Parliment Session: ಸಂಸತ್‌ನಲ್ಲಿ ಕೋಲಾಹಲ; ಕಲಾಪ ಮುಂದೂಡಿಕೆ
ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಉಭಯ ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಬುಧವಾರ ಅಮಿತ್ ಶಾ ಹೇಳಿಕೆ ನೀಡುತ್ತಿದ್ದಂತೆ ವಿಪಕ್ಷಗಳು ಪ್ರತಿಭಟನೆ ಆರಂಭಿಸಿದ ಕಾರಣ ಕಲಾಪವನ್ನು ಮುಂದೂಡಲಾಗಿತ್ತು. ಗುರುವಾರ ಕೂಡ ಬಿಜೆಪಿ, ಕಾಂಗ್ರೆಸ್ ಸಂಸದರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡು ಪ್ರತಿಭಟನೆಗೆ ಮುಂದಾಗಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಚಳಿಗಾಲ ಅಧಿವೇಶನ ಶುಕ್ರವಾರ ಮುಕ್ತಾಯವಾಗಲಿದೆ. ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಬಾಕಿ ಇದ್ದಾಗಿಯೂ ನಾಯಕರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡು ಕಲಾಪ ಮುಂದೂಡುವಂತೆ ಮಾಡಿದ್ದಾರೆ.

ದೇಶದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಸಲು ಉದ್ದೇಶಿಸಿರುವ ಒಂದು ದೇಶ ಒಂದು ಚುನಾವಣೆಗೆ ಕಾರ್ಯವಿಧಾನ ರೂಪಿಸುವ ಕುರಿತಂತೆ ಸಂಸದೀಯ ಸಮಿತಿಯನ್ನು ರಚಿಸಲು ಸರ್ಕಾರವು ಔಪಚಾರಿಕ ಚಲನೆ ಮಂಡಿಸುವ ಸಾಧ್ಯತೆ ಇದೆ. ಮಧ್ಯಾಹ್ನ ಕಲಾಪ ಆರಂಭವಾದರೂ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸುವ ಸಾಧ್ಯತೆ ಇದೆ.
ಪ್ರತಿಭಟನೆ, ಗದ್ದಲ, ಕೋಲಾಹಲ
ಅಮಿತ್ ಶಾ ಹೇಳಿಕೆ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಒಂದು ಕಡೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ಮಾಡಿದರೆ ಮತ್ತೊಂದು ಕಡೆ ಬಿಜೆಪಿ ಸಂಸದರು ಕೂಡ ವಿಪಕ್ಷಗಳ ವಿರುದ್ಧ ಪ್ರತಿಭನಟನೆ ನಡೆಸಿದವು. ಸಂಸತ್ತಿನ ಮುಖ್ಯದಾರದ ಮೇಲೇರಿ ಸಂಸದರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟವಾಗಿದ್ದು, ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ಗಾಯಗೊಂಡರು. ಬಿಜೆಪಿ ಸಂಸದ ಮುಖೇಶ್ ರಜಪೂತ್ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದ್ದು ದೆಹಲಿಯ ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಅಮಿತ್ ಶಾ ಕ್ಷಮೆ ಕೇಳಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ದೇಶಾದ್ಯಂತ ವಿವಿಧ ಪಕ್ಷಗಳ ಕಾರ್ಯಕರ್ತರು, ದಲಿತಪಡ ಸಂಘಟನೆಗಳು ಅಮಿತ್ ಶಾ ವಿರುದ್ಧ ಪ್ರತಿಭಟನೆಗೆ ಕರೆಕೊಟ್ಟಿವೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಬಿಜೆಪಿ ಸಂಸದರು ಕೂಡ ಇದೇ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ್ದು ತಳ್ಳಾಟ ಉಂಟಾಗಿತ್ತು. ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿಯವರನ್ನು ರಾಹುಲ್ ಗಾಂಧಿ ತಳ್ಳಿದ್ದರಿಂದ ಕೆಳಗೆ ಬಿದ್ದು ಗಾಯಗೊಂಡರು ಎನ್ನುವ ಆರೋಪ ಕೇಳಿಬಂದಿದೆ.
ಘಟನೆ ಬಗ್ಗೆ ಪ್ರತಾಪ್ ಚಂದ್ರ ಸಿಂಗ್ ಮಾತನಾಡಿದ್ದು, ನಾನು ಮೆಟ್ಟಿಲ ಮೇಲೆ ನಿಂತಿದ್ದೆ ರಾಹುಲ್ ಗಾಂಧಿ ಸಂಸದರನ್ನು ತಳ್ಳಿದ್ದರಿಂದ ನಾನು ಕೆಳಗೆ ಬಿದ್ದೆ ಎಂದು ಹೇಳಿದರು. ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, ಬಿಜೆಪಿ ಸಂಸದರು ನನ್ನನ್ನು ತಡೆಯಲು ಪ್ರಯತ್ನಿಸಿದ್ದಲ್ಲದೆ, ಬೆದರಿಕೆ ಕೂಡ ಹಾಕಿದರು ಎಂದು ಪ್ರತಿಕ್ರಿಯೆ ನೀಡಿದರು.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications