Get Updates
Get notified of breaking news, exclusive insights, and must-see stories!

ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ; ಯಾವ ನೈತಿಕತೆ ಇದೆ: ಬಿಜೆಪಿ ನಡೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 20: ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿ ನಾಯಕರ ನಡೆಗೆ ಗರಂ ಆಗಿದ್ದಾರೆ. ಬಿಜೆಪಿ ಅವರಿಗೆ ಯಾವ ನೈತಿಕತೆ ಇದೆ. ರಾಜ್ಯನಾ ಲೂಟಿ‌ ಹೊಡೆದು ಹಾಳು ಮಾಡಿ ಆರ್ಥಿಕವಾಗಿ ದಿವಾಳಿ ಮಾಡಿ ಹೋದರು ಎಂದು ಸಿದ್ದರಾಮಯ್ಯ ಅವರು ಗರಂ ಆಗಿದ್ದಾರೆ.

ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

BJP Protest On Cauvery Issue: Siddaramaiah lashed Out At BJP leaders

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ.

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ "ಉಳ್ಳವನೇ ಭೂಮಿ ಒಡೆಯ" ಎನ್ನುವಂತಾಗಿದೆ ಎಂದು ಕಿಡಿಕಾರಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು. ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+