ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ: ಕಾಂಗ್ರೆಸ್
ನವದೆಹಲಿ,ಜುಲೈ 03: ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಉತ್ತರಾಖಂಡದ ದೇವಭೂಮಿಯನ್ನು ಬಿಜೆಪಿ ಅವಮಾನಗೊಳಿಸಿದ್ದು, ಈಗಿನ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹೊಣೆ ಎಂದು ಕಾಂಗ್ರೆಸ್ ದೂರಿದೆ.
ಪದೇ ಪದೇ ಮುಖ್ಯಮಂತ್ರಿಯನ್ನು ಬದಲಾಯಿಸುವ ಮೂಲಕ ಬಿಜೆಪಿ ಜನರಿಗೆ ದ್ರೋಹ ಮಾಡುತ್ತಿದೆ, ಶುಕ್ರವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರೊಂದಿಗೆ ನಾಲ್ಕು ತಿಂಗಳ ಅವಧಿಯೊಳಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಿದೆ.

2017ರಲ್ಲಿ ಉತ್ತರಾಖಂಡದ ಜನರು ಬಿಜೆಪಿಯನ್ನು ಆಯ್ಕೆ ಮಾಡಿದರು, ಆದರೆ ಅಭಿವೃದ್ಧಿಯತ್ತ ಗಮನ ಹರಿಸುವುದನ್ನು ಬಿಟ್ಟು ಸಂಪನ್ಮೂಲವನ್ನು ದೋಚಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.
ಪದೇ ಪದೇ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಏನನ್ನೂ ಮಾಡಿಲ್ಲ. ಈ ಮೂಲಕ ಇಡೀ ರಾಜ್ಯವನ್ನು ಅವಮಾನಿಸಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಅಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇವಭೂಮಿಯನ್ನು ಅವಲಾಮನಿಸಲಾಗಿದ್ದು, ಬಿಜೆಪಿ ರಾಜಕೀಯ ಅರಾಜಕತೆ ಸೃಷ್ಟಿಸಿದೆ ಎಂದು ಹೇಳಲಾಗಿದೆ.
ಉತ್ತರಾಖಂಡದಲ್ಲಿ ಈಗಿನ ರಾಜಕೀಯ ಅಸ್ಥಿರತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊಣೆಗಾರರು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.












Click it and Unblock the Notifications