ಜನವರಿ 16-17 ರಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ನವದೆಹಲಿ, ಜ. 03: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜನವರಿ 16 ಮತ್ತು 17 ರಂದು ದೆಹಲಿಯಲ್ಲಿ ನಡೆಯಲಿದೆ.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂಬರುವ ರಾಜ್ಯ ಚುನಾವಣೆಗಳು, ಜಿ 20 ಕಾರ್ಯಕ್ರಮದ ಸಿದ್ಧತೆಗಳು, 2024 ರ ಲೋಕಸಭೆ ಚುನಾವಣೆ ಮತ್ತು ಪಕ್ಷದ ಅಧ್ಯಕ್ಷರ ಅವಧಿಯ ವಿಸ್ತರಣೆ ಬ್ಗಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಭಾರತೀಯ ಜನತಾ ಪಕ್ಷದ ಮೂಲಗಳ ಪ್ರಕಾರ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಮುಂಬರುವ ರಾಜ್ಯ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸುತ್ತಾರೆ ಎಂದಿದೆ. ಮುಂದಿನ ವರ್ಷದ ಲೋಕಸಭೆ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಸದಸ್ಯರು ಅವಲೋಕನ ಮಾಡಲಿದ್ದಾರೆ.

ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮೂರು ವರ್ಷಗಳ ಅವಧಿ ಇದೇ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಪಕ್ಷದ ಅಧ್ಯಕ್ಷರ ಅವಧಿ ವಿಸ್ತರಣೆ ಬಗ್ಗೆಯೂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಕೆಲವರ ಪ್ರಕಾರ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಸಾಧ್ಯತೆ ಕೂಡ ದಟ್ಟವಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನಲ್ಲಿ ಕೊನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಪಕ್ಷವು ವರ್ಷಕ್ಕೆ ಎರಡು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗಳನ್ನು ನಡೆಸುತ್ತದೆ. ಮೊದಲ ತ್ರೈಮಾಸಿಕದಲ್ಲಿ ಒಂದು ಸಭೆ ಮತ್ತು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಮತ್ತೊಂದು ಸಭೆ ನಡೆಸುತ್ತದೆ.
ಇನ್ನು, 2024 ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಪಕ್ಷದ "ಲೋಕಸಭಾ ಪ್ರವಾಸ" ಕಾರ್ಯಕ್ರಮದ ಭಾಗವಾಗಿ ಈ ತಿಂಗಳು 11 ರಾಜ್ಯಗಳಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅಮಿತ್ ಶಾ ಜನವರಿ 16 ರಂದು ಉತ್ತರ ಪ್ರದೇಶದಲ್ಲಿ, ಜನವರಿ 17 ರಂದು ಪಶ್ಚಿಮ ಬಂಗಾಳದಲ್ಲಿ ಪ್ರವಾಸದಲ್ಲಿರಲಿದ್ದಾರೆ.












Click it and Unblock the Notifications