ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆಯಲ್ಲಿ 100 ಗಡಿ ತಲುಪಿದ ಬಿಜೆಪಿ ಸದಸ್ಯರ ಸಂಖ್ಯೆ

|
Google Oneindia Kannada News

ನವದೆಹಲಿ, ಏಪ್ರಿಲ್ 1: ರಾಜ್ಯಸಭೆಯ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 4 ಸ್ಥಾನಗಳನ್ನು ಗೆದ್ದುಕೊಳ್ಳುವುದರ ಮೂಲಕ ಸಂಸತ್ ಮೇಲ್ಮನೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. 1988ರ ನಂತರದಲ್ಲಿ ರಾಜ್ಯಸಭೆಯಲ್ಲಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಪಕ್ಷ ಎನಿಸಿಕೊಂಡಿದೆ.

ಗುರುವಾರ ಈಶಾನ್ಯ ರಾಜ್ಯಗಳಿಗೆ ಸಂಬಂಧಿಸಿದಂತೆ 13 ಸ್ಥಾನಗಳಿಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನಾಲ್ವರು ಸದಸ್ಯರು ಗೆಲುವು ಸಾಧಿಸಿದ್ದಾರೆ. ಇದರಿಂದ ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ನಡೆಯುವ ಮೇಲ್ಮನೆ ಉಪಾಧ್ಯಕ್ಷ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವಿನ ದಾರಿ ಸುಗಮವಾಗಿದೆ.

ರಾಜ್ಯಸಭೆಗೆ: ಎಎಪಿಯಿಂದ ಹರ್ಭಜನ್, ರಾಘವ್, ಸಂದೀಪ್ ಅಭ್ಯರ್ಥಿಗಳುರಾಜ್ಯಸಭೆಗೆ: ಎಎಪಿಯಿಂದ ಹರ್ಭಜನ್, ರಾಘವ್, ಸಂದೀಪ್ ಅಭ್ಯರ್ಥಿಗಳು

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲೂ ಅತಿಹೆಚ್ಚು ಸಂಖ್ಯೆಯಲ್ಲಿ ಸದಸ್ಯರನ್ನು ಹೊಂದುರುವುದು ಬಿಜೆಪಿಯ ಉದ್ದೇಶವಾಗಿದೆ. ಆ ಮೂಲಕ ಉಭಯ ಸದನಗಳಲ್ಲಿ ಮಸೂದೆಗಳನ್ನು ಸುಗಮವಾಗಿ ಅಂಗೀಕರಿಸಲು ಬಿಜೆಪಿ ಶ್ರಮಿಸುತ್ತಿದೆ.

BJP Have More Than 100 Rajya Sabha Members, Looking for Better Chance in the President and VP Elections

ಅಸ್ಸಾಂನಲ್ಲಿ ಗೆಲುವಿನ ಬಗ್ಗೆ ಸಿಎಂ ಟ್ವೀಟ್:

ಅಸ್ಸಾಂನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಕುರಿತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. "ನಾವು ಅಸ್ಸಾಂನಿಂದ ಎರಡೂ ರಾಜ್ಯಸಭಾ ಸ್ಥಾನಗಳನ್ನು ಗೆದ್ದಿದ್ದೇವೆ. ಒಂದು ಬಿಜೆಪಿ ಮತ್ತು ನಮ್ಮ ಮಿತ್ರಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಪಕ್ಷದಿಂದ ಇನ್ನೊಂದು ಸ್ಥಾನವನ್ನು ಗೆದ್ದಿದ್ದೇವೆ. ಬಿಜೆಪಿ ಅಭ್ಯರ್ಥಿಯು 11 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಅಭ್ಯರ್ಥಿಯು 9 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ," ಎಂದು ಬರೆದುಕೊಂಡಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ತನ್ನ ಪರವಾಗಿ ಪೂರ್ಣ ಪ್ರಮಾಣದ ಸಂಖ್ಯಾಬಲವನ್ನೇ ಹೊಂದಿದೆ. ಹಾಗಿದ್ದರೂ ಕೆಲವೊಂದು ಮಸೂದೆಗಳಿಗೆ ಅಂಗೀಕಾರ ಪಡೆದುಕೊಳ್ಳುವುದಕ್ಕೆ ಮಿತ್ರಪಕ್ಷಗಳು ಅಥವಾ ತಮ್ಮದೇ ಪಕ್ಷದ ಸದಸ್ಯರನ್ನು ಮನವೊಲಿಸುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಈ ಹಿನ್ನೆಲೆ ಎರಡೂ ಸದನಗಳಲ್ಲಿ ಪೂರ್ಣ ಪ್ರಮಾಣದ ಸಂಖ್ಯಾಬಲವನ್ನು ಹೊಂದುವುದು ಬಿಜೆಪಿ ಮಟ್ಟಿಗೆ ಬಹಳ ಅಗತ್ಯವೆನಿಸಿದೆ.

ಮೇಲ್ಮನೆ ಉಪಾಧ್ಯಕ್ಷ ಚುನಾವಣೆ ಮೇಲೆ ಕಣ್ಣು:

ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ರಾಜ್ಯಸಭೆ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮೇಲ್ಮನೆಯಲ್ಲಿ ಚುನಾವಣೆ ಗೆದ್ದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಂಖ್ಯಾಬಲವನ್ನು ಹೊಂದುವುದರಲ್ಲಿ ಬಿಜೆಪಿ ಲೆಕ್ಕಾಚಾರ ಹಾಕಿಕೊಳ್ಳುತ್ತಿದೆ. ಅದರಿಂದ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸುಲಭವಾಗಲಿದೆ.

ಐದು ರಾಜ್ಯಸಭೆ ಸ್ಥಾನ ಗೆದ್ದುಕೊಂಡ ಆಪ್:

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯಸಭೆಯಲ್ಲಿ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಬಿಜೆಪಿಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್, ಸಿಪಿಐ(ಎಂ) ಸಿಪಿಐ ಮತ್ತು ಯುಪಿಪಿಎಲ್ ತಲಾ ಒಂದು ಸ್ಥಾನವನ್ನು ಗೆದ್ದಿವೆ.

ನಾಗಾಲ್ಯಾಂಡ್‌ನ ಬಿಜೆಪಿಯ ಹಾಲಿ ರಾಜ್ಯಸಭಾ ಸಂಸದ ಮತ್ತು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಫಾಂಗ್ನಾನ್ ಕೊನ್ಯಾಕ್ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಗಾಲ್ಯಾಂಡ್‌ನಿಂದ ಆಯ್ಕೆಯಾದ ಮೊದಲ ಮಹಿಳಾ ರಾಜ್ಯಸಭಾ ಸದಸ್ಯೆಯಾಗಿದ್ದಾರೆ.

English summary
BJP Have More Than 100 Rajya Sabha Members, Looking for Better Chance in the President and VP Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X