ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೊಷಣೆ ಸಾಧ್ಯತೆ!

ಬೆಂಗಳೂರು, ನ. 16: ಅಕಾಲಿಕ ಮರಣಕ್ಕೆ ತುತ್ತಾಗಿರುವ ರಾಜ್ಯಸಭಾ ಸದಸ್ಯ ಅಶೊಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಇಂದು ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ರಾಜ್ಯದಿಂದ ನಡೆಯುವ ರಾಜ್ಯಸಭಾ ಚುನಾವಣೆಗೆ‌ ನಾಮಪತ್ರ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತದೆ ಎನ್ನಲಾಗಿದೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿ‌ದ ಬಳಿಕ ಕಲಾಪಕ್ಕೆ ಹಾಜರಾಗಲು ದಿ. ಅಶೋಕ್ ಗಸ್ತಿ ಅವರಿಗೆ ಸಾಧ್ಯವಾಗಿರಲಿಲ್ಲ. ಅನಾರೋಗ್ಯದಿಂದ ಅವರು ಮೃತಪಟ್ಟಿದ್ದರು. ಆ ಸ್ಥಾನಕ್ಕೆ ಈಗ ಚುನಾವಣೆ ನಡೆಯಬೇಕಿದೆ.

bjp high command may announce its candidate for rajyasabha election in Karnataka

ರಾಜ್ಯ ಬಿಜೆಪಿ ಘಟಕ ಈಗಾಗಲೇ ಮೂರು ಹೆಸರುಗಳನ್ನು ಹೈಕಮಾಂಡಿಗೆ ಶಿಫಾರಸು ಮಾಡಿದೆ. ಪಟ್ಟಿಯಲ್ಲಿ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಅವರ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಶಂಕರಪ್ಪ (ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ) ಹಾಗೂ ಮಾಜಿ ಶಾಸಕ ನಿರ್ಮಲ್ ಕುಮಾರ್‌ ಸುರಾನಾ ಅವರ ಹೆಸರುಗಳನ್ನು ಶಿಫಾರಸು ಮಾಡಿದೆ. ಈ ಪೈಕಿ ಯಾರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+