ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ವಿರುದ್ಧ ಹಕ್ಕುಚ್ಯುತಿ ನಿರ್ಣಯ
ನವದೆಹಲಿ, ಫೆಬ್ರವರಿ 10: ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯೊಬ್ಬರ ಕುರಿತು ಸಂಸತ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧರಿಸಿದೆ.
ಲೋಕಸಭೆಯಲ್ಲಿ ಮೋಯಿತ್ರಾ ನೀಡಿದ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಸಂಸತ್‌ನಿಂದ ಅವರನ್ನು ವಜಾಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ರಾಜಸ್ಥಾನದ ಪಾಲಿಯ ಬಿಜೆಪಿ ಸಂಸದ ಮತ್ತು ಮಾಜಿ ಕಾನೂನು ಖಾತೆ ರಾಜ್ಯ ಸಚಿವ ಪಿಪಿ ಚೌಧರಿ ಅವರು ಮೋಯಿತ್ರಾ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಮನವಿ ಸಲ್ಲಿಸಿದ್ದಾರೆ.
ಮಾಜಿ ಸಿಜೆಐ ರಂಜನ್ ಗೊಗೊಯ್ ಅವರನ್ನು ಗುರಿಯನ್ನಾಗಿಸಿ ಹೇಳಿಕೆ ನೀಡಿದ್ದಕ್ಕಾಗಿ ಮಹುವಾ ಮೋಯಿತ್ರಾ ಅವರು ಕ್ರಮ ಎದುರಿಸಲೇಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ಹೇಳಿದ್ದರು.

ಗಂಭೀರ ವಿಚಾರ- ಪ್ರಲ್ಹಾದ ಜೋಶಿ
'ರಾಮ ಮಂದಿರ ತೀರ್ಪಿನ ವಿಚಾರವನ್ನು ಪ್ರಸ್ತಾಪಿಸಿ, ಆಗಿನ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಇತರೆ ವಿಚಾರಗಳನ್ನು ಎಳೆದು ತಂದಿರುವುದು ಗಂಭೀರ ವಿಚಾರವಾಗಿದೆ. ಈ ಕುರಿತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಚಿಂತನೆ ನಡೆಸಿದ್ದೇವೆ' ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದರು.

ಪವಿತ್ರ ಗೋವು ಪವಿತ್ರವಾಗಿ ಉಳಿದಿಲ್ಲ
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ್ದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ, ಮಾಜಿ ಸಿಜೆಐ ವಿರುದ್ಧದ ಲೈಂಗಿಕ ದುರ್ನಡತೆ ಆರೋಪಗಳನ್ನು ಉಲ್ಲೇಖಿಸಿದ್ದರು. 'ನ್ಯಾಯಾಂಗ ಎಂಬ ಪವಿತ್ರ ಗೋವು ಈಗ ಪವಿತ್ರವಾಗಿ ಉಳಿದಿಲ್ಲ' ಎಂದು ಟೀಕಿಸಿದ್ದರು.

ರಂಜನ್ ಗೊಗೊಯ್ ವಿರುದ್ಧ ಪರೋಕ್ಷ ವಾಗ್ದಾಳಿ
'ಹಾಲಿ ಸಿಜೆಐ ಒಬ್ಬರು ಲೈಂಗಿಕ ಕಿರುಕುಳದ ಆರೋಪ ಎದುರಿಸಿದಾಗ, ತಮ್ಮ ವಿಚಾರಣೆಯನ್ನು ತಾವೇ ಮಾಡಿದಾಗ, ತಮ್ಮನ್ನು ತಾವೇ ದೋಷಮುಕ್ತರನ್ನಾಗಿಸಿದಾಗ ಮತ್ತು ನಿವೃತ್ತರಾದ ಮೂರು ತಿಂಗಳೊಳಗೆ ಝೆಡ್ ಪ್ಲಸ್ ಭದ್ರತಾ ಸೌಲಭ್ಯದೊಂದಿಗೆ ಮೇಲ್ಮನೆಯ ನಾಮನಿರ್ದೇಶನವನ್ನು ಒಪ್ಪಿಕೊಂಡಾಗ ಅದು ಪವಿತ್ರವಾಗಿ ಉಳಿಯುವುದನ್ನು ನಿಲ್ಲಿಸಿತು' ಎಂದಿದ್ದರು.

ಸೌಗತ ರಾಯ್ ಬೆಂಬಲ
ಮೋಯಿತ್ರಾ ಅವರು ಆರೋಪಗಳನ್ನು ಉಲ್ಲೇಖಿಸಿದ್ದರೇ ವಿನಾ, ಯಾವುದೇ ವ್ಯಕ್ತಿಯನ್ನು ಅವರ ಹೆಸರಿನಿಂದ ಸೂಚಿಸಿರಲಿಲ್ಲ. ಅಲ್ಲದೆ, ಮಹುವಾ ಅವರ ಹೇಳಿಕೆಯು ಮಾಜಿ ಸಿಜೆಐ ಕುರಿತಾಗಿದ್ದೇ ವಿನಾ ಹಾಲಿ ಸಿಜೆಐ ಬಗ್ಗೆ ಅಲ್ಲ ಎಂದು ಟಿಎಂಸಿ ಸಂಸದ ಸೌಗತ ರಾಯ್ ಬೆಂಬಲಕ್ಕೆ ನಿಂತಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications