ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೆಸ್ಸೆಸ್ ಬೆಂಬಲಿತ ಅಭ್ಯರ್ಥಿಯೇ ಮಣಿಪುರದ ಮುಂದಿನ ಸಿಎಂ!

|
Google Oneindia Kannada News

ನವದೆಹಲಿ, ಮಾರ್ಚ್ 20: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಇನ್ನೇನು ಘೋಷಣೆಯಾಗಲಿದೆ. ಹಾಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಪ್ರಮುಖ ಅಭ್ಯರ್ಥಿಯನ್ನಾಗಿಸಿಕೊಂಡು ಬಿಜೆಪಿ ಚುನಾವಣೆ ಎದುರಿಸಿತ್ತು. ಆದರೆ, ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಗುಟ್ಟನ್ನು ಹೈಕಮಾಂಡ್ ಬಿಟ್ಟುಕೊಟ್ಟಿಲ್ಲ. ಸದ್ಯಕ್ಕೆ ಲಭ್ಯವಾದ ಮಾಹಿತಿಯಂತೆ ಸಿಎಂ ಸ್ಥಾನದ ರೇಸಿನಲ್ಲಿ ಬಿರೇನ್ ಸಿಂಗ್, ಬಿಸ್ವಜಿತ್ ಸಿಂಗ್ ಜೊತೆಗೆ ಮತ್ತೊಬ್ಬ ಅಭ್ಯರ್ಥಿ ಹೆಸರು ಸೇರಿಕೊಂಡಿದೆ. ಆರೆಸ್ಸೆಸೆ ಬೆಂಬಲಿತ ಈ ಅಭ್ಯರ್ಥಿಯೇ ಮುಂದಿನ ಸಿಎಂ ಆಗುವ ಸಾಧ್ಯತೆ ಹೆಚ್ಚಿದೆ ಎಂಬ ಸುದ್ದಿಯೂ ಇದೆ.

ಮಣಿಪುರದ ಸಿಎಂ ಆಗಿ ಮತ್ತೊಂದು ಅವಧಿಗೆ ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಲ್ಲರೂ ಅಂದುಕೊಂಡಿದ್ದ ಸಂದರ್ಭದಲ್ಲೇ ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.

ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂತು ಹೊಸ ಹೆಸರು! ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂತು ಹೊಸ ಹೆಸರು!

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ಮೂರನೇ ಸ್ಪರ್ಧಿಯಾಗಿ ಹೊರಹೊಮ್ಮಿರುವ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಬಹುತೇಕ ಪಕ್ಕಾ ಆಗಲಿದ್ದು, ಭಾನುವಾರ ಸಂಜೆ ವೇಳೆಗೆ ಅಧಿಕೃತ ಪ್ರಕಟಣೆ ಹೊರ ಬರುವ ನಿರೀಕ್ಷೆಯಿದೆ.

BJP may pick RSS-Backed Leader as Manipur new Chief Minister

2017 ರಲ್ಲಿಯೇ, ಬಿಸ್ವಜಿತ್ ಸಿಂಗ್ ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿದ್ದ ತೊಂಗಂ ಬಿಸ್ವಜಿತ್ ಸಿಂಗ್ ಅವರು ಎನ್ ಬಿರೇನ್ ಸಿಂಗ್ ಅವರನ್ನು ಸಿಎಂ ಸ್ಥಾನಕ್ಕೆ ಬೆಂಬಲಿಸಿದ್ದರು. ನಾಲ್ಕು ಬಾರಿ ಶಾಸಕರಾಗಿರುವ ಬಿಸ್ವಜಿತ್ ಸಿಂಗ್ ಅವರು ಗಡಿ ರಾಜ್ಯದಲ್ಲಿ ಮೊದಲ ಬಿಜೆಪಿ ನೇತೃತ್ವದ ಸರ್ಕಾರವನ್ನು ರಚಿಸಲು 2017 ರಲ್ಲಿ ನಾಗಾ ಪೀಪಲ್ಸ್ ಫ್ರಂಟ್ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿಯೊಂದಿಗೆ ಬಿಜೆಪಿಯ ಮೈತ್ರಿಯನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವೀಕ್ಷಕರಾಗಿ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಸಹ ವೀಕ್ಷಕರಾಗಿ ನೇಮಿಸಲಾಗಿದೆ. ವೀಕ್ಷಕರ ಸಲಹೆ ಪಡೆದುಕೊಂಡಿರುವ ಹೈಕಮಾಂಡ್ ನಿನ್ನೆ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು ಒಂದು ಸುದ್ದಿನ ಮಾತುಕತೆ ನಡೆಸಿದೆ. ಬಿರೇನ್ ಸಿಂಗ್, ಬಿಸ್ವಜಿತ್ ಸಿಂಗ್ ಕೂಡಾ ಒಂದು ಸುತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಸದ್ಯ ಎಲ್ಲಾ ಪ್ರಮುಖ ನಾಯಕರು ಇಂಫಾಲಕ್ಕೆ ಮರಳಿದ್ದು, ನಿರ್ಮಲಾ ಹಾಗೂ ಕಿರಣ್ ರಿಜಿಜು ಅವರು ಸಿಎಂ ಯಾರು ಎಂಬುದನ್ನು ಘೋಷಿಸಲಿದ್ದಾರೆ.

ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ. 2022ರ ವಿಧಾನಸಭೆ ಫಲಿತಾಂಶ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.

"ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಬಿಜೆಪಿ ಪ್ರಜಾಪ್ರಭುತ್ವ ಪಕ್ಷವಾಗಿದೆ ಮತ್ತು ಹೈಕಮಾಂಡ್ ನಾಯಕತ್ವವು ಇದನ್ನು (ಮುಖ್ಯಮಂತ್ರಿ ಸಮಸ್ಯೆಯನ್ನು) ನಿರ್ಧರಿಸುತ್ತದೆ" ಎಂದು ಬಿಸ್ವಜಿತ್ ಸಿಂಗ್ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
A third contender backed by the BJP's ideological mentor Rashtriya Swayamsevak Sangh for the Chief Minister's seat has emerged in Manipur. The RSS-backed leader, Speaker in the previous assembly Yumnam Khemchand Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X