BJP Manifesto: ಲೋಕಸಭಾ ಚುನಾವಣೆಗೆ ಮೋದಿ ‘ಗ್ಯಾರಂಟಿ’ ಅಸ್ತ್ರ,: ಬಿಜೆಪಿ ಪ್ರಣಾಳಿಕೆ ಬಿಡುಗಡೆ- ಜನತೆಗೆ ಕೊಟ್ಟ ಭರವಸೆ ಏನು?
ನವದೆಹಲಿ, ಏಪ್ರಿಲ್ 14: 2024 ರ ಲೋಕಸಭಾ ಚುನಾವಣೆ ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ಈಗಾಗಲೇ ಹಲವು ಗ್ಯಾರಂಟಿ ಘೋಷಣೆಯ ಮೂಲಕ ದೇಶದ ಜನತೆಗೆಗೆ ಹಲವು ಭರವಸೆಯನ್ನ ನೀಡಿದ್ದು, ಇದೀಗ ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರವನ್ನ ಪ್ರಯೋಗಿದ್ದಾರೆ.
ಹೌದು, 2024ರ ಲೋಕಸಭೆ ಚುನಾವಣೆ ಗೆಲ್ಲಲು ಕಮಲ ಪಡೆ ಸರ್ವ ಸನ್ನದ್ಧವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಡಾ. ಬಿಆರ್ ಅಂಬೇಡ್ಕರ್ ಜನ್ಮದಿನದಂದು (ಭಾನುವಾರ) ಬಿಜೆಪಿ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಬಿಜೆಪಿಯು ಸಂಕಲ್ಪ ಪತ್ರ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಯುವಕರು, ರೈತರು, ಮಹಿಳೆಯರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಘೋಷಿಸಿದೆ. ಮೀನುಗಾರರಿಗೆ ವಿಮಾ ಸೌಲಭ್ಯಗಳನ್ನು ಒದಗಿಸುವುದಾಗಿ ಮತ್ತು ಧಾನ್ಯಗಳನ್ನು ಸೂಪರ್‌ಫುಡ್‌ಗಳಾಗಿ ಅಭಿವೃದ್ಧಿಪಡಿಸುವುದು, ಏಕಲವ್ಯ ಶಾಲೆ ತೆರೆಯುವುದು ಹಾಗೂ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಕಲ್ಯಾಣಕ್ಕಾಗಿ ಕೆಲಸ ಮಾಡುವ ಭರವಸೆಯನ್ನೂ ಬಿಜೆಪಿ ನೀಡಿದೆ.
ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ
* 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ
* 70 ವರ್ಷ ದಾಟಿದವರಿಗಾಗಿ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ, ಎಲ್ಲರಿಗೂ ಉಚಿತ ಚಿಕಿತ್ಸೆ
*ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ
* ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ
* ಪೈಪ್‌ಲೈನ್ ಮೂಲಕ ಅಡುಗೆ ಅನಿಲ ಪೂರೈಕೆ
* ಕೋಟ್ಯಂತರ ಕುಟುಂಬಗಳಿಗೆ ಸೋಲಾರ್ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ
* ಮುದ್ರಾ ಯೋಜನೆ ಅಡಿಯಲ್ಲಿ ಸಿಗುವ ಸಾಲದ ಮೊತ್ತ 20 ಲಕ್ಷ ರೂ.ಗೆ ಏರಿಕೆ
* ಅಮೃತ್ ಭಾರತ್, ವಂದೇ ಭಾರತ್ ರೈಲುಗಳ ಸಂಖ್ಯೆ ಹೆಚ್ಚಳ
* ಮಂಗಳಮುಖಿಯರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ಉಚಿತ ಚಿಕಿತ್ಸೆ
* ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ
* ರೈತರಿಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ
* ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು
*ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ
*ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ
*ದೇಶಾದ್ಯಂತ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು
* ಸಂತ ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ
* ಹೊಯ್ಸಳರು ಸೇರಿ ಪಾರಂಪರಿಕ ಸ್ಥಳಗಳನ್ನು ವಿಶ್ವದ ಟೂರಿಸಂ ಜತೆ ಜೋಡಣೆ
* ವಿಶೇಷ ಮೀನು ಸಾಕಣೆ, ಮುತ್ತು ಕೃಷಿಗೆ ವಿಶೇಷ ಆದ್ಯತೆ
* ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಮೀನುಗಾರರಿಗೆ ಯೋಜನೆ
* ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ
* ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್‌ಸಿ-ಎಸ್‌ಟಿಗೆ ಗೌರವ, ಜಾಗತಿಕ ಉತ್ಪಾದನಾ ಕೇಂದ್ರ ರಚಿಸಲು ಸಿದ್ಧತೆ
* ಪ್ರಪಂಚದಾದ್ಯಂತ ರಾಮಾಯಣ ಹಬ್ಬ, ಅಯೋಧ್ಯೆಯ ಅಭಿವೃದ್ಧಿ
* ಒಂದು ರಾಷ್ಟ್ರ, ಒಂದು ಚುನಾವಣೆ
* AI, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದಲ್ಲಿ ಅಭಿವೃದ್ಧಿ
#WATCH | On the release of party's election manifesto - 'Sankalp Patra' for Lok Sabha polls, PM Narendra Modi says, "The entire country waits for the BJP's 'Sankalp Patra'. There is a big reason behind it as in the last 10 years, the BJP has implemented every point of its… pic.twitter.com/BIPDnNtS0D
— ANI (@ANI) April 14, 2024
ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮೋದಿ ಹೇಳಿದ್ದೇನು?
