Breaking; 2024ರ ಲೋಕಸಭೆ ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ

ನವದೆಹಲಿ, ಏಪ್ರಿಲ್ 29 ; ಬಿಜೆಪಿ 2024ರ ಲೋಕಸಭೆ ಚುನಾವಣೆ ತಯಾರಿ ಆರಂಭಿಸಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪ್ರಚಾರದ ಮೂಲಕ ಚುನಾವಣೆ ಸಿದ್ಧತೆಗಳನ್ನು ಆರಂಭಿಸಲಾಗುತ್ತದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಈ ಸಮಿತಿಗಳನ್ನು ರಚನೆ ಮಾಡಿದ್ದು, ಚುನಾವಣಾ ಪ್ರಚಾರಕ್ಕೆ ಶೀಘ್ರವೇ ಚಾಲನೆ ದೊರೆಯಲಿದೆ. ಸಂಸದರು, ರಾಜ್ಯ ಬಿಜೆಪಿಯ ಅಧ್ಯಕ್ಷರು ಈ ಸಮಿತಿಯಲ್ಲಿದ್ದಾರೆ.

ಯಾವಾಗ ಈ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂಬ ದಿನಾಂಕ ಇನ್ನೂ ನಿಗದಿಯಾಗಿಲ್ಲ. ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಒಂದು ಕಡೆ ಸೇರಿಸಿ, ಅಲ್ಲಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂಬ ಮಾಹಿತಿ ಇದೆ.

BJP Kick Starts 2024 Lok Sabha Election Preparations

ಲೋಕಸಭೆ ಚುನಾವಣಾ ಪ್ರಚಾರಕ್ಕೆ ದೇಶಾದ್ಯಂತ ಸಂಸದರನ್ನು ಬಿಜೆಪಿ ನಿಯೋಜನೆ ಮಾಡಲಿದೆ. ಪಕ್ಷದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸಹ ಈ ಪ್ರಚಾರ ಕಾರ್ಯವನ್ನು ಮುನ್ನಡೆಸಲಿದ್ದಾರೆ.

ಒಟ್ಟು ಮೂರು ಹಂತದಲ್ಲಿ ಈ ಪ್ರಚಾರ ಕಾರ್ಯ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಪಕ್ಷ ಸಮಿತಿಯನ್ನು ರಚನೆ ಮಾಡುತ್ತಿದೆ. ಮೂರನೇ ಹಂತದಲ್ಲಿ ಸಾರ್ವಜನಿಕ ಸಮಾವೇಶ ನಡೆಸಿ ಪಕ್ಷದ ಆಡಳಿತ, ಸಾಧನೆಯನ್ನು ಜನರಿಗೆ ತಿಳಿಸಲಾಗುತ್ತದೆ.

ಲೋಕಸಭೆ ಚುನಾವಣೆ ಸಿದ್ಧತೆ ನಡುವೆಯೇ ಬಿಜೆಪಿ ಗುಜರಾತ್, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ವಿಧಾನಸಭೆ ಚುನಾವಣೆಯನ್ನು ಎದುರಿಸಬೇಕಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+