Haryana Assembly Election: ಹರಿಯಾಣದಲ್ಲಿ ಹ್ಯಾಟ್ರಿಕ್: ಇದು..ಇದು ಮೋದಿ ಮ್ಯಾಜಿಕ್ ಎಂದ ಬಿಜೆಪಿ
ಹರಿಯಾಣದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಹರಿಯಾಣದಲ್ಲಿ ಬಿಜೆಪಿ ಸೋತು ಹೋಗಲಿದೆ ಎಂದು ವಿರೋಧ ಪಕ್ಷಗಳು ಹೇಳಿದ್ದವು. ಈಗ ನೋಡಿ ನಾವೇ ಗೆದ್ದಿದ್ದೇವೆ. ಇದು ಇದು ಮೋದಿ ಮ್ಯಾಜಿಕ್ ಎಂದು ವಿಜಯೇಂದ್ರ ಹೇಳಿದ್ದಾರೆ.
ನಾವು ಹರಿಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಹೇರುತ್ತಿದ್ದೇವೆ. ಹ್ಯಾಟ್ರಿಕ್ ಗೆಲುವು ಸಾಧಿಸುತ್ತಿರುವುದು ಸಂತೋಷವನ್ನುಂಟು ಮಾಡಿದೆ. ವಿಪಕ್ಷಗಳು ಹರಿಯಾಣದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಹೇರುವುದಿಲ್ಲ ಎಂದು ಭವಿಷ್ಯವೇಳಿದ್ದವು. ಆದರೆ, ಅವರ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬಿಜೆಪಿ ಹರಿಯಾಣದಲ್ಲಿ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವ ಸಮೀಕ್ಷೆಗೂ ಚುನಾವಣಾ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮೋದಿ ಅವರು ಕೆಲಸ ಹಾಗೂ ವರ್ಚಸ್ಸು ಈ ಗೆಲುವು ತಂದುಕೊಟ್ಟಿದೆ ಎಂದು ಹೇಳಿದ್ದಾರೆ.
ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ: ಹರಿಯಾಣದಲ್ಲಿ ಬಿಜೆಪಿ ಗೆಲುವು ಸಾಧಿಸಿ, ಮೂರನೇ ಬಾರಿ ಅಧಿಕಾರಕ್ಕೆ ಹೇರುತ್ತಿರುವ ಬೆನ್ನಲ್ಲಿ ರಾಜ್ಯ ಬಿಜೆಪಿ ಕಚೇರಿಯ ಮುಂದೆ ಮಂಗಳವಾರ ಸಂಭ್ರಮಾಚರಣೆ ನಡೆಯಿತು. ಹರಿಯಾಣ ಪ್ರಚಂಡ ಗೆಲುವಿನ ಸಂಭ್ರಮ ಎನ್ನುವ ಶೀರ್ಷಿಕೆಯೊಂದಿಗೆ ಸಂಭ್ರಮಾಚರಣೆಯ ಪೋಟೋಗಳನ್ನು ಬಿಜೆಪಿ ಹಂಚಿಕೊಂಡಿದೆ. ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ಹಂಚಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಲಾಗಿದೆ.
ಈ ವೇಳೆ ವಿಧಾನಸಭೆಯ ವಿರೋಧ ಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ ಮತ್ತೀಮಡು, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಶಾಸಕರಾದ ಮಾನಪ್ಪ ವಜ್ಜಲ್, ಮಾಜಿ ಸಂಸದ ಮುನಿಸ್ವಾಮಿ ಸೇರಿದಂತೆ ಹಲವರು ಇದ್ದರು.

ಜಾತಿ ಜನಗಣತಿಗೆ ವಿರೋಧ: ಇನ್ನು ಬಿಜೆಪಿ ನಾಯಕರು ಜಾತಿ ಜನಗಣತಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಇದೀಗ ಜಾತಿ ಜನಗಣತಿಯ ಬಗ್ಗೆ ಚರ್ಚಿಸುತ್ತಿದ್ದಾರೆ. ಆದರೆ, ಇದಕ್ಕೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಜಾತಿ ಜನಗಣತಿಗೆ ಸಂಬಂಧಿಸಿದಂತೆ ಮಾತನಾಡಿರುವ ಬಿ.ವೈ ವಿಜಯೇಂದ್ರ ಅವರು, ಈ ವರದಿ ಅವೈಜ್ಞಾನಿಕವಾಗಿದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಬಿಜೆಪಿ ನಿರ್ದಿಷ್ಟ ನಿಲುವಿಗೆ ಬದ್ಧವಾಗಿದೆ. ರಾಜ್ಯದಲ್ಲಿ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ. ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಂ ಆಗಿದ್ದಾಗಲೇ ಈ ವರದಿಯನ್ನು ಯಾಕೆ ಮಂಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದೀಗ ಸರ್ಕಾರ ಮಂಡನೆ ಮಾಡಲು ಹೊರಟಿರುವ ವರದಿಯು ಅವೈಜ್ಞಾನಿಕವಾಗಿದೆ ಎಂದು ಕಾಂಗ್ರೆಸ್‌ನ ನಾಯಕರೇ ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವರದಿಯನ್ನು ಮಂಡಿಸಲು ಆವಸರಪಡುತ್ತಿದೆ. ಶಾಮನೂರು ಶಿವಶಂಕರಪ್ಪ ಹಾಗೂ ಡಿ.ಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.












Click it and Unblock the Notifications