75 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು. "ವಯೋವೃದ್ಧರ ದೊಡ್ಡ ಚಿಂತೆ ಎಂದರೆ ಅವರು ತಮ್ಮ ಕಾಯಿಲೆಗಳಿಗೆ ಹೇಗೆ ಚಿಕಿತ್ಸೆ ನೀಡುತ್ತಾರೆ ಎಂಬುದು. ಮಧ್ಯಮ ವರ್ಗದವರಿಗೆ ಈ ಕಾಳಜಿ ಇನ್ನಷ್ಟು ಗಂಭೀರವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯನ್ನು ವ್ಯಾಪ್ತಿಗೆ ತರಲಾಗುವುದು ಎಂದು ಬಿಜೆಪಿ ಈಗ 'ಸಂಕಲ್ಪ' ತೆಗೆದುಕೊಂಡಿದೆ ಎಂದು ಹೇಳಿದರು.
ಮುಂದಿನ ಐದು ವರ್ಷಗಳವರೆಗೆ ಉಚಿತ ಪಡಿತರ ಯೋಜನೆ ಮುಂದುವರಿಯುವುದು ನನ್ನ ಭರವಸೆ ಎಂದು ಪ್ರಧಾನಿ ಮೋದಿ ಹೇಳಿದರು. ಬಿಜೆಪಿ ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು ₹ 10 ಲಕ್ಷದಿಂದ ₹ 20 ಲಕ್ಷಕ್ಕೆ ಹೆಚ್ಚಿಸಲಿದೆ. "ಉದ್ಯಮ 4.0 ಯುಗಕ್ಕೆ ಅಗತ್ಯವಿರುವ ರೀತಿಯ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಇದು ಹೊಸ ಶಕ್ತಿಯಾಗಿ ಬಳಸಲ್ಪಡುತ್ತದೆ ಎಂದು ನನಗೆ ವಿಶ್ವಾಸವಿದೆ" ಎಂದು ಹೇಳಿದರು.
ಕೋಟ್ಯಂತರ ಕುಟುಂಬಗಳ ವಿದ್ಯುತ್ ಬಿಲ್ ಅನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಬಿಜೆಪಿ ಕೆಲಸ ಮಾಡಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದೇಶದಲ್ಲಿ ಇನ್ನೂ 3 ಬುಲೆಟ್ ರೈಲುಗಳು ಆರಂಭವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಮೂರು ರೀತಿಯ ವಂದೇ ಭಾರತ್ ರೈಲು ಪರಿಚಯಿಸಲಾಗುವುದು ಎಂದು ಮೋದಿ ಘೋಷಿಸಿದರು.
"ಬಿಜೆಪಿಯು ದೇಶದ ಮೂಲೆ ಮೂಲೆಗೂ ವಂದೇ ಭಾರತ್ ರೈಲುಗಳನ್ನು ವಿಸ್ತರಿಸಲಿದೆ. ವಂದೇ ಭಾರತ್‌ನ 3 ಮಾದರಿಗಳು ದೇಶದಲ್ಲಿ ಓಡಲಿವೆ - ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್‌ಕಾರ್ ಮತ್ತು ವಂದೇ ಭಾರತ್ ಮೆಟ್ರೋ. ಇಂದು ಅಹಮದಾಬಾದ್ ಮುಂಬೈ ಬುಲೆಟ್ ರೈಲಿನ ಕೆಲಸ ನಡೆಯುತ್ತಿದೆ. ಪೂರ್ಣಪ್ರಮಾಣದಲ್ಲಿದ್ದು, ಅದೇ ರೀತಿ ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಓಡಿಸಲಾಗುವುದು ಎಂದು ಮೋದಿ ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications