Assembly Election Results 2024: ಬಿಜೆಪಿಗೆ ಮುನ್ನಡೆ, ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು, ಅಕ್ಟೋಬರ್ 08: ಹರಿಯಾಣದಲ್ಲಿ ಒಂದೇ ಹಂತದಲ್ಲಿ ಎಲ್ಲ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು ಮಂಗಳವಾರ (ಅ.8) ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಸದ್ಯ ಮತ ಎಣಿಕೆ ನಡೆಯುತ್ತಿದೆ. ಈವರೆಗೆ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಹಿನ್ನಡೆ ಆಗಿದೆ. ಈ ಸಂಬಂಧ ಚುನಾವಣೆ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಮುನ್ನಡೆ ಸಾಧಿಸಿದೆ.

ಮತ ಎಣಿಕೆ ಆರಂಭವಾಗುತ್ತಿದ್ದಂತೆ ಮ್ಯಾಜಿಕ್ ನಂಬರ್‌ 46ಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿತ್ತು. ಬಿಜೆಪಿ ಹಿನ್ನಡೆ ಎದುರಿಸುತ್ತು. ಅಷ್ಟರಲ್ಲಾಗಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಮುಂದಾಗಿದ್ದರು. ಸಿಹಿ ಹಂಚಿ, ರಾಹುಲ್ ಗಾಂಧಿ ಫೋಟೋ ಹಿಡಿದು ಘೋಷಣೆ ಕೂಗಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಬಿಜೆಪಿಗೆ ಮುನ್ನಡೆ ಸಾಧಿಸುತ್ತಿದ್ದಂತೆ ಚುನಾವಣೆ ಆಯೋಗದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.

BJP Lead in Haryana Assembly Election Results 2024 Congress Outrage on ECI

ಮೂರು ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆಗೆ ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ ಸಿಗುವ ಭರವಸೆ ಇತ್ತು. ಇದೀಗ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಂತೆ ಕಾಣುತ್ತಿದೆ. ಇದನ್ನು ಕಂಡು ಕಾಂಗ್ರೆಸ್ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.

ಹರಿಯಾಣ ಚಿತ್ರಣ ಬದಲಾಗಲಿದೆ: ಸುಪ್ರಿಯಾ ವಿಶ್ವಾಸ

ಇನ್ನೂ ಈ ಕುರಿತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ ಅವರು ಪ್ರತಿಕ್ರಿಯಿಸಿದ್ದಾರೆ. ಸದ್ಯದ ಮತ ಎಣಿಕೆ (12 ಗಂಟೆ ಹೊತ್ತಿಗೆ) ಪ್ರಕಾರ, ರಾಜ್ಯದಲ್ಲಿ ಬಿಜೆಪಿ ಅರ್ಧದಷ್ಟು ಸೀಟುಗಳನ್ನು ಪಡೆದು ಮುನ್ನಡೆ ಸಾಧಿಸುತ್ತಿದೆ. ಈ ಸನ್ನಿವೇಶ ಶೀಘ್ರವೇ ಬದಲಾಗಲಿದೆ. ಮುಂದಿನ ಸುತ್ತುಗಳಲ್ಲಿ ಕಾಂಗ್ರೆಸ್‌ಗೆ ಮತ್ತೆ ಉತ್ತಮ ಪೈಪೋಟಿ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯದ ಹರಿಯಾಣ ಚಿತ್ರಣ ಬದಲಾಗಲಿದೆ. ಕೂಡಲೇ ಕಾಂಗ್ರೆಸ್‌ಗೆ ಖುಷಿ ಸುದ್ದಿ ಸಿಗಲಿದೆ. ನಾವು ಚುನಾವಣೆ ಆಯೊಗದ ವೆಬ್‌ಸೈಟ್ ಪರಿಶೀಲಿಸುತ್ತಿದ್ದೇವೆ. ನಮಗೆ ಮತದಾರರ ಮೇಲಿನ ವಿಶ್ವಾಸ ಕಡಿಮೆ ಆಗಿಲ್ಲ ಕಾದು ನೋಡೋಣ ಎಂದು ತಿಳಿಸಿದ್ದಾರೆ.

ಸದ್ಯ ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಕಾಂಗ್ರೆಸ್‌ಗೆ ಆಘಾತವಾಗಿದೆ. ಮೂರನೇ ಭಾರಿಗೆ ಬಿಜೆಪಿ ಹ್ಯಾಟ್ರಿಕ್ ಭಾರಿಸಲು ಸಜ್ಜಾಗಿದೆ. ಸದ್ಯ ಮತ ಎಣಿಕೆ ಮುಂದುವರಿದಿದೆ.

ಇನ್ನು ಹರಿಯಾಣದಲ್ಲಿ ವಿವಿಧ ಕ್ಷೇತ್ರಗಳ ಪೈಕಿ ಪ್ರಮುಖವಾಗಿದ್ದ ಜುಲಾನಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಜೆಪಿ ಅಭ್ಯರ್ಥಿಗಳಿಗಿಂತಲೂ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಕುಸ್ತಿಪಟು ವಿನೇಶ್ ಪೊಗಟ್ ಅವರು ಹೆಚ್ಚಿನ ಮತ ಪಡೆದು ಗೆದ್ದು ಬೀಗಿದ್ದಾರೆ. ಕ್ಷೇತ್ರಾದ್ಯಂತೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+