ಯುವಕರು ಮಹಿಳಾ ಮಣಿಗಳೇ ಬಿಜೆಪಿ ಟಾರ್ಗೆಟ್; ದಕ್ಷಿಣದಲ್ಲಿ ಪಕ್ಷ ಬಲವರ್ಧನೆಗೆ ಬ್ಲ್ಯೂ ಪ್ರಿಂಟ್ ರೆಡಿ
ನವದೆಹಲಿ, ಏಪ್ರಿಲ್ 14: ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ವಿಶೇಷ ಗ್ಯಾರಂಟಿ ಯೋಜನೆ ಘೋಷಿಸಿ ಅಧಿಕಾರ ಪಡೆದಿದೆ. ಇದೀಗ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಲು ಹೊಸ ಯೋಜನೆಗಳನ್ನು ಘೋಷಿಸಲು ರಾಜಕೀಯ ಪಕ್ಷಗಳು ಮುಂದಾಗಿವೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು 'ನಾರಿ ನ್ಯಾಯ' ಗ್ಯಾರಂಟಿ ಘೋಷಣೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಿ ನಾರಿ ನ್ಯಾಯ ಗ್ಯಾರಂಟಿಯನ್ನು ಘೋಷಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಉದ್ಯೋಗಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದು, ಇದೀಗ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಎರುವ ಕನಸು ಕಂಡ ಬಿಜೆಪಿಯೂ ಸಹ ಗ್ಯಾರಂಟಿ ಅಸ್ತ್ರಗಳಿಗೆ ಮೊರೆ ಹೋಗಿದೆ.

ಮೊದಲು ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಘೋಷಣೆ, ಇಲ್ಲಿ ರಾಜ್ಯದ ಮತದಾರ ಫುಲ್ ಮಾರ್ಕ್ಸ್ ನೀಡಿದ್ದಾನೆ. ಈ ಒಂದು ತಂತ್ರದಿಂದಲೇ ಈ ಬಾರಿ ಕಾಂಗ್ರೆಸ್ ಮತ್ತೊಂದು ರಣ ತಂತ್ರವನ್ನು ಹೆಣೆದುಕೊಂಡಿದೆ. ಇತ್ತ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ನೋಡಿದರೆ ಕರ್ನಾಟಕದ ಚುನಾವಣೆ ಈ ಪಕ್ಷದ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದು ತಿಳಿಯುತ್ತದೆ.
ಕರ್ನಾಟಕದಲ್ಲಿ ಪಂಚ ಗ್ಯಾರಂಟಿಗಳನ್ನ ನೀಡಿರುವ ಕಾಂಗ್ರೆಸ್ವ, ಮಹಿಳೆಯರು ಹಾಗೂ ಯುವಕರನ್ನೇ ಟಾರ್ಗೆಟ್ ಮಾಡಿಕೊಂಡು ಯೋಜನೆಗಳನ್ನ ತರುವ ಭರವಸೆ ನೀಡಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದಿರುವ ಕಾಂಗ್ರೆಸ್ ದಾರಿಯಲ್ಲೇ ಬಿಜೆಪಿ ಹೈಕಮಾಂಡ್ ಮೋದಿ ಗ್ಯಾರಂಟಿ ಅಸ್ತ್ರವನ್ನ ಪ್ರಯೋಗಿಸಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದು, ಈ ಪ್ರಣಾಳಿಕೆಯಲ್ಲಿ ಹೆಚ್ಚಾಗಿ ಮಹಿಳಾ ಮಣಿಗಳು ಹಾಗೂ ಯುವ ಸಮುದಾಯವನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ ನೀಡುವ ಭರವಸೆಯನ್ನ ನೀಡಿದ್ದು, ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ ನೀಡಲಾಗಿದೆ. ಅಲ್ಲದೇ ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಯನ್ನ ನೀಡಿದ್ದು, ಈ ಭರವಸೆಯ ಮೂಲಕ ಮಹಿಳಾ ಮತದಾರರ ಸೆಳೆಯುವ ತಂತ್ರಗಾರಿಕೆಯನ್ನ ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದ್ದು, ಈ ಮೂಲಕ ಮೋದಿ ಅವರು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಹೆಚ್ಚಿನದಾಗಿ ಮಹಿಳೆಯರು ಹಾಗೂ ಯುವಕರನೇ ಟಾರ್ಗೆಟ್ ಮಾಡಲಾಗಿದೆ.
