ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ರಾಜ್ಯಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿದ ಬಿಜೆಪಿ

|
Google Oneindia Kannada News

ನವದೆಹಲಿ, ಫೆಬ್ರವರಿ 11 : ತನ್ನ ಎಲ್ಲಾ ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಮೂರು ಸಾಲಿನ ವಿಪ್ ಜಾರಿಗೊಳಿಸಿದೆ. ಮಂಗಳವಾರ ಸದನದಲ್ಲಿ ಎಲ್ಲಾ ಸದಸ್ಯರು ಹಾಜರಿರಬೇಕು ಎಂದು ವಿಪ್‌ನಲ್ಲಿ ಸೂಚನೆ ನೀಡಲಾಗಿದೆ.

ಮಂಗಳವಾರ ಎಲ್ಲಾ ಸದಸ್ಯರು ಸದನದಲ್ಲಿ ಇರಬೇಕು. ಸರ್ಕಾರದ ಪರವಾಗಿ ಇರಬೇಕು ಎಂದು ವಿಪ್‌ನಲ್ಲಿ ಬಿಜೆಪಿ ಸೂಚನೆ ನೀಡಿದೆ. ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.

ಕೇಂದ್ರ ಬಜೆಟ್; ಕರ್ನಾಟಕಕ್ಕೆ ಮೂರು ಹೊಸ ರೈಲು ಮಾರ್ಗ ಕೇಂದ್ರ ಬಜೆಟ್; ಕರ್ನಾಟಕಕ್ಕೆ ಮೂರು ಹೊಸ ರೈಲು ಮಾರ್ಗ

BJP Issues Three Line Whip To Rajya Sabha Members

ಸಂಜೆ 4 ಗಂಟೆಗೆ ರಾಜ್ಯಸಭೆಯಲ್ಲಿ 2020ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಬಗ್ಗೆ ಚರ್ಚೆ ನಡೆಸಿ, ಅನುಮೋದನೆ ಪಡೆಯಬೇಕಿದೆ. ಆದ್ದರಿಂದ, ಎಲ್ಲಾ ಸದಸ್ಯರಿಗೆ ವಿಪ್ ಜಾರಿಗೊಳಿಸಲಾಗಿದೆ.

'ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ನಿರಾಸೆ''ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ನಿರಾಸೆ'

ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದರು. ಮೊದಲ ಹಂತದ ಬಜೆಟ್ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 11ರ ತನಕ ನಡೆಯಲಿದೆ. ಇಂದು ಕೊನೆಯ ದಿನವಾದ ಹಿನ್ನಲೆಯಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಬೇಕಿದೆ.

ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ? ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?

ಮಾರ್ಚ್ 2 ರಿಂದ ಏಪ್ರಿಲ್ 3ರ ತನಕ ಪುನಃ ಸಂಸತ್ ಅಧಿವೇಶನ ನಡೆಯಲಿದೆ. ಈ ಬಜೆಟ್ ಅಧಿವೇಶನ ಮುಗಿಯುವ ಮೊದಲು 2020ರ ಬಜೆಟ್‌ಗೆ ಸರ್ಕಾರ ಒಪ್ಪಿಗೆಯನ್ನು ಪಡೆಯಬೇಕು.

English summary
BJP issued a three line whip to all Rajya Sabha members to present in house on February 11, 2020. Finance minister Nirmala Sitharaman will reply in the house on budget at 4 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X