Delhi Elections 2025: ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ
ರಾಷ್ಟ್ರ ರಾಜಧಾನಿ ದೆಹಲಿ 2025ರ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷದೊಂದಿಗೆ ಸೆಣಸಾಡಲು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ (INC), ಭಾರತೀಯ ಜನತಾ ಪಕ್ಷ (BJP) ಅವರು ದೆಹಲಿಯಲ್ಲಿ ತ್ರಿಕೋನ ಯುದ್ಧದಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.
ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಪಕ್ಷವು ಈಗಾಗಲೇ ತನ್ನ ಎಲ್ಲ ಅಭ್ಯರ್ಥಿಗಳನ್ನು ಘೋಷಿಸಿದೆ. ಇತ್ತ ಕಾಂಗ್ರೆಸ್ ಕೂಡ ಇದುವರೆಗೆ ಸುಮಾರು 35 ಹೆಸರುಗಳನ್ನು ಘೋಷಣೆ ಮಾಡಿದೆ. ಈಗ ದೆಹಲಿ ವಿಧಾನಸಭೆ ಚುನಾವಣೆ-2025ಕ್ಕೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಗಾಗಿ ಜನರು ಕುತೂಹಲದಿಂದ ಕಾಯುತ್ತಿದ್ದಾರೆ.

ವರದಿಗಳ ಪ್ರಕಾರ, ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಮ್ಮ ರಾಜ್ಯ ಘಟಕದ ಮುಖ್ಯಸ್ಥರು, ಮಾಜಿ ದೆಹಲಿ ಮುಖ್ಯಸ್ಥರು ಮತ್ತು ಹಲವಾರು ಮಾಜಿ ಸಂಸದರನ್ನು ಒಳಗೊಂಡಂತೆ ಅನೇಕ ನಾಯಕರನ್ನೇ ಮತ್ತೆ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯರ ಪಟ್ಟಿಯಲ್ಲಿ ಈ ಮುಂದಿನವರ ಹೆಸರುಗಳಿವೆ ಎಂದು ಹೇಳಲಾಗುತ್ತಿದೆ. ಮೀನಾಕ್ಷಿ ಲೇಖಿ, ಮಂಜಿಂದರ್ ಸಿಂಗ್ ಸಿರ್ಸಾ, ಸತೀಶ್ ಉಪಾಧ್ಯಾಯ, ಕಪಿಲ್ ಮಿಶ್ರಾ, ರಮೇಶ್ ಭಿಧುರಿ, ವೀರೇಂದ್ರ ಸಚ್‌ದೇವ, ಪರ್ವೇಶ್ ವರ್ಮಾ, ಸ್ಮೃತಿ ಇರಾನಿ ಮತ್ತು ಇತರರು ಇದ್ದಾರೆ ಎನ್ನಲಾಗಿದೆ.

ಜನವರಿ ಮೊದಲ ವಾರದಲ್ಲಿ ದೆಹಲಿಯ ಜಪಾನೀಸ್ ಪಾರ್ಕ್‌ನಲ್ಲಿ ಪ್ರಧಾನಿ ಮೋದಿಯವರ ಮೆಗಾ ರ್‍ಯಾಲಿಯನ್ನು ನಿಗದಿಪಡಿಸಿದ ನಂತರ, ಮುಂದಿನ ಒಂದೆರಡು ದಿನಗಳಲ್ಲಿ ದೆಹಲಿ ವಿಧಾನಸಭಾ ಚುನಾವಣೆ 2025ರ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಪ್ರಕಟಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಯೋಜನೆ ಘೋಷಿಸಿದ ಆಪ್: ಚುನಾವಣೆಗೂ ಮುನ್ನವೇ ಆಮ್ ಆದ್ಮಿ ಪಕ್ಷವು ಹೊಸ ಘೋಷಣೆ ಮಾಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನದ ಅರ್ಚಕರು ಮತ್ತು ಗುರುದ್ವಾರ ಗ್ರಂಥಗಳಿಗೆ ಮಾಸಿಕ 18,000 ಗೌರವಧನ ನೀಡುವುದಾಗಿ ಘೋಷಿಸಿದ್ದಾರೆ.
ಈ ಯೋಜನೆಯ ನೋಂದಣಿಯನ್ನು ಡಿಸೆಂಬರ್ 31ರಂದು ಕನ್ನಾಟ್ ಪ್ಲೇಸ್ ಹನುಮಾನ್ ಮಂದಿರದಿಂದ ಪ್ರಾರಂಭಿಸಲಾಗುವುದು ಎಂದು ಹೇಳಿದ್ದು, ಮುಂದಿನ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಿಗದಿಯಾಗಿದೆ. ಭಾರತೀಯ ಚುನಾವಣಾ ಆಯೋಗವು ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ದೆಹಲಿಯ ಪ್ರಸ್ತುತ ವಿಧಾನಸಭೆಯ ಅವಧಿಯು ಫೆಬ್ರವರಿ 23ರಂದು ಮುಕ್ತಾಯಗೊಳ್ಳುತ್ತದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications