ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಹಿಮಾಚಲ ಚುನಾವಣೆ, ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 19; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದೆ.

ಬುಧವಾರ ಬಿಜೆಪಿ 62 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೆರಾಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮಂಗಳವಾರ ಸಂಜೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಸಭೆಯ ಬಳಿಕ ಪಟ್ಟಿ ಬಿಡುಗಡೆ ಮಾಡಿದೆ.

Breaking: ಹಿಮಾಚಲ ಪ್ರದೇಶ ಚುನಾವಣೆಗೆ 46 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Breaking: ಹಿಮಾಚಲ ಪ್ರದೇಶ ಚುನಾವಣೆಗೆ 46 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಅನಿಲ್ ಶರ್ಮಾ ಮಂಡಿ ಕ್ಷೇತ್ರದಿಂದ, ಸತ್ಪಾಲ್ ಸಿಂಗ್ ಸತ್ತಿ ಉನಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಪಟ್ಟಿಯಲ್ಲಿ ತಿಳಿಸಲಾಗಿದೆ. ಇನ್ನೂ ಉಳಿದ ಕ್ಷೇತ್ರಗಳಿಗೆ ಮುಂದಿನ ವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಅಖಾಡಕ್ಕೆ ಎಲ್‌ಜೆಪಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಅಖಾಡಕ್ಕೆ ಎಲ್‌ಜೆಪಿ

bjp

ಹಿಮಾಚಲ ಪ್ರದೇಶದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು 25 ಅಕ್ಟೋಬರ್ ಕೊನೆಯ ದಿನವಾಗಿದೆ.

ಅಕ್ಟೋಬರ್ 29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ನವೆಂಬರ್ 12ಕ್ಕೆ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ- ಡಿ. 8ಕ್ಕೆ ಫಲಿತಾಂಶ ನವೆಂಬರ್ 12ಕ್ಕೆ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ- ಡಿ. 8ಕ್ಕೆ ಫಲಿತಾಂಶ

ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಿರೀಕ್ಷೆ ಮಾಡಲಾಗಿದೆ. ಎಎಪಿ ಸಹ ಚುನಾವಣಾ ಕಣಕ್ಕೆ ಇಳಿದಿದ್ದು, ಪಂಜಾಬ್ ಮಾದರಿಯಲ್ಲಿ ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.

1985ರಿಂದಲೂ ರಾಜ್ಯದಲ್ಲಿ ಒಂದು ಅವಧಿಗೆ ಬಿಜೆಪಿ ಮತ್ತೊಂದು ಅವಧಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿವೆ. ಪ್ರತಿ ಬಾರಿ ಚುನಾವಣೆ ನಡೆದಾಗಲೂ ವಿರೋಧ ಪಕ್ಷ ಅಧಿಕಾರಕ್ಕೆ ಬರುತ್ತದೆ. ಆದರೆ ಈ ಬಾರಿ ಆ ಸಂಪ್ರದಾಯ ಮುರಿಯುತ್ತೇವೆ ಎಂದು ಬಿಜೆಪಿ ವಿಶ್ವಾಸದಲ್ಲಿದೆ.

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನರಾ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್‌ಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಅವರು ಜನರಿಗೆ ತಿಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಸಮೀಕ್ಷೆಗಳು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿವೆ. ಆದರೆ ಏಪ್ರಿಲ್ ತಿಂಗಳಿನಲ್ಲಿಯೇ ಪ್ರಚಾರ ಕಾರ್ಯ ಆರಂಭಿಸಿರುವ ಕಾಂಗ್ರೆಸ್ ಈ ಬಾರಿ ಸರ್ಕಾರ ರಚನೆ ಮಾಡುತ್ತೇವೆ ಎಂಬ ಉತ್ಸಾಹದಲ್ಲಿದೆ.

English summary
BJP released a list of 62 candidates for the upcoming Himachal Pradesh assembly election 2022. Chief Minister Jairam Thakur to contest from Seraj.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X