿ ಲಾಠಿ ಚಾರ್ಜ್ ಮಾಡಬೇಕಾಯಿತು.
ಘಟನೆಯಲ್ಲಿ ಪಾಟ್ನಾದ ಇಂದಿರಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಐಜಿಐಎಂಎಸ್) ನಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರನ್ನು ಆಸ್ಪತ್ರೆಗೆ ಸೇರಿಸಿತಾದರೂ ಬದುಕುಳಿಯಲಿಲ್ಲ. ಈ ಕುರಿತು ಬಿಜೆಪಿ ನಾಯಕರು ನಿತಿಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೂರ್ವ ಯೋಜಿತ ಸಂಚು: ನಾಯಕರ ಟೀಕೆ
ಸಾವಿನ ಕುರಿತು ಇತ್ತೀಚೆಗೆ ಪ್ರತಿಕ್ರಿಯಿಸಿದ ದೆಹಲಿ ಸಂಸದ ಮನೋಜ್ ತಿವಾರಿ ಅವರು, ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಅಥವಾ ಹತ್ಯೆ ಇಂದೊಂದು ಪೂರ್ವ ಯೋಜಿತ ಸಂಚು ಎಂದು ಆರೋಪಿಸಿದರು.
ಕೇಂದ್ರ ಸಚಿವ ನಿತ್ಯಾನಂದ ರೈ ಅವರು ಸಹ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ನಡೆಸಿದ ಲಾಠಿ ಚಾರ್ಜ್ ಗೆ ತೀವ್ರವಾಗಿ ಟೀಕಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರನ್ನು 1919 ರಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ನಡೆಸಿದ ಬ್ರಿಗೇಡಿಯರ್ ಜನರಲ್ ರೆಜಿನಾಲ್ಡ್ ಡೈಯರ್‌ಗೆ ಹೋಲಿಸಿ ಕಿಡಿ ಕಾರಿದರು. ಘಟನೆ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಸಚಿವರು ಒತ್ತಾಯಿಸಿದರು.
ಸದ್ಯ ವರದಿ ಸ್ವೀಕರಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಸಮಿತಿ ಸದಸ್ಯರ ಜೊತೆ ಘಟನೆ ಬಗ್ಗೆ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಏನೆಲ್ಲ ಕ್ರಮ ವಹಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.












Click it and Unblock the Notifications