ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ, ಹೇಳಿದ್ದೇನು?

ಪಾಕಿಸ್ತಾನದ ಉಗ್ರರ ವಿರುದ್ಧ ನಡೆದ ಆಪರೇಷನ್‌ ಸಿಂಧೂರ್ ಕಾರ್ಯಾಚರಣೆಯ ಭಾಗವಾಗಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಬಿಜೆಪಿ ಸಚಿವರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ. ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿ ಕಾಶ್ಮೀರದಲ್ಲಿ ಉಗ್ರ ನೆಲೆಯನ್ನು ಗುರಿಯಾಗಿಸಿ ಸೇನೆ ನಡೆಸಿದ ಆಪರೇಷನ್‌ ಸಿಂದೂರ್‌ ಬಳಿಕ ಮಾಧ್ಯಮಗೋಷ್ಠಿಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಮಧ್ಯಪ್ರದೇಶದ ಸಚಿವರೊಬ್ಬರು ನಾಲಿಗೆ ಹರಿಬಿಟ್ಟು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ್‌ದ ಮೂಲಕ ತಿರುಗೇಟು ನೀಡಿದೆ. ಆಪರೇಷನ್‌ ಸಿಂಧೂರ ಹಾಗೂ ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡುತ್ತಾ ಸಚಿವ ಕುನ್ವರ್ ವಿಜಯ್ ಶಾ ಸೋಫಿಯಾ ಖುರೇಷಿ ಬಗ್ಗೆ ಆಕ್ಷೇಪನಾರ್ಹ ಹೇಳಿಕೆ ನೀಡಿದ್ದಾರೆ. ಸೋಫಿಯಾ ಖುರೇಷಿಯನ್ನು ಭಯೋತ್ಪಾದಕ ಸಹೋದರಿ ಎಂದು ಕರೆಯುವ ಮೂಲಕ ಭಾರೀ ವಿವಾದಕ್ಕೀಡಾಗಿದ್ದಾರೆ. ವಿಜಯ್ ಶಾ ಅವರ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪ್ರತಿಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.

BJP Minister s Pak remark for Colonel Sofiya Qureshi backfires What he said

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕ ವಿಜಯ್‌ ಶಾ ಮಾತನಾಡಿದ, ಉಗ್ರರು ಭೀಕರ ದಾಳಿ ಮಾಡುವ ಮೂಲಕ ನಮ್ಮ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ್ದರು. ನಾವು ಅವರ ಸಹೋದರಿಯನ್ನೇ ಪಾಠ ಕಲಿಸು ಕಳುಹಿಸಿದೆವು. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಇದಕ್ಕೆ ಪ್ರತಿಯಾಗಿ ಮೋದಿ ಜಿ ಅವರ ಸಹೋದರಿಯನ್ನೇ ಕಳುಹಿಸಿದರು. ನಮ್ಮ ಸಮುದಾಯದ ಸಹೋದರಿಯರನ್ನು ವಿಧವೆಯರನ್ನಾಗಿ ಮಾಡಿದರೆ, ನಿಮ್ಮ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾರೆ ಎಂಬ ಸಂದೇಶವನ್ನು ಕಳುಹಿಸಲು ಮೋದಿ ಉಗ್ರರ ಸಮುದಾಯದ ಸಹೋದರಿಯನ್ನೇ ಕಳುಹಿಸಿದ್ದಾರೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಾವಿತ್ರಿ ಠಾಕೂರ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ನಾಯಕರು ವೇದಿಕೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಇನ್ನೂ ಬಿಜೆಪಿ ನಾಯಕ ವಿಜಯ್‌ ಶಾ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ವಿಜಯ್‌ ಶಾ ಹೇಳಿಕೆಯನ್ನ ಕಾಂಗ್ರೆಸ್‌ ಟ್ವೀಟರ್‌ನಲ್ಲಿ ಹಂಚಿಕೊಂಡಿದೆ. ಅಲ್ಲದೇ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ ಮತ್ತು ವಿಜಯ್‌ ಶಾ ಅವರನ್ನು ತಕ್ಷಣ ಜಾರಿಗೆ ಬರುವಂತೆ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವರೊಬ್ಬರು ನಮ್ಮ ಧೈರ್ಯಶಾಲಿ ಮಗಳು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅತ್ಯಂತ ಅವಮಾನಕರ, ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದಕ್ಕೆ ಮಂಗಳವಾರ ಕ್ಷಮೆ ಯಾಚಿಸಿದ್ದು, ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿರುವ ವಿಜಯ್ ಶಾ, ನಾನು ದೇವರಲ್ಲ, ನಾನು ಕೂಡ ಮನುಷ್ಯ. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನಾನು 10 ಬಾರಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+