ಬಿಜೆಪಿಗೆ ಬಂಪರ್: ಚುನಾವಣಾ ಬಾಂಡ್ ಮೂಲಕ 2,555 ಕೋಟಿ ಸಂಗ್ರಹ!
ನವದೆಹಲಿ, ಆಗಸ್ಟ್ 9: ಭಾರತದಲ್ಲಿ ಸಾರ್ವಜನಿಕರು, ಉದ್ಯಮಿಗಳು ಮತ್ತು ಗಣ್ಯರು ನೀಡುವ ಚುನಾವಣಾ ಬಾಂಡ್ ಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸಿಂಹಪಾಲು ಸಿಕ್ಕಿರುವುದು ಕೇಂದ್ರೀಯ ಚುನಾವಣಾ ಆಯೋಗ ನೀಡಿರುವ ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿದೆ.
2019-20ನೇ ಸಾಲಿನಲ್ಲಿ 3,355 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಸಂಗ್ರಹಿಸಲಾಗಿದ್ದು, ಈ ಪೈಕಿ ಬಿಜೆಪಿಗೆ 2,555 ಕೋಟಿ ಮೌಲ್ಯದ ಬಾಂಡ್ ಬಂದಿವೆ. ಕಳೆದ ಆರ್ಥಿಕ ಸಾಲಿಗೆ ಹೋಲಿಕೆ ಮಾಡಿದರೆ ಬಿಜೆಪಿಯ ಚುನಾವಣಾ ಬಾಂಡ್ ಆದಾಯದಲ್ಲಿ ಶೇ.75ರಷ್ಟು ಹೆಚ್ಚಳವಾಗಿದ್ದು, 1,450 ಕೋಟಿ ರೂಪಾಯಿ ಏರಿಕೆಯಾಗಿದೆ.
ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಬಾಂಡ್ ರೂಪದಲ್ಲಿ ಬಂದಿರುವ ಆದಾಯ ಎಷ್ಟಿದೆ. ಅಸಲಿಗೆ ಈ ಚುನಾವಣಾ ಬಾಂಡ್ ಪದ್ಧತಿ ಎಂದರೇನು?, 2019ರಲ್ಲಿ ಇದೇ ಚುನಾವಣಾ ಬಾಂದ್ ಪದ್ಧತಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಲು ಕಾರಣವೇನು?, 2019-20ನೇ ಸಾಲಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಹಣ ಸಂಗ್ರಹವಾಗಿದೆ ಎಂಬುದರ ಕುರಿತು ಮುಂದೆ ನೋಡೋಣ.

ಕಾಂಗ್ರೆಸ್ ಆದಾಯದಲ್ಲಿ ಇಳಿಕೆ
ಚುನಾವಣಾ ಬಾಂಡ್ ಮೂಲಕ ಸಂಗ್ರಹಿಸಿದ ಆದಾಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಆದಾಯದಲ್ಲಿ ಶೇ.17ರಷ್ಟು ಇಳಿಕೆಯಾಗಿದೆ. 2018ರಲ್ಲಿ ಚುನಾವಣಾ ಬಾಂಡ್ ಮೂಲಕ 383 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. 2019-20ನೇ ಸಾಲಿನಲ್ಲಿ ಕಾಂಗ್ರೆಸ್ ಚುನಾವಣಾ ಬಾಂಡ್ ಮೂಲಕ 318 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಚುನಾವಣಾ ಬಾಂಡ್ ಮೂಲಕ ಯಾವ ಪಕ್ಷಕ್ಕೆ ಎಷ್ಟು ಹಣ?
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ 100.46 ಕೋಟಿ ರೂಪಾಯಿ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ 29.25 ಕೋಟಿ, ಶಿವಸೇನೆ 41 ಕೋಟಿ ರೂಪಾಯಿ, ಡಿಎಂಕೆ 45 ಕೋಟಿ ರೂಪಾಯಿ, ಲಾಲೂ ಪ್ರಸಾದ್ ಯಾದವ್ ರಾಷ್ಟ್ರೀಯ ಜನತಾ ದಳ 2.5 ಕೋಟಿ ರೂಪಾಯಿ, ಮತ್ತು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ 18 ಕೋಟಿ ರೂಪಾಯಿ ಚುನಾವಣಾ ಬಾಂಡ್ ಸಂಗ್ರಹಿಸಿರುವುದಾಗಿ ಕೇಂದ್ರೀಯ ಚುನಾವಣಾ ಆಯೋಗದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಬಿಜೆಪಿ ಆದಾಯದಲ್ಲಿ ಶೇ.68ರಷ್ಟು ಹೆಚ್ಚಳ
2019ರ ಮಾರ್ಚ್ ತಿಂಗಳಿಗೆ ಹೋಲಿಸಿ ನೋಡಿದರೆ 2020ರ ಮಾರ್ಚ್ ವೇಳೆಗೆ ಬಿಜೆಪಿ ಆದಾಯವು ಇಮ್ಮಡಿಯಾಗಿರುವಂತೆ ಗೋಚರಿಸುತ್ತಿದೆ. ಮಾರ್ಚ್ 2020ರ ಹೊತ್ತಿಗೆ ಚುನಾವಣಾ ಬಾಂಡ್ ಮೂಲಕ ಭಾರತೀಯ ಜನತಾ ಪಕ್ಷವೊಂದೇ ಶೇ.68ರಷ್ಟು ಆದಾಯ ಪಡೆದುಕೊಂಡಿದೆ. ಚುನಾವಣಾ ಬಾಂಡ್ ಪದ್ಧತಿಯನ್ನು ಆರಂಭಿಸಿದ ದಿನದಿಂದ ಈವರೆಗೂ ಅತಿಹೆಚ್ಚು ಆದಾಯವನ್ನು ಪಡೆದುಕೊಂಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಚುನಾವಣಾ ಬಾಂಡ್ ಯೋಜನೆ ಎಂದರೇನು?
ಯಾವುದೇ ವ್ಯಕ್ತಿ, ಸಂಸ್ಥೆ ಹಾಗೂ ಕಂಪನಿಗಳು ಚುನಾವಣೆ ಸಮಯದಲ್ಲಿ ತಮ್ಮಿಷ್ಟದ ರಾಜಕೀಯ ಪಕ್ಷಕ್ಕೆ ಈ ಎಲೆಕ್ಷನ್ ಬಾಂಡ್ ಮೂಲಕ ದೇಣಿಗೆ ನೀಡಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಬ್ರಾಂಚ್ ಗಳಲ್ಲಿ ಈ ಎಲೆಕ್ಷನ್ ಬಾಂಡ್ ಗಳನ್ನು ನೀಡಲಾಗುತ್ತದೆ. 1 ಸಾವಿರದಿಂದ 10 ಸಾವಿರ, 1 ಲಕ್ಷ ದಿಂದ 10 ಲಕ್ಷ ರೂಪಾಯಿ ಹಾಗೂ 1 ಕೋಟಿ ರೂಪಾಯಿವರೆಗೂ ಬಾಂಡ್ ಗಳನ್ನು ಖರೀದಿಸಬಹುದು. ಮೂರು ತಿಂಗಳಿನಲ್ಲಿ 10 ದಿನ ಬ್ಯಾಂಕ್ ನಲ್ಲಿ ಈ ರೀತಿಯ ಚುನಾವಣಾ ಬಾಂಡ್ ಗಳನ್ನು ವಿತರಿಸಲಾಗುತ್ತದೆ.
15 ದಿನಗಳವರೆಗೂ ಈ ಬಾಂಡ್ ಗಳನ್ನು ನಗದೀಕರಿಸಿಕೊಳ್ಳುವ ಅವಕಾಶ ರಾಜಕೀಯ ಪಕ್ಷಗಳಿಗೆ ಇರುತ್ತದೆ. ಆದರೆ, ಇದಕ್ಕೂ ಮೊದಲು ಬಾಂಡ್ ಖರೀದಿಸುವ ವ್ಯಕ್ತಿ ಅಥವಾ ಕಂಪನಿ ತಮ್ಮ ಸ್ವವಿವರವನ್ನು ಬ್ಯಾಂಕ್ ನಲ್ಲಿ ನೀಡಬೇಕಾಗಿರುತ್ತದೆ.

