2019ರಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈ ರಾಜ್ಯಗಳ ಮೇಲೆ ಬಿಜೆಪಿ ಕಣ್ಣು!

ಬೆಂಗಳೂರು, ಆಗಸ್ಟ್ 29 : 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 300 ಸ್ಥಾನಗಳಲ್ಲಿ ಜಯಗಳಿಸುವ ಗುರಿ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕು ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಂಗಳವಾರ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ 2014ರ ಚುನಾವಣೆಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ.

ಕಳೆದ ಆರು ತಿಂಗಳಿನಿಂದ ಬಿಜೆಪಿಯ ಒಂದು ತಂಡ ಈ ಗುರಿಯೊಂದಿಗೆ ಚುನಾವಣೆ ಸಿದ್ಧತೆ ನಡೆಸುತ್ತಿದೆ. ಯಾವ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ಈ ತಂಡ ವರದಿಯನ್ನು ತಯಾರು ಮಾಡುತ್ತಿದೆ.

BJP looking to increase its number in the Lok Sabha elections 2019

ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಜೊತೆಗೆ ಬೇರೆ ರಾಜ್ಯಗಳಲ್ಲಿಯೂ ಅಧಿಕ ಸ್ಥಾನಗಳನ್ನು ಗಳಿಸಬೇಕು ಎಂಬುದು ಗುರಿಯಾಗಿದೆ. ಗುಜರಾತ್, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬುದು ಬಿಜೆಪಿ ತಂತ್ರವಾಗಿದೆ.

ಗುಜರಾತ್, ರಾಜಸ್ಥಾನ, ಕರ್ನಾಟಕ, ಉತ್ತರಾಖಂಡ್, ದೆಹಲಿ, ಹಿಮಾಚಲ ಪ್ರದೇಶದಲ್ಲಿ ಪಕ್ಷ ಇನ್ನಷ್ಟು ಶ್ರಮ ಹಾಕಿದರೆ ಹೆಚ್ಚಿನ ಸಂಸದರನ್ನು ಆರಿಸಿ ತರುವ ಸಾಧ್ಯತೆ ಇದೆ. ಆದ್ದರಿಂದ, ಈ ರಾಜ್ಯಗಳಲ್ಲಿ ಈಗಿನಿಂದಲೇ ಕಾರ್ಯತಂತ್ರ ಬದಲಾವಣೆ ಮಾಡಲು ಪಕ್ಷ ನಿರ್ಧರಿಸಿದೆ.

ಈಶಾನ್ಯ ರಾಜ್ಯಗಳಲ್ಲಿ 8 ರಿಂದ 10 ಸೀಟು, ಪಶ್ಚಿಮ ಬಂಗಾಳದಲ್ಲಿ 22 ರಿಂದ 24 ಸೀಟುಗಳನ್ನು ಗೆಲ್ಲುವುದು ಬಿಜೆಪಿಯ ಗುರಿ. ಆದರೆ, ಅಲ್ಲಿ ಬಿಜೆಪಿ ಪ್ರಸ್ತುತ ಹೊಂದಿರುವುದು ಕೇವಲ 2 ಸೀಟು. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಅಮಿತ್ ಶಾ ತಂತ್ರ ರೂಪಿಸಿದ್ದಾರೆ. ರಾಜ್ಯದಲ್ಲಿ 2 ಸಮಾವೇಶ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+