ಅಲಹಾಬಾದ್: ಗುಂಡಿಕ್ಕಿ ಬಿಜೆಪಿ ಮುಖಂಡನ ಕೊಲೆ
ಅಲಹಅಬಾದ್, ಮೇ 09: ಬಿಜೆಪಿ ಮುಖಂಡ ಪವನ್ ಕೇಸರಿ ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಅಲಹಾಬಾದಿನ ಫುಲ್ಪುರದಲ್ಲಿ ನಡೆದಿದೆ.
ಕೆಲವು ದುಷ್ಕರ್ಮಿಗಳು ಮಂಗಳವಾರ ಸಂಜೆ ಕೇಸರಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತರಾಗಿದ್ದಾರೆಂದು ವೈದ್ಯರು ಘೋಷಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

"ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದದಿಲ್ಲ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದೇವೆ" ಎಂದು ಪೊಲೀಸರು ತಿಳಿಸಿದ್ದಾರೆ.











Click it and Unblock the Notifications