ಬಾಂಡ್ ಬಗ್ಗೆ ಕಾಂಗ್ರೆಸ್ ಆರೋಪ ಮತ್ತು ಬಿಜೆಪಿಗರ ಉತ್ತರ
ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಕೆಲವು ಕಂಪನಿಗಳು ಚುನಾವಣಾ ಬಾಂಡ್ ಗಳನ್ನು ಖರೀದಿಸುತ್ತವೆ. ಹೀಗೆ ಬಾಂಡ್ ಮೂಲಕ ದೇಣಿಗೆ ನೀಡಿದ ದೇಣಿಗೆದಾರರ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಇದರಿಂದ ಕಪ್ಪುಹಣವೆಲ್ಲ ಚುನಾವಣಾ ಬಾಂಡ್ ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಸಂದಾಯವಾಗುತ್ತಿದೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಕೆಲವು ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶದ ಶೇ.90ರಷ್ಟು ಉದ್ಯಮಗಳು ಕೆಲವೇ ಕೆಲವು ಕಂಪನಿಗಳ ಮೂಲಕ ನಡೆಯುತ್ತಿದೆ ಎಂದು ಈ ಹಿಂದೆಯೇ ಕಾಂಗ್ರೆಸ್ ಮುಖಂಡ ಗಲಾಮ್ ನಬಿ ಆಜಾದ್ ಆರೋಪಿಸಿದ್ದರು.
ಚುನಾವಣಾ ಬಾಂಡ್ ಭ್ರಷ್ಟಾಚಾರದ ಕೂಪವಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. 2018ರ ಜನವರಿ 2ರಂದು ಕೇಂದ್ರ ಸರ್ಕಾರ ಘೋಷಿಸಿದ ಎಲೆಕ್ಷನ್ ಬಾಂಡ್, ಜಾಗೃತ ಚುನಾವಣಾ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಚುನಾವಣೆಗಳಲ್ಲಿ ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಈ ನೀತಿಯಿಂದ ಸಾಧ್ಯವಾಗುತ್ತದೆ. ದಾನಿಗಳ ಹೆಸರು ಹಾಗೂ ಸಂಪೂರ್ಣ ವಿವರ ಬ್ಯಾಂಕ್ ನಲ್ಲಿ ಸಂಗ್ರಹಿಸಲಾಗುತ್ತದೆ. ಇದರಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ.

ಬಾಂಡ್ ಬಗ್ಗೆ ಚುನಾವಣಾ ಆಯೋಗ ಹೇಳೋದೇನು?
ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 29ಎ ಅಡಿ ನೊಂದಣಿಯಾದ ರಾಜಕೀಯ ಪಕ್ಷಗಳಷ್ಟೇ ಈ ಚುನಾವಣಾ ಬಾಂಡ್ ಪಡೆದುಕೊಳ್ಳಬಹುದು. ಇಂಥ ಪಕ್ಷಗಳು ತಮ್ಮ ಅಧಿಕೃತ ಖಾತೆಗಳ ಮೂಲಕ ಬಾಂಡ್ ನಗದೀಕರಣಗೊಳಿಸಬಹುದು. ದಾನಿಗಳಿಂದ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಗಳ ಮೂಲಕ ದೇಣಿಗೆ ಪಡೆಯಬಹುದು. ಆದರೆ, ಬಾಂಡ್ ಗಳ ಮೂಲಕ ಪಡೆದ ಮಾಹಿತಿಯನ್ನು ಬಹಿರಂಗಪಡಿಸುವ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಇದೇ ವೇಳೆ ಸರ್ಕಾರಿ ಸಂಸ್ಥೆಗಳು ಹಾಗೂ ವಿದೇಶಿ ಮೂಲಗಳಿಂದ ದೇಣಿಗೆ ಪಡೆಯುವುದನ್ನು ಆಯೋಗ ನಿಷೇಧಿಸಿದೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications