ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ 19ಸೋಂಕು

|
Google Oneindia Kannada News

ನವದೆಹಲಿ, ಸೆ. 27: ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.

ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ.

BJP leader Uma Bharti tests positive for Covid 19

24 ಗಂಟೆಯಲ್ಲಿ ಭಾರತದಲ್ಲಿ 88,600 ಹೊಸ ಕೋವಿಡ್ ಪ್ರಕರಣ 24 ಗಂಟೆಯಲ್ಲಿ ಭಾರತದಲ್ಲಿ 88,600 ಹೊಸ ಕೋವಿಡ್ ಪ್ರಕರಣ

ಈ ಬಗ್ಗೆ ಟ್ವೀಟ್ ಮಾಡಿ, ''ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್ 19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ'' ಎಂಬರ್ಥದಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ್ ಜೋಷಿ ಅವರ ಜೊತೆಗೆ ಉಮಾ ಭಾರತಿ ಕೂಡಾ ವಿಚಾರಣೆ ಎದುರಿಸಿದ್ದು, ಸೆಪ್ಟೆಂಬರ್ 30ರಂದು ನೀಡಲು ಲಕ್ನೋದ ಸಿಬಿಐ ಕೋರ್ಟ್ ಮುಂದಾಗಿದೆ. ತೀರ್ಪಿನ ದಿನದಂದು ಹಾಜರಿರಬೇಕಾಗಿತ್ತು. ಆದರೆ, ಈಗ ಕೋವಿಡ್ ಹಿನ್ನೆಲೆಯಲ್ಲಿ ವಿನಾಯಿತಿ ಪಡೆದುಕೊಳ್ಳಬಹುದು

English summary
Bharatiya Janata Party (BJP) leader Uma Bharti has tested positive for the novel coronavirus. Uma Bharti informed that she has tested Covid 19 positive and appealed to those who had come in contact with her, to get a Covid test done.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X