ಇನ್ನೂ ಬಿಜೆಪಿ ಪ್ರಣಾಳಿಕೆಗೆ ಮೋದಿಯವರ ಗ್ಯಾರಂಟಿ ಅಸ್ತ್ರ ಎಂದು ಕರೆಯಲಾಗಿದೆ. ಇದು 14 ಭರವಸೆಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಮಹಿಳಾ ಸಬಲೀಕರಣ, ಯುವಕರು ಮತ್ತು ಬಡವರ ಉನ್ನತಿಗೆ ಗಮನಹರಿಸುತ್ತದೆ. ಅಂದರೆ, ಪ್ರಣಾಳಿಕೆಯು GYAN ಅನ್ನು ಕೇಂದ್ರೀಕರಿಸುತ್ತದೆ. ಇದು 'ಗರೀಬ್' (ಬಡವರು), ಯುವ (ಯುವಕರು), ಅನ್ನದಾತ (ರೈತರು) ಮತ್ತು ನಾರಿ (ಮಹಿಳೆಯರು) ಯರನ್ನು ಒಳಗೊಂಡ ಯೋಜನೆಗಳಾಗಿವೆ.
ಇತ್ತ ದಕ್ಷಿಣ ರಾಜ್ಯಗಳ ಫೈಕಿ ಈಗಾಗಲೇ ಕರ್ನಾಟಕದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ಹೀಗಾಗಿ ಮೋದಿ ಗ್ಯಾರಂಟಿ ಅಸ್ತ್ರಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಪಕ್ಷದಂತೆ ಮಹಿಳಾ ಮಣಿಯರನ್ನ ಹಾಗೂ ಯುವಕರನ್ನ ಹೆಚ್ಚಿನ ಆದ್ಯತೆ ನೀಡುವ ಮೂಲಕ ದಕ್ಷಿಣದಲ್ಲಿ ಪಕ್ಷ ಬಲವರ್ಧನೆಗೆ ಬ್ಲ್ಯೂ ಪ್ರಿಂಟ್ ಯನ್ನ ಬಿಜೆಪಿ ಹೈಕಮಾಂಡ್ ನಾಯಕರು ರೆಡಿ ಮಾಡಿಕೊಂಡಿದ್ದಾರೆ.
ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಕಾಂಗ್ರೆಸ್ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಗ್ಯಾರಂಟಿಗಳನ್ನ ನೀಡಿದ್ದು, ಇದೀಗ ಯಶಸ್ವಿಯಾಗಿದೆ. ಹೀಗಾಗಿ ಬಿಜೆಪಿಯೂ ಸಹ ಕಾಂಗ್ರೆಸ್ ನಂತೆ ಮಹಿಳೆಯಗಾಗಿ ಹೆಚ್ಚಿನ ಟಾರ್ಗೆಟ್ ಮಾಡಿ ಗ್ಯಾರಂಟಿಗಳನ್ನ ನೀಡುವ ಮೂಲಕ ದಕ್ಷಿಣ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ತಮ್ಮ ವರ್ಚಸ್ಸನ್ನ ಹೆಚ್ಚಿಸಿಕೊಳ್ಳುವ ತಂತ್ರಗಾರಿಕೆಯನ್ನ ಬಿಜೆಪಿ ಹೈಕಮಾಂಡ್ ನಾಯಕರು ಹೆಣೆದಿದ್ದಾರೆ ಎನ್ನಲಾಗಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications