ಎಲ್ಲಾ ರಾಜ್ಯಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿದ ಬಿಜೆಪಿ
ನವದೆಹಲಿ, ಫೆಬ್ರವರಿ 11 : ತನ್ನ ಎಲ್ಲಾ ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಮೂರು ಸಾಲಿನ ವಿಪ್ ಜಾರಿಗೊಳಿಸಿದೆ. ಮಂಗಳವಾರ ಸದನದಲ್ಲಿ ಎಲ್ಲಾ ಸದಸ್ಯರು ಹಾಜರಿರಬೇಕು ಎಂದು ವಿಪ್‌ನಲ್ಲಿ ಸೂಚನೆ ನೀಡಲಾಗಿದೆ.
ಮಂಗಳವಾರ ಎಲ್ಲಾ ಸದಸ್ಯರು ಸದನದಲ್ಲಿ ಇರಬೇಕು. ಸರ್ಕಾರದ ಪರವಾಗಿ ಇರಬೇಕು ಎಂದು ವಿಪ್‌ನಲ್ಲಿ ಬಿಜೆಪಿ ಸೂಚನೆ ನೀಡಿದೆ. ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.

ಸಂಜೆ 4 ಗಂಟೆಗೆ ರಾಜ್ಯಸಭೆಯಲ್ಲಿ 2020ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಬಗ್ಗೆ ಚರ್ಚೆ ನಡೆಸಿ, ಅನುಮೋದನೆ ಪಡೆಯಬೇಕಿದೆ. ಆದ್ದರಿಂದ, ಎಲ್ಲಾ ಸದಸ್ಯರಿಗೆ ವಿಪ್ ಜಾರಿಗೊಳಿಸಲಾಗಿದೆ.
ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದರು. ಮೊದಲ ಹಂತದ ಬಜೆಟ್ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 11ರ ತನಕ ನಡೆಯಲಿದೆ. ಇಂದು ಕೊನೆಯ ದಿನವಾದ ಹಿನ್ನಲೆಯಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಬೇಕಿದೆ.
ಮಾರ್ಚ್ 2 ರಿಂದ ಏಪ್ರಿಲ್ 3ರ ತನಕ ಪುನಃ ಸಂಸತ್ ಅಧಿವೇಶನ ನಡೆಯಲಿದೆ. ಈ ಬಜೆಟ್ ಅಧಿವೇಶನ ಮುಗಿಯುವ ಮೊದಲು 2020ರ ಬಜೆಟ್‌ಗೆ ಸರ್ಕಾರ ಒಪ್ಪಿಗೆಯನ್ನು ಪಡೆಯಬೇಕು.











Click it and Unblock the Notifications