ಯತ್ನಾಳ್ ಗೆ 60 ನೇ ವರ್ಷದ ಜನ್ಮದಿನ: ವಿಜಯೇಂದ್ರ ಶುಭ ಹಾರೈಸಿದ್ದು ಹೀಗೆ
ಬೆಂಗಳೂರು, ಡಿಸೆಂಬರ್ 14: ಬಿಜೆಪಿ ವಿಜಯಪುರ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಅವರ 60 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶುಭಾಶಯ ಕೋರಿದ್ದಾರೆ.
ಮಾಜಿ ಕೇಂದ್ರ ಸಚಿವರು, ವಿಜಯಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ @BasanagoudaBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.💐
— Vijayendra Yediyurappa (@BYVijayendra) December 13, 2023
ಪಕ್ಷದ ಹಿರಿಯ ಶಾಸಕರಾಗಿರುವ ತಮಗೆ ಭಗವಂತ ಉತ್ತಮ ಆಯುರಾರೋಗ್ಯ ಕರುಣಿಸಿ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಹೆಚ್ಚಿನ ಶಕ್ತಿಯನ್ನು ದಯಪಾಲಿಸಲೆಂದು ಹಾರೈಸುತ್ತೇನೆ.@BasanagoudaBJP pic.twitter.com/KJ9UqPXY90
ಹೌದು, ಬಿಜೆಪಿ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹುಟ್ಟು ಹಬ್ಬಕ್ಕೆ ಟ್ವೀಟ್ ಮೂಲಕ ಶುಭಾಶಯ ಸಂದೇಶ ಪ್ರಕಟಿಸಿರುವ ಬಿ ವೈ ವಿಜಯೇಂದ್ರ ಅವರು, ಮಾಜಿ ಕೇಂದ್ರ ಸಚಿವರು, ವಿಜಯಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಪಕ್ಷದ ಹಿರಿಯ ಶಾಸಕರಾಗಿರುವ ತಮಗೆ ಭಗವಂತ ಉತ್ತಮ ಆಯುರಾರೋಗ್ಯ ಕರುಣಿಸಿ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಹೆಚ್ಚಿನ ಶಕ್ತಿಯನ್ನು ದಯಪಾಲಿಸಲೆಂದು ಹಾರೈಸುತ್ತೇನೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ನೂತನ ರಾಜ್ಯಾಧ್ಯಕ್ಷರಿಗೆ ಶುಭ ಕೋರದ ಯತ್ನಾಳ್
ಹೌದು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ರಾಜ್ಯದ ನಾಯಕರು ಸೇರಿದಂತೆ ಕೇಂದ್ರ ಸಚಿವರುಗಳು, ಕಾರ್ಯಕರ್ತರು ಶುಭ ಕೋರಿದ್ರು. ಆದರೆ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ತುಟಿ ಬಿಚ್ಚಿಲ್ಲ ಎಂಬ ಪ್ರಶ್ನೆ ಹರಿದಾಡ್ತಿದೆ. ಪ್ರತಿಯೊಂದು ಚಿಕ್ಕಪುಟ್ಟ ವಿಚಾರಗಳಿಗೂ ಟ್ವೀಟ್ ಮಾಡುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶುಭಕೋರದೇ ಇರುವುದು ಸಾಕಷ್ಟು ಚರ್ಚೆಯಾಗಿತ್ತು.
ಈ ಹಿಂದೆ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಸಹ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಅವರು ಹಾಗೂ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಫುಲ್ ಸೈಲೆಂಟ್ ಆಗಿದ್ರು. ಅಲ್ಲದೇ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿದ ಬಳಿಕ ಮತ್ತೆ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ವಾಗ್ದಾಳಿಯನ್ನ ಮುಂದುವರೆಸಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರ ಹುದ್ದೆಗಳ ಆಯಸ್ಸು ಲೋಕಸಭೆ ಚುನಾವಣೆವರೆಗೆ ಮಾತ್ರ ಎಂದು ಬಸವನಗೌಡ ಪಾಟೀಲ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಟ್ವೀಟ್ ಮೂಲಕ ಕಿಡಿಕಾರಿದ್ರು, ವಿಜಯೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಎಷ್ಟೇ ಆರೋಪಗಳನ್ನ ಮಾಡಿದರು ಸಹ ವಿಜಯೇಂದ್ರ ಅವರು ಯತ್ನಾಳ್ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.












Click it and Unblock the Notifications