BJP: ಬಿಜೆಪಿ ಆಡಳಿತ ರಾಜ್ಯಗಳ ಏಕೈಕ ಮಹಿಳಾ ಸಿ.ಎಂ, ಆಯ್ಕೆಯ ಲೆಕ್ಕಾಚಾರವೇನು ?!
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ (50) ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಮಹಿಳಾ ಶಾಸಕಿಗೆ ಮಣೆ ಹಾಕಿದ್ದು. ಬಿಜೆಪಿ ಹೈಕಮಾಂಡ್‌ನ ಲೆಕ್ಕಾಚಾರ ಹಲವು ಕಾರಣಗಳಿಗೆ ಅಚ್ಚರಿ ಮೂಡಿಸಿದೆ. ಇನ್ನು ಇದೀಗ ದೆಹಲಿಯಲ್ಲಿ ರೇಖಾ ಗುಪ್ತಾ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ದೇಶದಲ್ಲಿ ಇಬ್ಬರು ಮಹಿಳಾ ಮುಖ್ಯಮಂತ್ರಿಗಳು ಆಡಳಿತ ನಡೆಸುವಂತೆ ಆಗಿದೆ. ಹೌದು ಇಲ್ಲಿಯ ವರೆಗೆ ದೇಶದಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿ ಪಶ್ಚಿಮ ಬಂಗಾಳದಲ್ಲಿ ಇದ್ದರು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಹೊಸ ರಾಜಕೀಯ ಚೆಕ್‌ಮೆಟ್ ಇರಿಸಿದೆ. ಅದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ದೆಹಲಿಯಲ್ಲಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರು ಸಿಎಂ ಆಗಿದ್ದಾರೆ. ಮಹಿಳಾ ಸಿಎಂ ಆಯ್ಕೆಯ ಹಿಂದೆ ಹಲವು ಲೆಕ್ಕಾಚಾರಗಳು ಇವೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ರೇಖಾ ಗುಪ್ತಾ ಅವರು ಮಹಿಳಾ ಮುಖ್ಯಮಂತ್ರಿಯಾಗಿದ್ದು. ಇದು ಬಿಜೆಪಿಯ ಹೊಸ ಲೆಕ್ಕಾಚಾರ ಎಂದೇ ಹೇಳಲಾಗುತ್ತಿದೆ. ಅಲ್ಲದೆ ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಗಳಿಗೆ ದೊಡ್ಡ ಇತಿಹಾಸವೇ ಇದೆ.

27 ವರ್ಷಗಳ ನಂತರ ಇಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯು ಮುಂದಿನ ದಿನಗಳಲ್ಲಿ ಇಲ್ಲಿ ಉತ್ತಮ ಆಡಳಿತವನ್ನು ನೀಡುವ ಮೂಲಕ ದೆಹಲಿಯನ್ನು ಭದ್ರಕೋಟೆ ಮಾಡಿಕೊಳ್ಳುವ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ. ಅಲ್ಲದೆ ಮುಂದಿನ ಎರಡು ವರ್ಷದಲ್ಲಿ ಬಿಹಾರ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಸೇರಿದಂತೆ ಹಲವು ಪ್ರಮುಖ ರಾಜ್ಯಗಳ ಚುನಾವಣೆ ಎದುರಾಗಲಿದೆ. ಬಿಜೆಪಿ ಇದೀಗ ಮಹಿಳಾ ಮತದಾರರನ್ನು ಸೆಳೆಯುವುದಕ್ಕೆ ಹೊಸ ಹೆಜ್ಜೆಯನ್ನು ಇರಿಸಿದೆ.
ಹಲವು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಮತದಾರರ ಮತ ಸಹ ನಿರ್ಣಾಯಕ ಪಾತ್ರ ವಹಿಸಿದೆ. ಇದೇ ಕಾರಣಕ್ಕೆ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ಸೆಳೆಯುವುದಕ್ಕೆ ವಿಶೇಷ ಯೋಜನೆಗಳನ್ನು ಪರಿಚಯಿಸಿವೆ. ಆ ಯೋಜನೆಗಳು ಸಕ್ಸಸ್ ಸಹ ಆಗಿವೆ.
ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿ ಇತಿಹಾಸ!
ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಗಳ ವಿಷಯದಲ್ಲಿ ದೊಡ್ಡ ಇತಿಹಾಸವೇ ಇದೆ. ರೇಖಾ ಗುಪ್ತಾ ಅವರು ನಾಲ್ಕನೇ ದೆಹಲಿ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯಲ್ಲಿ ಮೊದಲ ಬಾರಿ ಬಿಜೆಪಿಯ ದಿ. ಸುಷ್ಮಾ ಸ್ವರಾಜ್ ಅವರು ಮಹಿಳಾ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಆಮ್ ಆದ್ಮಿ ಪಾರ್ಟಿಯ ಅತಿಶಿ ಅವರು ಸಹ ಮಹಿಳಾ ಮುಖ್ಯಮಂತ್ರಿಯಾಗಿದ್ದರು.

ರೇಖಾ ಗುಪ್ತಾ ಅವರ ಆಯ್ಕೆಯ ಹಿನ್ನೆಲೆ: ರೇಖಾ ಗುಪ್ತಾ ಅವರ ಆಯ್ಕೆಗೆ ಹಲವು ಕಾರಣಗಳಿವೆ. ರೇಖಾ ಗುಪ್ತಾ ಅವರು ವೃತ್ತಿಯಲ್ಲಿ ವಕೀಲೆಯಾಗಿದ್ದು. 30 ವರ್ಷಗಳಿಂದ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸುದೀರ್ಘ ಅವಧಿಯ ರಾಜಕೀಯದಲ್ಲಿ ಅವರು ಯಾವುದೇ ವಿವಾದಕ್ಕೆ ಸಿಲುಕಿಲ್ಲ. ಬಿಜೆಪಿ ಮಹಿಳೆಯರಿಗೆ ಪ್ರಾಧಾನ್ಯತೆ ಕೊಡುತ್ತಿದೆ ಎಂದು ತೋರಿಸುವ ಲೆಕ್ಕಾಚಾರವೂ ಇದರ ಹಿಂದೆ ಇದೆ ಎಂದು ಹೇಳಲಾಗುತ್ತಿದೆ.












Click it and Unblock the Notifications