Breaking: ಜಮ್ಮು ಮತ್ತು ಕಾಶ್ಮೀರ ಚುನಾವಣೆ, ಬಿಜೆಪಿ ತಂತ್ರ ಬಹಿರಂಗ!

ಶ್ರೀನಗರ, ಆಗಸ್ಟ್‌ 26: ಜಮ್ಮು ಮತ್ತು ಕಾಶ್ಮೀರದ 90 ಸದಸ್ಯ ಬಲದ ವಿಧಾನಸಭೆಯ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಒಟ್ಟು ಮೂರು ಹಂತದಲ್ಲಿ ಕಣಿವೆ ರಾಜ್ಯದಲ್ಲಿ ಮತದಾನ ನಡೆಯಲಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕಾಶ್ಮೀರದ ಚುನಾವಣೆಗೆ ತಯಾರಿ ನಡೆಸಿದೆ. ಪಕ್ಷದ ಕಾರ್ಯತಂತ್ರವೂ ಬಹಿರಂತವಾಗಿದೆ. ಅಕ್ಟೋಬರ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ 90 ಕ್ಷೇತ್ರಗಳಲ್ಲಿ 60-70 ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಚುನಾವಣೆಗೆ ಬಿಜೆಪಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ಆದರೆ ತಾನು ಸ್ಪರ್ಧಿಸದ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಪಕ್ಷ ಬೆಂಬಲವನ್ನು ನೀಡಲಿದೆ ಎಂಬ ಮಾಹಿತಿ ಸಿಕ್ಕಿದೆ. ಇದು ಕಣಿವೆ ರಾಜ್ಯದ ಚುನಾವಣೆಯ ಕುತೂಹಲವನ್ನು ಮತ್ತಷ್ಟು ಹೆಚ್ಚಾಗಿಸಿದೆ.

BJP Likely To Contest 60 To 70 Seats In Jammu And Kashmir Assembly Election 2024

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿತು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. 'ಇಂಡಿಯಾ' ಮೈತ್ರಿಕೂಟ, ಬಿಜೆಪಿ ಚುನಾವಣೆಯಲ್ಲಿ ಎದುರಾಳಿಗಳು.

ಬಿಜೆಪಿಯ ಕಾರ್ಯತಂತ್ರ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯನ್ನು ನಡೆಸಿದರು. ಬಿಜೆಪಿಯ ಪ್ರಮುಖ ನಾಯಕರಾದ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಮತ್ತು ಜಮ್ಮು ಮತ್ತು ಕಾಶ್ಮೀರ ಭಾಗದ ಪ್ರಮುಖ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಭೆಯಲ್ಲಿಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಕಾರ್ಯತಂತ್ರ ರೂಪಿಸಲಾಗಿದೆ. ಮೊದಲೇ ತೀರ್ಮಾನಿಸಿದಂತೆ ಬಿಜೆಪಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ. ಆದರೆ ಪಕ್ಷಕ್ಕೆ ಬೆಂಬಲ ನೀಡಲು ಪಕ್ಷೇತರ ಅಭ್ಯರ್ಥಿಗಳು ಬಯಸಿದರೆ ಅದಕ್ಕೆ ಒಪ್ಪಿಗೆ ನೀಡುವ ಆಯ್ಕೆಯನ್ನು ಬಿಜೆಪಿ ಮುಕ್ತವಾಗಿ ಇಟ್ಟುಕೊಂಡಿದೆ.

ಸದ್ಯದ ಮಾಹಿತಿಯಂತೆ 90 ಕ್ಷೇತ್ರಗಳ ಪೈಕಿ ಬಿಜೆಪಿ 60-70 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಅಭ್ಯರ್ಥಿ ಕಣಕ್ಕಿಳಿಸದ ಕ್ಷೇತ್ರದಲ್ಲಿ ಪಕ್ಷ ಪಕ್ಷೇತರ ಅಭ್ಯರ್ಥಿಗಳನ್ನು ಬೆಂಬಲಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರ ಹಿಡಿಯಬೇಕು ಎಂದು ಕಾರ್ಯತಂತ್ರ ರೂಪಿಸಿ, ಈ ವಾರದಿಂದಲೇ ಬಿಜೆಪಿ ನಾಯಕರು ಪ್ರಚಾರವನ್ನು ಆರಂಭಿಸಲಿದ್ದಾರೆ.

ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮಾಡಿಕೊಂಡಿವೆ. ಲೋಕಸಭೆ ಚುನಾವಣೆ 2024ಕ್ಕೆ ಎರಡೂ ಪಕ್ಷಗಳು 'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದವು. ಈಗ ವಿಧಾನಸಭೆ ಚುನಾವಣೆಯಲ್ಲಿಯೂ ಸೀಟು ಹಂಚಿಕೆ ಮಾಡಿಕೊಂಡಿವೆ. ಲೋಕಸಭೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯೇ ಚುನಾವಣಾ ಪೂರ್ವ ಮೈತ್ರಿಯ ಮಾತುಕತೆ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. 24 ಸ್ಥಾನಗಳಿಗೆ 18/9/2024, 26 ಸೀಟುಗಳಿಗೆ 25/9/2024ರಂದು ಮತ್ತು 1/10/2024ರಂದು 40 ಸೀಟುಗಳಿಗೆ ಚುನಾವಣೆ ನಡೆಯುತ್ತಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+