ಶಾಸಕ ಸ್ಥಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜೀನಾಮೆ
ಗಾಂಧಿನಗರ, ಆಗಸ್ಟ್ 9: ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಗುಜರಾತ್ ಶಾಸಕ ಸ್ಥಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜೀನಾಮೆ ನೀಡಿದ್ದಾರೆ.
ಅಮಿತ್ ಶಾ ಗುಜರಾತ್ ನ ನಾರಾಯಣಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಸ್ಪೀಕರ್ ಗೆ ಇಂದು ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಗುಜರಾತ್ ನಿಂದ ನಿನ್ನೆ ರಾಜ್ಯಸಭಾ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 46 ಮತಗಳನ್ನು ಪಡೆದು ಅಮಿತ್ ಶಾ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದೇ ಮೊದಲ ಬಾರಿಗೆ ಶಾ ಸಂಸತ್ ಸದಸ್ಯರಾಗಿದ್ದಾರೆ.
ಚಿತ್ರಗಳು : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಪ್ರವಾಸ












Click it and Unblock the Notifications