ಹೃದಯಾಘಾತದಿಂದ ಬಿಜೆಪಿ ಮುಖಂಡ ದೇವಿ ಸಿಂಗ್ ಪಟೇಲ್ ನಿಧನ
ಭೋಪಾಲ್, ನವೆಂಬರ್ 05: ಮಧ್ಯಪ್ರದೇಶ ಬಿಜೆಪಿ ಮುಖಂಡ ದೇವಿ ಸಿಂಗ್ ಪ್ರಸಾದ್ ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ನವೆಂಬರ್ ಅಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಇಲ್ಲಿನ ರಾಜ್ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವಿ ಸಿಂಗ್ ಪಟೇಲ್ ಅವರ ನಿಧನ ಬಿಜೆಪಿಗೆ ಆಘಾತವನ್ನುಂಟು ಮಾಡಿದೆ.
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಒಟ್ಟು ವಿಧಾನಸಭಾ ಕ್ಷೇತ್ರಗಳು 230. ಪ್ರಸ್ತುತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116.

230 ವಿಧಾನಸಭಾ ಕ್ಷೇತ್ರಗಳಲ್ಲಿ 117 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಈಗಾಗಲೇ ಬಿಜೆಪಿ ಬಿಡುಗಡೆ ಮಾಡಿದೆ.












Click it and Unblock the Notifications