ಬಿಜೆಪಿ ಅಭ್ಯರ್ಥಿ ಆಯ್ಕೆ : ಯುಪಿಯಲ್ಲಿ ಹಲವು ಸಂಸದರಿಗೆ ಟಿಕೆಟ್ ಇಲ್ಲ!

ನವದೆಹಲಿ, ಮಾರ್ಚ್ 24 : 2019ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನುಗಳಿಸಬೇಕಾದರೆ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಕ್ಷೇತ್ರ ಹೊಂದಿರುವ ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನಗಳಿಸಬೇಕು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ. ಅದಕ್ಕಾಗಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷ ಎಚ್ಚರಿಕೆ ಹೆಜ್ಜೆ ಇಡುತ್ತಿದೆ.

80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ದೊಡ್ಡ ರಾಜ್ಯ ಉತ್ತರ ಪ್ರದೇಶ. ಈ ಬಾರಿ ಚುನಾವಣೆಯಲ್ಲಿ ಶೇ 3/1 ಭಾಗದಷ್ಟು ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿಯೂ ಪಕ್ಷ ಎಚ್ಚರ ವಹಿಸುತ್ತಿದೆ.

ನವದೆಹಲಿಯಲ್ಲಿ ಕಳೆದ ಒಂದು ವಾರದಿಂದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಉತ್ತರ ಪ್ರದೇಶದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗುತ್ತಿದೆ.

ನಿಮ್ಮ ಸಂಸದರ ಕಾರ್ಯ ವೈಖರಿ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಹ ನಮೋ ಅಪ್ಲಿಕೇಶನ್ ಮೂಲಕ ಜನರಿಗೆ ಮನವಿ ಮಾಡಿದ್ದಾರೆ. ಎಷ್ಟು ಜನ ಹಾಲಿ ಸಂಸದರಿಗಗೆ ಟಿಕೆಟ್ ಕೈ ತಪ್ಪಲಿದೆ? ಎಂಬುದನ್ನು ಕಾದು ನೋಡಬೇಕಿದೆ..

25 ಅಭ್ಯರ್ಥಿಗಳಿಗೆ ಟಿಕೆಟ್ ಇಲ್ಲ

25 ಅಭ್ಯರ್ಥಿಗಳಿಗೆ ಟಿಕೆಟ್ ಇಲ್ಲ

'ಉತ್ತರ ಪ್ರದೇಶದ ರಾಜ್ಯ ಘಟಕ ಶಿಫಾರಸು ಮಾಡಿರುವ ಪಟ್ಟಿಯಲ್ಲಿ 25 ಅಭ್ಯರ್ಥಿಗಳಿಗೆ ಟಿಕೆಟ್ ಕೈ ತಪ್ಪುವ ಭೀತಿ ಇದೆ' ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಹಲವು ಸುತ್ತುಗಳ ಲೆಕ್ಕಾಚಾರದ ಬಳಿಕ ಅಭ್ಯರ್ಥಿ ಆಯ್ಕೆ ಮಾಡುತ್ತಿದ್ದಾರೆ.

ಹಲವು ಸುತ್ತುಗಳ ಪರಿಶೀಲನೆ

ಹಲವು ಸುತ್ತುಗಳ ಪರಿಶೀಲನೆ

ಹಲವು ಸುತ್ತುಗಳ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತಿದೆ. ಹಲವು ಸಮೀಕ್ಷೆಗಳ ವರದಿಗಳನ್ನು ಆಧರಿಸಿ ಯಾರು ಸೂಕ್ತ ಅಭ್ಯರ್ಥಿ ಎಂದು ಕೇಂದ್ರ ಚುನಾವಣಾ ಸಮಿತಿ ತೀರ್ಮಾನ ಕೈಗೊಳ್ಳುತ್ತಿದೆ. ಶನಿವಾರವೂ ಸಹ ಉತ್ತರ ಪ್ರದೇಶದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಮನವಿ

ಪ್ರಧಾನಿ ನರೇಂದ್ರ ಮೋದಿ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರು ಸಹ ನಮೋ ಅಪ್ಲಿಕೇಶನ್ ಮೂಲಕ ನಿಮ್ಮ ಸಂಸದರ ಕಾರ್ಯ ಕ್ಷಮತೆ ಬಗ್ಗೆ ಮಾಹಿತಿ ನೀಡಿದ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಟಿಕೆಟ್ ಹಂಚಿಕೆ ಮಾಡುವಾಗ ಅಪ್ಲಿಕೇಶನ್‌ನಲ್ಲಿ ಬಂದ ಸಲಹೆಗಳನ್ನು ಸ್ವೀಕಾರ ಮಾಡಲಾಗುತ್ತದೆ.

ಯೋಗಿ ಆದಿತ್ಯನಾಥ್ ಹಾಜರಿ

ಯೋಗಿ ಆದಿತ್ಯನಾಥ್ ಹಾಜರಿ

ಉತ್ತರ ಪ್ರದೇಶದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಭಿಪ್ರಾಯವನ್ನು ಕೇಳಲಾಗುತ್ತಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅವರು ಸಹ ಹಾಜರಿದ್ದರು. ಸೋಮವಾರ ಪುನಃ ಸಮಿತಿ ಸಭೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+