K. Annamalai: ರಾಜ್ಯಸಭೆಗೆ ಕೆ. ಅಣ್ಣಾಮಲೈ, ಮೋದಿ ಸಂಪುಟದಲ್ಲಿ ಸಚಿವ ಸ್ಥಾನ?
ಚೆನ್ನೈ, ಏಪ್ರಿಲ್ 23: 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಡಿಎಂಕೆ ಸೋಲಿಸಲು ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಮಾಡಿಕೊಂಡಿವೆ. ಬಿಜೆಪಿ ಅಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರನ್ನು ಬದಲಾವಣೆ ಮಾಡಲಾಗಿದ್ದು, ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರವಹಿಸಿಕೊಂಡಿದ್ದಾರೆ. ಕೆ. ಅಣ್ಣಾಮಲೈಗೆ ಪಕ್ಷ ಯಾವ ಅಧಿಕಾರ ನೀಡಲಿದೆ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕೆ. ಅಣ್ಣಾಮಲೈಗೆ ರಾಷ್ಟ್ರಮಟ್ಟದ ಹುದ್ದೆಯನ್ನು ನೀಡಲಾಗುತ್ತದೆ ಎಂಬ ವರದಿಗಳ ನಡುವೆಯೇ ಅವರು ರಾಜ್ಯಸಭೆ ಚುನಾವಣೆಗೆ ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿದೆ. ಆಂಧ್ರ ಪ್ರದೇಶದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 29 ಕೊನೆಯ ದಿನವಾಗಿದೆ.

ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಟಿಡಿಪಿ-ಜನಸೇನಾ ಒಂದು ಸ್ಥಾನವನ್ನು ಬಿಜೆಪಿಗೆ ನೀಡಿವೆ. ಈ ಒಂದು ಟಿಕೆಟ್‌ಗಾಗಿ ಕೆ. ಅಣ್ಣಾಮಲೈ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಹೆಸರು ಕೇಳಿ ಬರುತ್ತಿದೆ. ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.
ರಾಜ್ಯಸಭಾ ಸದಸ್ಯರಾಗಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿಜಯಸಾಯಿ ರೆಡ್ಡಿ ಜನವರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ 2028ರ ತನಕ ಇದೆ. ಆದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ. ಈ ಸೀಟನ್ನು ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ-ಜನಸೇನಾ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿವೆ.
ವೈಎಸ್‌ಆರ್ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಈ ಹಿಂದೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಆಂಧ್ರ ಪ್ರದೇಶ ರಾಜ್ಯದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಟಿಡಿಪಿ ಸರಳ ಬಹುಮತ ಹೊಂದಿದೆ. ಆದ್ದರಿಂದ ಎರಡು ಸೀಟುಗಳನ್ನು ಪಕ್ಷ ನಿರಾಯಾಸವಾಗಿ ಗೆಲ್ಲಲಿದೆ.
ಅಮೇಥಿಯಲ್ಲಿ ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೋಲಿಸಿದ್ದ ಸ್ಮೃತಿ ಇರಾನಿ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈಗ ಸ್ಮೃತಿ ಇರಾನಿ ಆಂಧ್ರ ಪ್ರದೇಶದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತಮಿಳುನಾಡಿನ ಪ್ರಭಾವಿ ನಾಯಕ. ರಾಜ್ಯದಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯ ಕಾರಣ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದು, ಅವರಿಗೆ ಬೇರೆ ಸ್ಥಾನ ನೀಡಲು ಪಕ್ಷ ಚಿಂತನೆ ನಡೆಸಿದೆ.
2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅರಾವಕುರಿಚಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. 68,000ಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಅವರು ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.
ರಾಜ್ಯದಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಹಲವು ಹೋರಾಟಗಳನ್ನು ನಡೆಸಿದ್ದಾರೆ. ಆದರೆ ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಯ ಕಾರಣ ಎಐಎಡಿಎಂಕೆ ಪಕ್ಷದ ಬೇಡಿಕೆಯಂತೆ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications