2024 ರ ಚುನಾವಣೆಗಳಲ್ಲಿ ಜಗನ್‌ಗೆ ಕೈ ಹಿಡಿಯದ ಬಿಜೆಪಿ, ಜನರ ಬೆಂಬಲ ಕೇಳಿದ ಆಂಧ್ರ ಸಿಎಂ!
ಅಮರಾವತಿ, ಜೂನ್. 14: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) 2024 ರ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬೆಂಬಲವನ್ನು ಹೊಂದಿಲ್ಲದಿರಬಹುದು ಎಂಬ ಸುಳಿವು ನೀಡಿದ್ದಾರೆ.
ಜೂನ್ 12 ರಂದು ಪಲ್ನಾಡು ಜಿಲ್ಲೆಯ ಕ್ರೋಸೂರಿನಲ್ಲಿ ಶಾಲಾ ಮಕ್ಕಳಿಗೆ ಕಿಟ್‌ಗಳ ವಿತರಣೆಗೆ ಚಾಲನೆ ನೀಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ, ವೈಎಸ್‌ಆರ್‌ಸಿಪಿಗೆ ಬಿಜೆಪಿಯಂತಹ ರಾಜಕೀಯ ಪಕ್ಷಗಳ ಬೆಂಬಲ ಇಲ್ಲದಿರಬಹುದು ಎಂದು ಹೇಳಿದ್ದಾರೆ. ಕಳೆದ ಎರಡು ದಿನಗಳಲ್ಲಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಂತಹ ಬಿಜೆಪಿ ವರಿಷ್ಠರು ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರಿಂದ ಅವರ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ವಿರುದ್ಧ ಏಕಾಂಗಿಯಾಗಿ ರಾಜಕೀಯ ಹೋರಾಟ ನಡೆಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಪ್ರಮುಖ ವಿರೋಧ ಪಕ್ಷಕ್ಕೆ ಜೆಎಸ್‌ಪಿ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಕೆಲವು ಮಾಧ್ಯಮಗಳ ಬೆಂಬಲವಿದೆ. ಆದರೆ, ವೈಎಸ್‌ಆರ್‌ಸಿಪಿಗೆ ಬಿಜೆಪಿಯಿಂದ ಉತ್ತಮ ಬೆಂಬಲ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.
ಆಂಧ್ರಪ್ರದೇಶದ ಜನರನ್ನು ತಾನು ಯಾವಾಗಲೂ ನಂಬಿದ್ದೇನೆ ಎಂದು ಹೇಳಿದ ಜಗನ್ ಮೋಹನ್ ರೆಡ್ಡಿ ಚುನಾವಣೆಗೆ ಜನರ ಬೆಂಬಲ ಕೋರಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ವೈಎಸ್‌ಆರ್‌ಸಿಪಿ ಸರ್ಕಾರ ಉತ್ತಮವಾಗಿದೆ ಎಂದು ಜನರು ನಂಬಿದ್ದರೆ, ವೈಎಸ್‌ಆರ್‌ಸಿಪಿಗೆ ಮತ ನೀಡಿ ಎಂದು ಸಿಎಂ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ವಾಗ್ದಾಳಿ
"ಟಿಡಿಪಿ ರಾಷ್ಟ್ರೀಯ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ಬಡ ಮಕ್ಕಳ ಕೈಯಲ್ಲಿ ಟ್ಯಾಬ್‌ಗಳನ್ನು ನೋಡುವುದನ್ನು ಸಹಿಸುವುದಿಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಮತದಾರರಾಗದ ಕಾರಣ ಮಕ್ಕಳ ಕಡೆ ಗಮನ ಹರಿಸಿಲ್ಲ. ಇಂದು ವಿದ್ಯಾಕಾಣುಕ ಕಿಟ್ ವಿತರಣೆಯನ್ನು ಹಬ್ಬದಂತೆ ಆಚರಿಸುತ್ತಿದ್ದೇವೆ. ನಮ್ಮ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ರಾಜ್ಯದ ಭವಿಷ್ಯವಾಗಿರುವ ನಮ್ಮ ಮಕ್ಕಳಿಗಾಗಿ ನಾವು ಹಣ ವೆಚ್ಚ ಮಾಡಲು ಬಯಸುತ್ತೇವೆ" ಎಂದು ಮುಖ್ಯಮಂತ್ರಿ ಜಗನ್ ಚಂದ್ರಬಾಬು ನಾಯ್ಡು ವಿರುದ್ಧ ಹರಿಹಾಯ್ದಿದ್ದಾರೆ.

"ಚಂದ್ರಬಾಬು ನಾಯ್ಡು ಅವರು 14 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರೂ, ಈಗ ರಾಯಲಸೀಮಾ ಪ್ರದೇಶವನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಪರವಾಗಿ ಘೋಷಣೆಗಳನ್ನು ಮಾಡುತ್ತಿದ್ದಾರೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ಈ ಪ್ರದೇಶಕ್ಕಾಗಿ ಮತ್ತು ಈ ಸಮುದಾಯಗಳಿಗಾಗಿ ಏನು ಮಾಡಿದ್ದಾರೆ..?. ಟಿಡಿಪಿ ಅಧ್ಯಕ್ಷರಿಗೆ ಅಂತಹ ಉದಾರ ಹೃದಯವಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ.
'ಚಂದ್ರಬಾಬು ನಾಯ್ಡು ಬಂಡವಾಳಶಾಹಿ ಮನಸ್ಥಿತಿಯನ್ನು ಹೊಂದಿದ್ದಾರೆ. ಮಹಿಳೆಯರು, ರೈತರು, ಎಸ್‌ಸಿಗಳು, ಎಸ್‌ಟಿಗಳು, ಬಿಸಿಗಳು, ಅಲ್ಪಸಂಖ್ಯಾತರು ಮತ್ತು ಇಬಿಸಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಅವರು ವಂಚಿಸಿದ್ದಾರೆ. ನೀವು ಈಗ ಪಡೆಯುತ್ತಿರುವ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಅವರು ಎಂದಿಗೂ ಪ್ರಯತ್ನಿಸಲಿಲ್ಲ. 14 ವರ್ಷಗಳ ಕಾಲ ರಾಜ್ಯವನ್ನು ಆಳಿದರೂ ಅವರು ಯಾವುದೇ ಸಾಧನೆ ಮಾಡಿಲ್ಲ. ಜನರು ಅವರನ್ನು ನಂಬುವುದಿಲ್ಲ" ಎಂದು ಮುಖ್ಯಮಂತ್ರಿ ಹೇಳಿದ್ದಾರೆ.












Click it and Unblock the Notifications