ಉಪ ರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆ

ನವದೆಹಲಿ, ಜುಲೈ 16: ಭಾರತದ ಮುಂದಿನ ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ಶನಿವಾರ ಸಂಜೆ ಉತ್ತರ ಸಿಗುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷವು ಜುಲೈ 16ರ ಸಂಜೆ ವೇಳೆಗೆ ಅಧಿಕೃತವಾಗಿ ಪಕ್ಷದ ಅಭ್ಯರ್ಥಿ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿ ಅಂತಿಮಗೊಳಿಸುವ ಸಾಧ್ಯತೆಯಿದೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರ ಬಿಜೆಪಿ ತನ್ನ ಮಿತ್ರಪಕ್ಷಗಳಿಗೂ ಹೆಸರನ್ನು ತಿಳಿಸಲಿದೆ.

ರಾಷ್ಟ್ರಪತಿ ಚುನಾವಣೆಯಂತೆಯೇ ಪ್ರತಿಪಕ್ಷಗಳು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಕ್ಕೆ ನಿರ್ಧರಿಸಿವೆ. ಈ ಹಿನ್ನೆಲೆ ಎನ್‌ಡಿಎ ಮೈತ್ರಿಕೂಟದಿಂದ ಯಾವ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸಬೇಕು ಎಂಬುದರ ಕುರಿತು ಮಿತ್ರಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ.

BJP likely to announce its Vice President candidate on July 16th Evening

ಪ್ರತಿಪಕ್ಷದ ಅಭ್ಯರ್ಥಿ ಆಯ್ಕೆ ಹೊಣೆ ಖರ್ಗೆಗೆ:

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳನ್ನು ಸಂಪರ್ಕಿಸುವ ಹೊಣೆಯನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲಿಕಾರ್ಜುನ್ ಖರ್ಗೆಗೆ ಕಾಂಗ್ರೆಸ್ ವಹಿಸಲಾಗಿದೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿಕೊಳ್ಳುವುದಕ್ಕೆ ಪ್ರತಿಪಕ್ಷಗಳು ಅಗತ್ಯ ಸಂಖ್ಯಾಬಲವನ್ನು ಹೊಂದಿವೆಯೇ ಎಂಬುದಕ್ಕೆ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾಕ್ ಓವರ್ ಮಾಡುವುದಕ್ಕಿಂದ ಸ್ಪರ್ಧೆ ನೀಡುವುದು ನಮ್ಮ ಹಕ್ಕು ಎಂದಿದ್ದಾರೆ.

ಉಪ ರಾಷ್ಟ್ರಪತಿ ಆಯ್ಕೆಯ ವಿಧಾನ:

2022ರಲ್ಲಿ ದೇಶದ 16ನೇ ಉಪ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಲಾಗುತ್ತದೆ. ಈ ವೇಳೆ ಸಂಸತ್ ಉಭಯ ಸದನಗಳ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ರಾಜ್ಯಸಭೆಯ 233 ಚುನಾಯಿತ ಸದಸ್ಯರು, ರಾಜ್ಯಸಭೆಯ 12 ನಾಮ ನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ 543 ಸದಸ್ಯರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು ಮೂರನೇ ಎರಡರಷ್ಟು ಮತಗಳನ್ನು ಪಡೆದುಕೊಳ್ಳುವ ಅಭ್ಯರ್ಥಿಯು ಮುಂದಿನ ಉಪ ರಾಷ್ಟ್ರಪತಿ ಆಗಿ ಆಯ್ಕೆ ಆಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+