Get Updates
Get notified of breaking news, exclusive insights, and must-see stories!

BJP Manifesto: ವೃದ್ಧರು, ಬಡವರ ಕೈ ಹಿಡಿದ ಬಿಜೆಪಿ ಪ್ರಣಾಳಿಕೆ

ದೆಹಲಿ ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏಪ್ರಿಲ್ 14) ದೆಹಲಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆಯ ಮುಖ್ಯಾಂಶಗಳಲ್ಲಿ ವೃದ್ಧರು ಹಾಗೂ ಬಡವರಿಗೆ ಪ್ರಾಶಸ್ತ್ಯ ನೀಡಲಾಗಿದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು, ಯುವಕರು ಸೇರಿದಂತೆ ಬಡವರು ಹಾಗೂ ವೃದ್ಧರ ಏಳಿಗೆಯ ಜೊತೆಗೆ ಹಲವಾರು ಭರವಸೆಗಳನ್ನು ನೀಡಿದೆ.

ಹಾಗಾದರೆ ಪ್ರಣಾಳಿಕೆಯಲ್ಲಿ ಮೋದಿ ನೀಡಿದ ಗ್ಯಾರಂಟಿಗಳೇನು? ಅವುಗಳಲ್ಲಿ ಬಡವರು ಹಾಗೂ ವೃದ್ಧರಿಗೆ ಯಾವ ಭರವಸೆಯನ್ನು ನೀಡಲಾಗಿದೆ ಎಂದು ನೋಡೋಣ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬಡವರಿಗೆ ಉಚಿತ ಪಡಿತರ, ನೀರು ಮತ್ತಯ ಗ್ಯಾಸ್ ಸಂಪರ್ಕ ಕಲ್ಪಿಸಲಾಗುವುದು ಎಂದಿದೆ. ಇನ್ನೂ ವೃದ್ಧರು ಅಂದರೆ 70 ವರ್ಷ ಮೇಲ್ಪಟ್ಟವರು ಐದು ಲಕ್ಷದವರಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

BJP Manifesto BJP manifesto gave priority to the elderly and the poor

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದರೆ ಹತ್ತಕ್ಕೂ ಹೆಚ್ಚು ಗ್ಯಾರಂಟಿಗಳ ಸೌಲಭ್ಯವನ್ನು ನೀಡಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆಯನ್ನು ನೀಡಿದೆ.

ವಯಸ್ಸಾದಂತೆ ಕಾಯಿಲೆಗಳು ಹೆಚ್ಚಾಗುತ್ತವೆ. ಅದಕ್ಕಾಗಿ ಹೆಚ್ಚು ಹಣ ವ್ಯಯಿಸಬೇಕು. ಅಂಥವರಿಗೆ ಮೋದಿ ಅಭಯ ನೀಡಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮೇಲ್ಪಟ್ಟವರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಮಾತ್ರವಲ್ಲದೆ ರಿಯಾಯಿತಿಯೊಂದಿಗೆ ಔಷಧ ವಿತರಣೆ ಜನೌಷಧಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್, ಲಖ್ಪತಿ ದೀದಿ ಮಾಡುವ ಗುರಿ, ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಅಸ್ಟಿಯೊಪೊರೋಸಿಸ್ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದಿದ್ದಾರೆ.

BJP Manifesto BJP manifesto gave priority to the elderly and the poor

ಜೊತೆಗೆ ವಂದೇ ಭಾರತ್ ರೈಲು ಜಾಲದ ವಿಸ್ತರಣೆ, ಕಾಯುವ ಪಟ್ಟಿಯ ಸಮಸ್ಯೆಯನ್ನು ತೆಗೆದುಹಾಕುವುದು, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳನ್ನು ತರುವುದು, ಹೊಸ ವಿಮಾನ ನಿಲ್ದಾಣ, ಹೊಸ ಹೆದ್ದಾರಿ ಹಾಗೂ ಮೆಟ್ರೋ ಬರಲಿವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ದೇಶದ ಬೆನ್ನೆಲುಬು ರೈತರ ಉತ್ತಮ ಭವಿಷ್ಯಕ್ಕಾಗಿ ಪಿಎಂ ಕಿಸಾನ್ ನಿಧಿಯ ಪ್ರಯೋಜನಗಳು ಮುಂದುವರಿಯುತ್ತವೆ. ದೇಶದ ಹತ್ತು ಕೋಟಿ ರೈತರು ಭವಿಷ್ಯದಲ್ಲಿ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು. ಬಡವರು, ಯುವಕರು, ರೈತರು, ಮಹಿಳೆಯರು, ವಂಚಿತರು, ಹಿರಿಯ ನಾಗರಿಕರು ಸೇರಿ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ತತ್ವದಲ್ಲಿ ಪ್ರಣಾಳಿಕೆ ತಯಾರಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದರು. ಸುಮಾರು 14 ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಉಪಸ್ಥಿತರಿದ್ದರು. ಪ್ರಣಾಳಿಕೆ ಬಿಡುಗಡೆಗೂ ಮೊದಲು ನರೇಂದ್ರ ಮೋದಿ ಅವರು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಹರಿಯಾಣದ ರೈತನಿಗೆ, ಘಾಜಿಯಾಬಾದ್‌ನ ಯುವಕನಿಗೆ, ದೆಹಲಿಯ ನಿವಾಸಿಗೆ ಬಿಜೆಪಿಯ ಸಂಕಲ್ಪ ಪತ್ರದ ಪ್ರತಿಯನ್ನು ನೀಡಿದ್ದು ವಿಶೇಷವಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+